ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಅಜೆಕಾರು, ಆ.14: ಮರ್ಣೆ ಗ್ರಾಮದ ಎಣ್ಣೆಹೊಳೆ ನಿವಾಸಿ ಪುಷ್ಪ ದಿನಕರ್ (60) ಎಂಬವರು ಮನೆಯ ಕೋಣೆಯ ಕ್ಯಾಲೆಂಡರ್‌ನಲ್ಲಿ ‘ನಾನು ಸಾಯು ತ್ತಿದ್ದೇನೆ’ ಎಂದು ಬರೆದು ಆ.13ರಂದು ರಾತ್ರಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ: ಅಲೆವೂರು ಗ್ರಾಮದ ಪ್ರಗತಿನಗರ ಲೇಬರ್ ಕಾಲೋನಿಯ ಬೀರಪ್ಪ(38) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಆ.13 ರಂದು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲ್ಲೂರು: ಕೊಲ್ಲೂರು ಸಂಪ್ರೆ ಮೀಸಲು ಅರಣ್ಯದಲ್ಲಿ ಸುಮಾರು 45ರಿಂದ 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವು ಆ.13ರಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.
Next Story





