ಉ.ಪ್ರ.ಆಸ್ಪತ್ರೆ ದುರಂತ: ಸಿಟ್ ತನಿಖೆಯ ಕೋರಿಕೆ ತಿರಸ್ಕರಿಸಿದ ಸುಪ್ರೀಂ

ಹೊಸದಿಲ್ಲಿ,ಆ.14: ಉತ್ತರ ಪ್ರದೇಶದ ಗೋರಖ್‌ಪುರದ ಬಿಆರ್‌ಡಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ 60ಕ್ಕೂ ಅಧಿಕ ಮಕ್ಕಳು ಸಾವನ್ನಪ್ಪಿದ ದುರಂತವನ್ನು ಸ್ವಯಂಪ್ರೇರಿತವಾಗಿ ಗಮನಕ್ಕೆ ತೆಗೆದುಕೊಳ್ಳಲು ಸೋಮವಾರ ನಿರಾಕರಿಸಿದ ಸರ್ವೋಚ್ಚ ನ್ಯಾಯಾಲಯವು ತನ್ನ ದೂರಿನೊಂದಿಗೆ ಅಲಹಾಬಾದ ಉಚ್ಚ ನ್ಯಾಯಾಲಯವನ್ನು ಸಂಪರ್ಕಿಸುವಂತೆ ವಿಷಯವನ್ನು ಪ್ರಸ್ತಾಪಿಸಿದ್ದ ನ್ಯಾಯವಾದಿಗೆ ಸೂಚಿಸಿತು.
ದುರಂತದ ಬಗ್ಗೆ ವಿಶೇಷ ತನಿಖಾ ತಂಡ(ಸಿಟ್)ದಿಂದ ತನಿಖೆ ನಡೆಸುವಂತೆಯೂ ನ್ಯಾಯವಾದಿ ಕೋರಿದ್ದರು. ಇದನ್ನು ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಮತ್ತು ನ್ಯಾ.ಡಿ.ವೈ.ಚಂದ್ರಚೂಡ ಅವರನ್ನೊಳಗೊಂಡ ಪೀಠವು, ಅಧಿಕಾರಿಗಳು ಪರಿಸ್ಥಿತಿಯನ್ನು ಮತ್ತು ದೂರುಗಳನ್ನು ನಿರ್ವಹಿಸುತ್ತಿದ್ದಾರೆ. ನಿಮ್ಮ ಯಾವುದೇ ದೂರನ್ನು ನೀವು ಸಂಬಂಧಿತ ಉಚ್ಚ ನ್ಯಾಯಾಲಯದಲ್ಲಿ ಪ್ರಸ್ತಾಪಿಸಬಹು ದಾಗಿದೆ ಎಂದು ಸ್ಪಷ್ಟಪಡಿಸಿತು.
Next Story





