ಅರೆ ವೈದ್ಯಕೀಯ ಕೋರ್ಸ್ಗೆ ಅರ್ಜಿ ಆಹ್ವಾನ
ಉಡುಪಿ, ಆ.11: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2017-18ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಅರೆ ವೈದ್ಯಕೀಯ(ಪ್ಯಾರಾ ಮೆಡಿಕಲ್) (ಡಿಎಂಎಲ್ಟಿ, ಡಿಎಸ್ಟಿ, ಡಿಓಟಿಟಿ, ಡಿಓಟಿ, ಡಿಡಿಎಂ ಹಾಗೂ ಡಿಡಿಟಿ) ಕೋರ್ಸುಗಳಿಗೆ ಆಯ್ಕೆ ಮಾಡಲು ಅರ್ಹ ಅ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ. ಆ.31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆಸಕ್ತ ಅ್ಯರ್ಥಿಗಳು ಇಲಾಖೆಯ ವೆಬ್ಸೈಟ್-www.sw.kar.nic.in-ನಲ್ಲಿ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಡುಪಿ (ದೂರವಾಣಿ: 0820-2574892) ಇವರನ್ನು ಸಂಪರ್ಕಿಸಬಹುದು ಎಂದು ಸವಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
Next Story