ಸ್ವಾತಂತ್ರ್ಯೋತ್ಸವ: ಸಂಚಾರ ಮಾರ್ಪಾಡು
ಬೆಂಗಳೂರು, ಆ.13: ನಾಳೆ ಎಪ್ಪಂತ್ತೊಂದನೆ ಸ್ವಾತಂತ್ರ ದಿನಾಚರಣೆ ಹಿನ್ನಲೆಯಲ್ಲಿ ಕಬ್ಬನ್ ರಸ್ತೆಯ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಕವಾಯತು ಮೈದಾನದ ಒಳಗೆ ಸುತ್ತ-ಮುತ್ತಲೂ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿ ಕೆಲ ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ.
ಮಾರ್ಗ ಬದಲಾವಣೆ: ನಗರದ ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ಇನ್‌ಫೆಂಟ್ರಿ ರಸ್ತೆ ಸಫೀನಾ ಪ್ಲಾಜಾ-ಎಡ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ-ಆಲೀಸ್ ಸರ್ಕಲ್-ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
ಕಬ್ಬನ್ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳು, ಕಾಮರಾಜ ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್‌ನಲ್ಲಿ ಕಾಮರಾಜ ರಸ್ತೆಗೆ ಎಡತಿರುವು ಪಡೆದು, ಕಾವೇರಿ ಆರ್ಟ್ಸ್ ಕ್ರಾಫ್ಟ್ೃ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು, ಎಂ.ಜಿ.ರಸ್ತೆಯ ಮೂಲಕ ಬಂದು ಅನಿಲ್‌ಕುಂಬ್ಳೆ ವೃತ್ತದಲ್ಲಿ ಮೂಲಕ ಮುಂದೆ ಸಾಗಬಹುದು.
ಅನಿಲ್‌ಕುಂಬ್ಳೆ ವೃತ್ತದಿಂದ ಕಬ್ಬನ್‌ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ರಸ್ತೆಯಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು-ಇನ್‌ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾ-ಎಡಕ್ಕೆ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ-ಆಲಿ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ-ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಹೋಗಬಹುದು.
ಕಾಫಿ ಬೋರ್ಡ್ ಕಡೆಯಿಂದ ಬಂದು ಬಿಆರ್‌ವಿ ಜಂಕ್ಷನ್ ಕಡೆ ಹೋಗುವ ವಾಹನಗಳು ಟ್ರಾಫಿಕ್ ಹೆಡ್‌ಕ್ವಾರ್ಟರ್ ಬಳಿ ನೇರವಾಗಿ ಇನ್‌ಫೆಂಟ್ರಿ ರಸ್ತೆಯಲ್ಲಿ ಸಾಗಿ ಸಫೀನಾ ಪ್ಲಾಜಾ ಬಳಿ ಎಡಕ್ಕೆ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲಿ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ-ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
ಎಂ.ಜಿ.ರಸ್ತೆಯಲ್ಲಿ ಕಾವೇರಿ ಆರ್ಟ್ಸ್ ಕ್ರಾಫ್ಟ್ ವೃತ್ತದಿಂದ ಬಂದು, ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ಗೆ ಹೋಗುವ ವಾಹನಗಳು ನೇರವಾಗಿ ಎಂಜಿ ರಸ್ತೆಯಲ್ಲಿ ಸಾಗಿ ಅನಿಲ್‌ಕುಂಬ್ಳೆ ವೃತ್ತದ ಬಳಿಗೆ ಬಂದು, ಬಲ ತಿರುವು ಪಡೆದು- ಬಿಆರ್ ವಿ ಜಂಕ್ಷನ್‌ನಲ್ಲಿ ನೇರವಾಗಿ ಸಂಚರಿಸಿ, ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ಮುಂದೆ ಹೋಗಬಹುದಾಗಿದೆ.
‘ಪೆರೇಡ್‌ಗೆ ಬರುವ ಎಲ್ಲ ಆಹ್ವಾನಿತರು ಹಾಗೂ ಸಾರ್ವಜನಿರಕರುಗಳು ಮೊಬೈಲ್, ಹೆಲ್ಮೆಟ್, ಕ್ಯಾಮೆರಾ, ರೇಡಿಯೋ, ಕೊಡೆ ತರುವುದು ನಿಷೇಧವಿದೆ. ಬೆಳಗ್ಗೆ 8:30 ಕ್ಕಿಂತ ಮುಂಚಿತವಾಗಿ ಬಂದು ಆಸೀನರಾಗುವಂತೆ ಸಂಚಾರ ಪೊಲೀಸರು ಕೋರಿದ್ದಾರೆ.







