Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಠ್ಯದಲ್ಲಿ ಸೈನಿಕರ ವಿರೋಧಿ ಲೇಖನ :...

ಪಠ್ಯದಲ್ಲಿ ಸೈನಿಕರ ವಿರೋಧಿ ಲೇಖನ : ಎಬಿವಿಪಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Aug 2017 5:57 PM IST
share
ಪಠ್ಯದಲ್ಲಿ ಸೈನಿಕರ ವಿರೋಧಿ ಲೇಖನ : ಎಬಿವಿಪಿ ಪ್ರತಿಭಟನೆ

ಪುತ್ತೂರು,ಆ.12: ಮಂಗಳೂರು ವಿಶ್ವ ವಿದ್ಯಾನಿಲಯದ ವ್ಯಾಪ್ತಿಯ ಬಿಸಿಎ ಕನ್ನಡ ಪಠ್ಯಪುಸ್ತಕದಲ್ಲಿ ಸೈನಿಕರ ಅವಹೇಳನ ಮಾಡುವ, ದೇಶಪ್ರೇಮವನ್ನೇ ಪ್ರಶ್ನೆ ಮಾಡುವ ಲೇಖನವನ್ನು ಅಳವಡಿಸಲಾಗಿದ್ದು, ಈ ಲೇಖನವನ್ನು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಶನಿವಾರ ಪುತ್ತೂರಿನ ನೆಹರು ನಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಲೇಖನವನ್ನು ಪಠ್ಯ ಪುಸ್ತಕದಿಂದ ಕೈಬಿಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ಮಂಗಳೂರು ವಿಶ್ವ ವಿದ್ಯಾನಿಲಯದ ಪ್ರಥಮ ವರ್ಷದ ಬಿಸಿಎ ಕನ್ನಡ ಪಾಠದಲ್ಲಿ `ಯುದ್ದ ಒಂದು ಉದ್ಯಮ' ಎಂಬ ಲೇಖನವನ್ನು ಪಠ್ಯವಾಗಿ ಅಳವಡಿಸಲಾಗಿದೆ. ಈ ಬರಹ ವಿದ್ಯಾರ್ಥಿಗಳಿಗೆ ಓದುವುದಕ್ಕೆ ಸೂಕ್ತವಲ್ಲ, ಹೀಗಾಗಿ ತಕ್ಷಣವೇ ಈ ಪಾಠವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮುಖಂಡ ಸಂದೇಶ್ ಅವರು ವಿದ್ಯಾರ್ಥಿಗಳಿಗೆ ದೇಶಪ್ರೇಮದ ಬಗ್ಗೆ ತಿಳಿಸುವ ಪಾಠಬೇಕಾಗಿತ್ತು, ಅದರ ಬದಲಾಗಿ ಲೇಖಕರು ದೇಶದ ಬಗ್ಗೆ, ದೇಶಪ್ರೇಮದ ಬಗ್ಗೆ , ಸೈನಿಕರ ಬಗ್ಗೆ ಇರುವಂತಹ ನಂಬಿಕೆಯನ್ನೇ ಪ್ರಶ್ನೆ ಮಾಡಿರುವುದು  ಸರಿಯಲ್ಲ. ಹೀಗಾಗಿ ಈ ಪಾಠ ವಿದ್ಯಾರ್ಥಿಗಳಿಗೆ ಬೇಡವಾಗಿದ್ದು, ಇದನ್ನು ಪಠ್ಯದಿಂದ ಕೈಬಿಡಬೇಕೆಂದು ಆಗ್ರಹಿಸಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮುಖಂಡ ವಿಜೇತ್ ಅವರು  ಮಾತನಾಡಿ, ಭಾರತವು ಎಂದೂ ಸೈನಿಕರ ಬಗ್ಗೆ ಕೀಳಾಗಿ ಕಂಡಿಲ್ಲ, ಕಾಣುವುದೂ ಇಲ್ಲ. ಸೈನಿಕರ ಮನೆಯವರನ್ನೂ ಗೌರವದಿಂದ ಕಾಣುತ್ತದೆ. ಆದರೆ ಈ ಲೇಖಕಕರ ಬರಹವೇ ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ನೀಡುತ್ತದೆ. ವಿಶ್ವವಿದ್ಯಾನಿಲಯದ ಕನ್ನಡ ಪಠ್ಯಪುಸ್ತಕ ರಚನಾ ಸಮಿತಿಯ ಬೇಜಾವಾಬ್ದಾರಿಯಿಂದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶ ಕಾಯುವ ಸೈನಿಕರು ಅತ್ಯಾಚಾರಿಗಳು ಎಂಬ ಭಾವನೆ ಮೂಡುವಂತಾಗಿದೆ. ದೇಶಪ್ರೇಮದ ಬಗ್ಗೆ ತಪ್ಪು ಅರ್ಥ ಬರುವಂತಾಗಿದೆ ಎಂದರು.  ಹೀಗಾಗಿ ತಕ್ಷಣವೇ ಈ ಪಾಠವನ್ನು ಕೈಬಿಡಬೇಕು ಎಂದು ಆಗ್ರಹಿಸಿದ ಅವರು  ಒಂದು ವೇಳೆ ಈ ಪಾಠವನ್ನು ತೆಗೆಯದೇ ಇದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರಮುಖರಾದ ರಾಧೇಶ್, ಲಕ್ಷ್ಮೀಶ, ಹೃಷಿಕೇಶ್ ಶೆಟ್ಟಿ, ಮನೀಶ ಹಾಗೂ ಪ್ರಕೃತಿ, ಶಾಶ್ವತ್ ಮಾತನಾಡಿದರು.

ಪ್ರತಿಭಟನೆಯ ಬಳಿಕ ವಿದ್ಯಾರ್ಥಿಗಳು ಈ ಲೇಖನವನ್ನು ಪಠ್ಯ ಪುಸ್ತಕದಿಂದ ಕೈಬಿಡಬೇಕೆಂದು ಆಗ್ರಹಿಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X