ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾಗಿ ಎ. ರಾಮಚಂದ್ರ ಶೆಟ್ಟಿ ನೇಮಕ

ಮಂಗಳೂರು, ಆ. 11: ಯೆನೆಪೋಯ ಸಮೂಹ ಸಂಸ್ಥೆಗಳ ನಿರ್ದೇಶಕ ಮತ್ತು ಕೊಡಗಿನ ಶುಂಠಿಕೊಪ್ಪದ ಕಾಫಿ ಪ್ಲಾಂಟರ್ ಆಗಿರುವ ಎ. ರಾಮಚಂದ್ರ ಶೆಟ್ಟಿ ಕೊಡ್ಮಾನ್‌ಗುತ್ತು ಅವರನ್ನು ರಾಜ್ಯ ವನ್ಯಜೀವಿ ಮಂಡಳಿ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಮಂಡಳಿಯ ಉಪಾಧ್ಯಕ್ಷ ಹಾಗೂ ಸಚಿವ ಬಿ. ರಮಾನಾಥ ರೈ ಅವರು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾಗಿ ನೇಮಕ ಮಾಡಿದ್ದಾರೆ.
ಎ. ರಾಮಚಂದ್ರ ಶೆಟ್ಟಿ ಕೊಡ್ಮಾನ್‌ಗುತ್ತು ಅವರು 2002ರಲ್ಲಿ ಆಗಿನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರ ನೇತೃತ್ವದ ಸರಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಅಲ್ಲದೆ, 2015ರಲ್ಲಿ ಕರ್ನಾಟಕ ಸರಕಾರದಿಂದ ಕೊಡಗು ಜಿಲ್ಲೆಯ ಗೌರವ ವನ್ಯಜೀವಿ ಪರಿಪಾಲಕರಾಗಿ ಈ ವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದರು.
Next Story





