ಖಾಯಂ ಪೌರಕಾರ್ಮಿಕರಿಗೆ ಗೃಹಭಾಗ್ಯ

ಮಡಿಕೇರಿ, ಆ.16 :ನಗರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಯಂ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಕಲ್ಪಿಸಲು ಗುರುತಿಸಿರುವ ಸುದರ್ಶನ ಅತಿಥಿ ಗೃಹದ ಬಳಿಯ ಜಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ಭೂಮಿ ಪೂಜೆ ನೆರವೇರಿಸಿದರು.
ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಟಿ.ಪಿ.ರಮೇಶ್, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಉಪಾಧ್ಯಕ್ಷರಾದ ಟಿ.ಎಸ್.ಪ್ರಕಾಶ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ನಗರಸಭೆ ಸದಸ್ಯರಾದ ಪ್ರಕಾಶ್ ಆಚಾರ್ಯ, ಜುಲೇಕಾಬಿ, ಮನ್ಸೂರ್, ಪಿ.ಡಿ.ಪೊನ್ನಪ್ಪ, ಉಣ್ಣಿಕೃಷ್ಣ, ತಜುಸಮ್, ಪೌರಾಯುಕ್ತರಾದ ಬಿ.ಶುಭಾ ಇತರರು ಇದ್ದರು.
Next Story





