ಸೇವಾದಳದ ಅಧ್ಯಕ್ಷರಾಗಿ ಕಾನೆಹಿತ್ಲು ಮೊಣ್ಣಪ್ಪ ಆಯ್ಕೆ

ಮಡಿಕೇರಿ ಆ.15 :ಜಿಲ್ಲಾ ಕಾಂಗ್ರೆಸ್ ಸಮಿತಿಯ ಬಲವರ್ಧನೆಯ ದೃಷ್ಟಿಯಿಂದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರನ್ನಾಗಿ ಬ್ಲಾಕ್ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಕಾನೆಹಿತ್ಲು ಮೊಣ್ಣಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಚಿಲ್ಲವಂಡ ಕಾವೇರಪ್ಪ ತಿಳಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸೇವಾದಳವನ್ನು ಸಕ್ರಿಯಗೊಳಿಸಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಾಗುವುದೆಂದು ಅವರು ಹೇಳಿದ್ದಾರೆ.
Next Story





