ಮಾಂಡವ್ಯ ಶಿಕ್ಷಣ ಸಮೂಹ ಸಂಸ್ಥೆಗೆ ಸಮಗ್ರ ಪ್ರಶಸ್ತಿ

ಮಂಡ್ಯ, ಆ.14: ಮಾಂಡವ್ಯ ಶಿಕ್ಷಣ ಸ ಮೂಹ ಸಂಸ್ಥೆಯ ಮಾಂಡವ್ಯ ಪದವಿಪೂರ್ವ ಕಾಲೇಜು ಹಾಗು ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.
ಮಳವಳ್ಳಿಯ ತಾಲೂಕು ಒಕ್ಕಲಿಗರ ಸಂಘ, ವಿದ್ಯಾ ಪ್ಯಾರಾ ಮೆಡಿಕಲ್ ಕಾಲೇಜು ಹಾಗು ಮಂಡ್ಯ ಚೆಸ್ ಅಕಾಡೆಮಿ ವತಿಯಿಂದ ನಡೆದ ರಾಜ್ಯಮಟ್ಟದ ಬಿಜಿಎಸ್ ಕಪ್-2017 ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್‌ನಲ್ಲಿ ಮಾಂಡವ್ಯ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಧನುಷ್ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೆ ತರಗತಿ ವಿದ್ಯಾರ್ಥಿಗಳಾದ ಗೌತಮ್‌ಗೌಡ ಪ್ರಥಮ, ಚಂದ್ರಕಾಂತಗೌಡ ದ್ವಿತೀಯ, ರಾಘವೇಂದ್ರ ತೃತೀಯ ಸ್ಥಾನ ಪಡೆದಿದ್ದು, ಎಸ್.ಬಿ.ಎಜುಕೇಷನ್ ಟ್ರಸ್ಟ್ ಕಾರ್ಯದರ್ಸಿ ಮೀರಾ ಶಿವಲಿಂಗಯ್ಯ, ಪ್ರಾಂಶುಪಾಲ ಜಿ.ಹರೀಶ್, ಮುಖ್ಯಶಿಕ್ಷಕ ಪಿ.ರಾಮಮೂರ್ತಿ, ದೈಹಿಕ ಶಿಕ್ಷಣ ಶಿಕ್ಷಕ ಎಂ.ಎಸ್.ಉಮೇಶ್ ಅಭಿನಂದಿಸಿದ್ದಾರೆ.
Next Story





