ನೇಣು ಬಿಗಿದು ಆತ್ಮಹತ್ಯೆ
ಬೆಂಗಳೂರು, ಆ.14: ವಿವಾಹಿತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚೊಕ್ಕಸಂದ್ರದ ಸುರೇಶ್(31) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಒಂದು ವರ್ಷದ ಹಿಂದೆ ವಿವಾಹ ಮಾಡಿಕೊಂಡಿದ್ದ ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದುಬಂದಿದೆ.
ರವಿವಾರ ರಾತ್ರಿ ಕೊಠಡಿಯಲ್ಲಿದ್ದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ನ್ಯೂ ಟೌನ್ ಠಾಣೆ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.
Next Story





