ಹಿರಿಯರ ತ್ಯಾಗ ಬಲಿದಾನದ ಅನುಸರಣೆಯೇ ನಿಜವಾದ ಗೌರವ
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಸಕ ಡಿ.ಸಿ.ತಮ್ಮಣ್ಣ

ಮದ್ದೂರು, ಆ.15: ದೇಶವನ್ನು ಬ್ರಿಟೀಷರಿಂದ ಮುಕ್ತಿಗೊಳಿಸಲು ಹಿರಿಯರು ಮಾಡಿದ ತ್ಯಾಗ ಬಲಿದಾನದ ಅನುಸರಣೆಯೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಶಾಸಕ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 71ನೆ ಸ್ವಾತಂತ್ರ್ಯೋತ್ಸವ ಕಆರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ರಿಟಿಷರ ದಾಸ್ಯ ಸಂಕೋಲೆಯಿಂದ ದೇಶವನ್ನು ಮುಕ್ತಗೊಳಿಸಿದ ಹಿರಿಯರ ತ್ಯಾಗಬಲಿದಾನವನ್ನು ಎಂದಿಗೂ ಮರೆಯುವಂತಿಲ್ಲ ಎಂದರು.
ತಹಶೀಲ್ದಾರ್ ಹರ್ಷ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳ ಪಥ ಸಂಚಲನ ಗಮನ ಸೆಳೆಯಿತು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.
ಪುರಸಭಾಧ್ಯಕ್ಷೆ ಭಾಗ್ಯಾ ಸತೀಶ್, ತಾಪಂ ಅಧ್ಯಕ್ಷೆ ಜಯಲಕ್ಷ್ಮಮ್ಮ, ಜಿಪಂ ಸದಸ್ಯರಾದ ಮರಿಹೆಗಡೆ, ಬೋರಯ್ಯ, ತಾಪಂ ಸದಸ್ಯರಾದ ಸತೀಶ್, ಶಿರೆಸ್ತೆದಾರ್ ಲಕ್ಷ್ಮಿನರಸಿಂಹಯ್ಯ, ಗ್ರೇಡ್-2 ತಹಶೀಲ್ದಾರ್ ನಾಗರಾಜರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ, ಪುರಸಭಾ ಮುಖ್ಯಾಧಿಕಾರಿ ಕುಮಾರ್, ತಾಪಂ ಇಓ ಕೃಷ್ಣಮೂರ್ತಿ ಇತರ ಗಣ್ಯರು, ಅಧಿಕಾರಿಗಳು ಭಾಗವಹಿಸಿದ್ದರು.
ಸಮೀಪದ ಆಲೂರು ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ನಿರ್ಗಮಿತ ಅಧ್ಯಕ್ಷ ಶಿವಲಿಂಗಯ್ಯ ಧ್ವಜಾರೋಹಣ ನೆರವೇರಿಸಿದರು. ನೂತನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಆರ್.ರವಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯ ನಟರಾಜು, ಎಸ್‍ಡಿಎಂಸಿ ಸದಸ್ಯರಾದ ಲಕ್ಷ್ಮಮ್ಮ ಶಿವರಾಮು, ಸಿದ್ದನಾಗರಾಜು, ರಾಮಚಂದ್ರು, ನಾಗರಾಜು, ಬಸವರಾಜು, ಮಹದೇವು, ಶಶಿಶಂಕರ್, ಮುಖ್ಯಶಿಕ್ಷಕ ಟಿ.ಎಚ್.ಶಿವಣ್ಣ, ಹಲವರು ಪಾಲ್ಗೊಂಡಿದ್ದರು.
ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸ್ವಾಮಿ ವಿವೇಕಾನಂದ ಯುವ ಸಾಂಸ್ಕøತಿಕ ಸಂಘದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರ ಜನ್ಮದಿನವನ್ನು ಆಚರಿಸಲಾಯಿತು.
ಸಿಪಿಐ ಪ್ರಭಾಕರ್, ಪಿಎಸ್‍ಐ ಕುಮಾರ್, ಕ್ರೀಡಾ ಸಂಘದ ಅಧ್ಯಕ್ಷ ಲಾರಾ ಪ್ರಸನ್ನ, ಸಿಬ್ಬಂದಿಗಳಾದ ಕುಮಾರಸ್ವಾಮಿ, ಶಿವಕುಮಾರ್, ಮಹೇಶ್, ಶೇಖರ್, ಮಹದೇವಪ್ಪ, ಒಕ್ಕಲಿಗರ ಸಂಘದ ಅಧ್ಯಕ್ಷ ಸಿದ್ದೇಗೌಡ, ಸುರೇಶ್, ಇತರರು ಹಾಜರಿದ್ದರು.







