ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು, ಆ.14: ರಾಜ್ಯ ಸರಕಾರದ ವತಿಯಿಂದ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಅಕ್ಟೋಬರ್ 5ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಜಯಂತಿಯ ಪ್ರಯುಕ್ತ ಪರಿಶಿಷ್ಟ ಪಂಗಡದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ವಾಲ್ಮೀಕಿಯ ಸ್ಮರಣಾರ್ಥ ರಾಜ್ಯ ಮಟ್ಟದ ಪ್ರಶಸ್ತಿ ಯನ್ನು ನೀಡಲು ಉದ್ದೇಶಿಸಲಾಗಿದೆ.
ಅರ್ಹರು ನಿಗದಿತ ಅರ್ಜಿ ನಮೂನೆಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರೇಡ್-12), ಸಮಾಜ ಕಲ್ಯಾಣ ಇಲಾಖೆ, ಆಥವಾ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಂಗಳೂರು ಇವರ ಕಚೇರಿಯಿಂದ ಪಡೆದು ಆ.22ರೊಳಗೆ ಸಲ್ಲಿಸಬೇಕು.
ವಿವರಗಳಿಗೆ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದ.ಕ. ಜಿಲ್ಲೆ, ದೂ.ಸಂ: 0824-2451269 ಇವರನ್ನು ಸಂಪರ್ಕಿಸಲು ಸೂಚಿಸಲಾಗಿದೆ.
Next Story





