ಕೊಲ್ಲರ ಕೋಡಿ: ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ನರಿಂಗಾನ, ಆ. 15 : ಕೊಲ್ಲರ ಕೋಡಿ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ಇಸ್ಮಾಯಿಲ್ ಮಿನಂಗೋಡಿಯವರು ಧ್ವಜಾರೋಹಣ ಗೈದರು.
ನಂತರ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಗೀತೆ ಮತ್ತು ದೇಶ ಭಕ್ತಿ ಗೀತೆಗಳನ್ನು ಹಾಡಿದರು.
ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ವಠಾರದಿಂದ ನೆತ್ತಿಲಪದವಿನವರಗೆ ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿದರು.
ಈ ಸಂದರ್ಭ ಶಾಲಾ ಆಡಳಿತ ಮಂಡಳಿ, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್, ಉಪಾಧ್ಯಕ್ಷೆ ನಳಿನಾಕ್ಷಿ,
ಮಾಜಿ ಗ್ರಾಮ ಪಂಚಾಯತ್ ಸದಸ್ಯ ನವಾಝ್ ಮುಂತಾದವರು ಉಪಸ್ಥಿತರಿದ್ದರು.
Next Story





