ನವ ವಿವಾಹಿತ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು,ಆ.13; ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ದರ್ಬೆ ಸಮೀಪದ ಬಿರುಮಲೆ ಗುಡ್ಡದಲ್ಲಿ ಆದಿತ್ಯವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ನಿಡ್ಯ ನಿವಾಸಿ ದಿ.ಶಿವಪ್ಪ ಎಂಬವರ ಪುತ್ರ ಕೇಶವ ಗೌಡ (30) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಅವರ ಮೃತದೇಹ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೇಶವ ಗೌಡ ಅವರಿಗೆ ಕಳೆದ ಎಪ್ರಿಲ್ ತಿಂಗಳಲ್ಲಿ ಮದುವೆಯಾಗಿತ್ತು. ಪತ್ನಿ ಆಟಿ ಆಚರಣೆ ಹಿನ್ನಲೆಯಲ್ಲಿ ತನ್ನ ತವರು ಮನೆಗೆ ಹೋಗಿದ್ದು, ಇಂದು ಆಕೆಯನ್ನು ಕರೆತರುವ ಕಾರ್ಯಕ್ರಮ ನಿಗಧಿಯಾಗಿತ್ತು ಎಂದು ತಿಳಿದುಬಂದಿದೆ.
ಮೃತ ಕೇಶವ ಗೌಡ ಬಡಗಿ ಕೆಲಸ ಮಾಡುತ್ತಿದ್ದು, ಶನಿವಾರ ಬೆಳಗ್ಗೆ ಮನೆಯಿಂದ ಕೆಲಸಕ್ಕಾಗಿ ಹೋದವರು ವಾಪಾಸು ಮನೆಗೆ ಬಂದಿರಲಿಲ್ಲ. ಈ ಬಗ್ಗೆ ನಗರಠಾಣೆಗೆ ದೂರು ನೀಡಲಾಗಿತ್ತು.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪುತ್ತೂರು ನಗರಠಾಣೆಯಲ್ಲಿ ಕೇಸು ದಾಖಲಾಗಿದೆ.
Next Story





