Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ 160 ಸ್ಥಾನ ಗೆಲ್ಲಲಿದೆ:...

ಕಾಂಗ್ರೆಸ್ 160 ಸ್ಥಾನ ಗೆಲ್ಲಲಿದೆ: ಭವಿಷ್ಯ ನುಡಿದ ಝಮೀರ್ ಅಹಮದ್

ವಾರ್ತಾಭಾರತಿವಾರ್ತಾಭಾರತಿ13 Aug 2017 3:05 PM IST
share
ಕಾಂಗ್ರೆಸ್ 160 ಸ್ಥಾನ ಗೆಲ್ಲಲಿದೆ: ಭವಿಷ್ಯ ನುಡಿದ ಝಮೀರ್ ಅಹಮದ್

ತುಮಕೂರು, ಆ.13: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 160ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಬೆಂಗಳೂರಿನ ಚಾಮರಾಜಪೇಟೆ ಶಾಸಕ ಝಮೀರ್ ಅಹಮದ್ ಭವಿಷ್ಯ ನುಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರಾಗಲಿ, ಅಮಿತ್ ಶಾ ಆಗಲಿ ಯಾರೇ ಬಂದರೂ ಅವರ ಪಕ್ಷ 60 ಸ್ಥಾನಕ್ಕಿಂತ ಹೆಚ್ಚು ಗೆಲ್ಲುವುದಿಲ್ಲ ಎಂದು ತಿಳಿಸಿದರು.

ನಗರದ ಶಾಸಕ ಡಾ.ರಫೀಕ್ ಅಹಮದ್ ಅವರ ಮನೆಗೆ ಆಕಸ್ಮಿಕವಾಗಿ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಿರಾದ ಮಾಜಿ ಸಚಿವ ಬಿ.ಸತ್ಯನಾರಾಯಣ ಅವರ ಮನೆಗೆ ಹೋಗುತ್ತಿದ್ದೇನೆ. ಮಾರ್ಗ ಮಧ್ಯೆ ಇಲ್ಲಿಗೆ ಬಂದೆ. ಮಾಜಿ ಶಾಸಕ ಶಫೀ ಅಹಮದ್ ಅವರ ಜತೆ ಹಳೆಯ ಬಾಂಧವ್ಯ ಹೊಂದಿದ್ದೇನೆ. ಇನ್ನು ಶಾಸಕ ಡಾ.ರಫೀಕ್ ಅಹಮದ್ ಅತ್ಯಂತ ಸರಳ-ಸಜ್ಜನಿಕೆ ವ್ಯಕ್ತಿ ಎಂದು ಹೇಳಿದರು.

ನಾನು ಜೆಡಿಎಸ್ ಪಕ್ಷದಲ್ಲಿ ಇದ್ದರೂ ದೇವೇಗೌಡರು ಏಕೆ ಅಮಾನತು ಮಾಡಿದರು. ನನ್ನನ್ನು ಮೀರ್ ಸಾದಿಕ್ ಎಂದು ಹೇಳಿದ್ದಾರೆ. ನಾನು ಯಾರಿಗೂ ದ್ರೋಹ ಬಗೆದಿಲ್ಲ. ಪಕ್ಷಕ್ಕೆ ರಾಜೀನಾಮೆ ಕೊಡಿ ಎಂದು ಅವರು ಹೇಳುವಂತಿಲ್ಲ. ನನಗೆ ಮತ ಹಾಕಿರುವವರು ಜನ. ದೇವೇಗೌಡರು ಅಲ್ಲ ಎಂದು ಹೇಳಿದರು.
ಜೆಡಿಎಸ್ ಅತೃಪ್ತ ಶಾಸಕರಿಗೆ ರಾಹುಲ್ ಗಾಂಧಿ ಆಹ್ವಾನ ನೀಡಿದ್ದಾರೆ. ನಾವು ಏಳು ಜನ ಜೆಡಿಎಸ್‍ಗೆ ಸೇರ್ಪಡೆಯಾಗಲಿದ್ದೇವೆ. ಇದೇ 17ರಂದು ರಾಹುಲ್ ಗಾಂಧಿಯವರನ್ನು ಭೇಟಿಯಾಗುತ್ತೇವೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಹೋಗುತ್ತೇವೆ. ಡಿಸೆಂಬರ್‍ಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇವೆ. ಫೆಬ್ರವರಿಯಲ್ಲಿ ಇನ್ನೂ 6 ಜನ ಜೆಡಿಎಸ್ ಅತೃಪ್ತ ಶಾಸಕರು ಕಾಂಗ್ರೆಸ್‍ಗೆ ಬರಲಿದ್ದಾ ರೆ ಎಂದು ತಿಳಿಸಿದರು.

ನಟ ಉಪೇಂದ್ರ ಚಿತ್ರರಂಗದಿಂದ ನಿವೃತ್ತಿ ಹೊಂದುತ್ತಿದ್ದಾರೆ. ಈಗ ಅವರು ಬದಲಿ ವ್ಯವಸ್ಥೆ ಕಂಡುಕೊಳ್ಳಲು ರಾಜಕೀಯ ಪಕ್ಷ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಅವರ ಗಿಮಿಕ್ ಇಲ್ಲಿ ನಡೆಯೋದಿಲ್ಲ. ಬಡವರ ಪರ ಕಾಳಜಿ ಇದ್ದರೆ ತಮ್ಮ ಸಂಪಾದನೆಯಲ್ಲಿ ಜನರಿಗೆ ಸಹಾಯ ಮಾಡಬೇಕಿತ್ತು. ಏನು ಮಾಡಿದ್ದಾರೆ ಜನರಿಗೆ. ಸಿನಿಮಾ ಡೈಲಾಗ್ ಸಿನಿಮಾಕ್ಕೆ ಮಾತ್ರ ಸೀಮಿತ ಎಂದು ಅವರು ತಿಳಿಸಿದರು.  

ಅಮಿತ್ ಷಾ ಮೋಡಿ ಕರ್ನಾಟಕದಲ್ಲಿ ನಡೆಯುವುದಿಲ್ಲ. ಇದು ಬಿಹಾರ, ಗುಜರಾತ್ ಅಲ್ಲ. ಅಮಿತ್ ಷಾ, ಮೋದಿ ಬಂದು ಇಲ್ಲಿ ಕುಳಿತರೂ ಕರ್ನಾಟಕದಲ್ಲಿ 60 ಸ್ಥಾನಕಿಂತ ಹೆಚ್ಚು ಸ್ಥಾನ ಅವರಿಗೆ ಬರಲ್ಲ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಮತ್ತೆ 160 ಕ್ಕೂ ಹೆಚ್ಚು ಸ್ಥಾನ ಪಡೆಯುವ ಮೂಲಕ ಮತ್ತೆ ಆಧಿಕಾರಕ್ಕೆ ಬರಲಿದೆ. ಎರಡನೆ ಬಾರಿಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುವುದು ಖಚಿತ ಎಂದು ಝಮೀರ್ ಅಹಮದ್ ಪುನರುಚ್ಚರಿಸಿದರು.

ಮಾಜಿ ಶಾಸಕರಾದ ಹೆಚ್.ನಿಂಗಪ್ಪ, ಷಫೀ ಅಹಮದ್ ಹಾಗೂ ಆಟೋ ರಾಜು, ಶಕೀಲ್ ಮೆಹಬೂಬ್ ಪಾಷ, ಅಫ್ತಬ್ ಆಹಮದ್ ಸೇರಿದಂತೆ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X