Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಅವರದು ಮನ್ ಕೀ ಬಾತ್, ನಮ್ಮದು...

‘ಅವರದು ಮನ್ ಕೀ ಬಾತ್, ನಮ್ಮದು ವಾಂಗೀಬಾತ್’ : ಮುಖ್ಯಮಂತ್ರಿ ಸಿದ್ದರಾಮಯ್ಯ

ಜಿಲ್ಲಾ ಕೇಂದ್ರಗಳಿಗೂ ಇಂದಿರಾ ಕ್ಯಾಂಟಿನ್ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ16 Aug 2017 7:00 PM IST
share
‘ಅವರದು ಮನ್ ಕೀ ಬಾತ್, ನಮ್ಮದು ವಾಂಗೀಬಾತ್’ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆ. 16: ಪ್ರಧಾನಿ ಮೋದಿ ಅವರದ್ದು ಕೇವಲ ಮನ್ ಕೀ ಬಾತ್, ಇದರಿಂದ ಜನರ ಹೊಟ್ಟೆ ತುಂಬುವುದಿಲ್ಲ. ಆದರೆ, ನಮ್ಮದು ಬಡವರ ಹೊಟ್ಟೆ ತುಂಬಿಸುವ ವಾಂಗೀಬಾತ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 ಬುಧವಾರ ಇಲ್ಲಿನ ಜಯನಗರ ವಾರ್ಡ್‌ನ ಕನಕನ ಪಾಳ್ಯದಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಜನ ಸಾಮಾನ್ಯರ ಆಹಾರ ತಾಣ ‘ಇಂದಿರಾ ಕ್ಯಾಂಟಿನ್’ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ನಗರದ 198 ವಾರ್ಡ್‌ಗಳಲ್ಲಿ ಕ್ಯಾಂಟಿನ್ ಸ್ಥಾಪಿಸಲಾಗುವುದೆಂದು ಘೋಷಿಸಿದ್ದು, ಇದೀಗ 101 ಕ್ಯಾಂಟಿನ್ ಆರಂಭಿಸಲಾಗಿದೆ ಎಂದರು.

ಯಾವುದೇ ರಾಜಕೀಯ ಲಾಭಕ್ಕಾಗಿ ಇಂದಿರಾ ಕ್ಯಾಂಟಿನ್ ಘೋಷಿಸಿಲ್ಲ. ಬದಲಿಗೆ ಬಡವರ ಹಸಿವು ನೀಗಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಹಸಿವು ಮುಕ್ತ ರಾಜ್ಯವನ್ನಾಗಿಸಬೇಕೆಂಬ ದೃಷ್ಟಿಯಿಂದ ರಾಜ್ಯದ 1.08 ಕೋಟಿ ಕುಟುಂಬಗಳಿಗೆ ಉಚಿತ ಪಡಿತರ ನೀಡಲಾಗುತ್ತಿದೆ ಎಂದು ಹೇಳಿದರು.

ಅನ್ನಭಾಗ್ಯ ಯೋಜನೆಯಿಂದ ಪುಣೆ, ಗೋವಾ, ಮುಂಬೈಗೆ ಗುಳೆ ಹೋಗುವುದು ನಿಂತಿದೆ. ಭೀಕರ ಸ್ವರೂಪದ ಬರ ಸ್ಥಿತಿ ಇದ್ದರೂ ಹಸಿವಿನಿಂದ ಸಾವನ್ನಪ್ಪಿದ ಉದಾಹರಣೆ ಇಲ್ಲ. ಅನ್ನಭಾಗ್ಯ ಯೋಜನೆ ಅನುಷ್ಠಾನಗೊಳಿಸುತ್ತಿರುವುದು ನಮಗೆ ಸಂತೃಪ್ತಿ ತಂದಿದೆ ಎಂದು ಅವರು ನುಡಿದರು.

ಪಾಲಿಕೆ ಸೊತ್ತುಗಳಲ್ಲಿ ಕ್ಯಾಂಟಿನ್: ಉದ್ಯಾನವನ, ಆಟದ ಮೈದಾನಗಳಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಿಸಿಲ್ಲ. ಬದಲಿಗೆ ಬಿಬಿಎಂಪಿ ಸೊತ್ತುಗಳಲ್ಲಿ ಕ್ಯಾಂಟಿನ್ ಸ್ಥಾಪಿಸಲಾಗಿದೆ. ಬಡತನ, ಹಸಿವಿನ ಅರಿವಿಲ್ಲದವರು ಕ್ಯಾಂಟಿನ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು ಸಿದ್ದರಾಮಯ್ಯ ಟೀಕಿಸಿದರು.

ಬಡತನ ನಿರ್ಮೂಲನೆಗಾಗಿ ಹೋರಾಟ ಮಾಡಿದ್ದ ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಕ್ಯಾಂಟಿನ್ ಸ್ಥಾಪಿಸಲಾಗಿದೆ. ಆದರೆ. ವಿರೋಧಿಗಳಿಗೆ ಇದು ಅರ್ಥ ಆಗುವುದಿಲ್ಲ ಎಂದ ಅವರು, ಬಿಬಿಎಂಪಿಯ 101 ವಾರ್ಡ್‌ಗಳಲ್ಲಿಯೂ ಕ್ಯಾಂಟಿನ್ ಆರಂಭಿಸಿದ್ದು, ಉಳಿದ 97 ಕ್ಯಾಂಟಿನ್‌ಗಳನ್ನು ಅ.2ಕ್ಕೆ ಆರಂಭ ಮಾಡಲಾಗುವುದು ಎಂದು ಹೇಳಿದರು.

ಅಗ್ಗದ ದರದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಕೇವಲ 25 ರೂ.ಗಳಲ್ಲೆ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟ ಒದಗಿಸಲಾಗುವುದು ಎಂದ ಅವರು, ಬಡವರ ಯೋಜನೆಗಳನ್ನು ಅತುರಾತುರವಾಗಿಯೇ ಅನುಷ್ಠಾನಕ್ಕೆ ತರಬೇಕು, ಯಾವುದೇ ವಿಳಂಬ ಮಾಡಬಾರದು ಎಂದು ಸಮರ್ಥಿಸಿಕೊಂಡರು.

‘ಅಗ್ಗದ ದರದಲ್ಲಿ ಬಡವರು ಹಾಗೂ ಜನಸಾಮಾನ್ಯರಿಗೆ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಒದಗಿಸುವ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟಿನ್ ಯೋಜನೆಯನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿಯೂ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು’

-ಸಿದ್ದರಾಮಯ್ಯ ಮುಖ್ಯಮಂತ್ರಿ

ಬಿಜೆಪಿ ಮುಖಂಡರು ಗೈರು: ‘ಇಂದಿರಾ ಕ್ಯಾಂಟಿನ್ ಉದ್ಘಾಟನೆ ಸಮಾರಂಭಕ್ಕೆ ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ನಿರ್ಮಲಾ ಸೀತಾರಾಮನ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಹಾಜರಾಗಿರಲಿಲ್ಲ' 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X