ಸಾಮಾಜಿಕ ಜಾಲತಾಣಗಳಲ್ಲಿ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಸೆರೆ

ಮಂಗಳೂರು, ಆ. 11: ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ದಿವ್ಯ ಪ್ರಸಾದ್ (35) ಎಂದು ಗುರುತಿಸಲಾಗಿದೆ.
ಈತನನ್ನು ಬೆಂಗಳೂರಿನಲ್ಲಿ ಬಂಧಿಸಿದ ಕದ್ರಿ ಪೊಲೀಸರು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಎರಡು ವಾರಗಳ ಹಿಂದೆ ‘ಹಲೋ ಮಂತ್ರಿ’ ಕಾರ್ಯಕ್ರಮದ ಪೋಸ್ಟ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಲಾಗಿತ್ತು. ಆ ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್ ಭಾಗವಹಿಸಿದ್ದರು.
ಸಚಿವ ಖಾದರ್ ವಿರುದ್ಧ ದಿವ್ಯ ಪ್ರಸಾದ್ ಅವಹೇಳನಕಾರಿಯಾಗಿ ಪ್ರತಿಕ್ರಿಯೆ ನೀಡಿದ್ದರು. ಈ ಬಗ್ಗೆ ದಿವ್ಯ ಪ್ರಸಾದ್ ವಿರುದ್ಧ ಸಚಿವರ ಹಿತೈಷಿ ಬೊಳಿಯಾರ್‌ನ ಅಶ್ರಫ್ ಮೋನು ಎಂಬವರು ಕದ್ರಿ ಪೊಲೀಸರಿಗೆ ದೂರು ನೀಡಿದ್ದರು.
ಆರೋಪಿಯನ್ನು ಬಂಧಿಸಿರುವ ಕದ್ರಿ ಪೊಲೀಸರು ಸೆಕ್ಷನ್ 507 ಐಪಿಸಿ ಮತ್ತು 67 ಐಟಿ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





