ಸಾಲಿಗ್ರಾಮ: ಫ್ಲೆಕ್ಸ್, ಬ್ಯಾನರ್ ತೆರವು
ಉಡುಪಿ, ಆ.11: ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ್ನು ಸ್ವಚ್ಛ, ಸುಂದರ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಅನಧಿಕೃತ ಫಲಕ/ಕಟೌಟ್, ಫ್ಲೆಕ್ಸ್ ಬ್ಯಾನರ್ ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ.
ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಫ್ಲೆಕ್ಸ್/ಕಟೌಟ್/ಬಂಟಿಂಗ್ಸ್/ಪೋಸ್ಟರ್‌ಗಳನ್ನು ಅಳವಡಿಸಲು ಅವಕಾಶವಿಲ್ಲ. ನಗರದ ಸ್ವಚ್ಛತೆ ಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ಲೆಕ್ಸ್ ಬ್ಯಾನರ್, ಕಟೌಟ್, ಪೋಸ್ಟರ್, ಬಂಟಿಂಗ್ಸ್ ಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹಾಕದಂತೆ ಕೋರಲಾಗಿದೆ. ಅದಲ್ಲದೆ ಮುಂಬರುವ ದಿನಗಳಲ್ಲಿ ಕೇವಲ ಬಟ್ಟೆ ಬ್ಯಾನರುಗಳಿಗೆ ಮಾತ್ರ ಪಟ್ಟಣ ಪಂಚಾಯತ್ ಅನುಮತಿಯನ್ನು ನೀಡಲಿದ್ದು, ಈ ಬಟ್ಟೆ ಬ್ಯಾನರ್‌ಗಳಿಗೆ ಪ.ಪಂ.ನಿಂದ ಅನುಮತಿ ಪಡೆದುಕೊಂಡು ಅಳವಡಿಸುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





