Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ​ಹೋಂಸ್ಟೇಗೆ ಪ್ರವಾಸೋದ್ಯಮ...

ಮಂಗಳೂರು: ​ಹೋಂಸ್ಟೇಗೆ ಪ್ರವಾಸೋದ್ಯಮ ಇಲಾಖೆಯಿಂದ ಲೈಸನ್ಸ್

ವಾರ್ತಾಭಾರತಿವಾರ್ತಾಭಾರತಿ16 Aug 2017 10:02 PM IST
share

ಮಂಗಳೂರು, ಆ.16: ರಾಜ್ಯದಲ್ಲಿ ಕೈಗಾರಿಕೆ, ಐಟಿ-ಬಿಟಿ ವೇಗಗತಿಯಲ್ಲಿ ಅಭಿವೃದ್ಧಿಯಾಗುತ್ತಿದ್ದಂತೆ ಪ್ರವಾಸೋದ್ಯಮಕ್ಕೂ ವಿಶೇಷ ಒತ್ತು ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಹೋಂಸ್ಟೇಗಳನ್ನು ಹೆಚ್ಚಿಸುವ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆಯಿಂದಲೇ ಪರವಾನಗಿ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಇನ್ನು ಮುಂದೆ ಹೋಂಸ್ಟೇಗೆ ಪ್ರವಾಸೋದ್ಯಮ ಇಲಾಖೆ ಪರವಾನಗಿ ಪಡೆಯುವುದು ಕಡ್ಡಾಯವಾಗಲಿದೆ. ಇದರಿಂದ ವ್ಯಾಪಾರ ಲೈಸೆನ್ಸ್ ಸೇರಿದಂತೆ ಇತರ ಯಾವುದೇ ಪರವಾನಗಿಯ ಅಗತ್ಯರುವುದಿಲ್ಲ.

ರಾಜ್ಯ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ದ.ಕ. ಜಿಲ್ಲೆಯಲ್ಲೂ ಹೋಂ ಸ್ಟೇ ಯೋಜನೆಯನ್ನು ಆರಂಭಿಸಿದ್ದು, ಸ್ವಂತ ನಿವಾಸ ಹೊಂದಿದ ಯಾರು ಕೂಡಾ ಇದನ್ನು ಸದುಪಯೋಗಪಡಿಸಿಕೊಳ್ಳಬಹುದು. ಮನೆಯಲ್ಲಿ ಗರಿಷ್ಠ 5 ಕೊಠಡಿಗಳಿದ್ದರೆ ಹೋಂ ಸ್ಟೇ ಆರಂಭಿಸಲು ಅವಕಾಶವಿದೆ.

ಹೋಂ ಸ್ಟೇ ಎಂದರೆ ಪ್ರವಾಸಿಗರಿಗೆ ಮತ್ತು ಜಿಲ್ಲೆಗೆ ನಾನಾ ಕಾರಣಕ್ಕೆ ಭೇಟಿ ನೀಡುವವರಿಗೆ ಬಾಡಿಗೆ ಆಧಾರದ ಮೇಲೆ ವಸತಿ ಸೌಲಭ್ಯ ನೀಡುವ ಖಾಸಗಿ ಮನೆಯಾಗಿದೆ. 3 ವರ್ಷಗಳಿಗೆ ನೊಂದಣಿ ಶುಲ್ಕ ನಿಗದಿಪಡಿಸಲಾಗಿದೆ. ಹೋಂಸ್ಟೇ ಕೊಠಡಿ ಶುಲ್ಕವು ದಿನಕ್ಕೆ 5 ಸಾವಿರ ರೂ.ಗಿಂತ ಕಡಿಮೆಯಿದ್ದಲ್ಲಿ ವಿಲಾಸಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗುತ್ತದೆ. ವಿದ್ಯುಚ್ಛಕ್ತಿ ಮತ್ತು ನೀರಿನ ಶುಲ್ಕಗಳನ್ನು ಗೃಹ ಬಳಕೆಯ ದರದಲ್ಲಿ ನೀಡಲಾಗುತ್ತದೆ. ವಸತಿ ಉದ್ದೇಶಗಳಿಗೆ ನಿರ್ದಿಷ್ಟಪಡಿಸಿರುವಂತೆ ಆಸ್ತಿ ತೆರಿಗೆ ದರಗಳನ್ನು ಪಾವತಿಸಬೇಕು. ಹೋಂಸ್ಟೇ ಮಾಲಕರು ಅತಿಥಿಗಳು ಪಾವತಿಸಬೇಕಾದ ದರಪಟ್ಟಿಯನ್ನು ನಿಖರವಾಗಿ ವಿವರಿಸಬೇಕು.

ಪಾರಂಪರಿಕ ಮನೆಗಳಿಗೆ ಬೇಡಿಕೆ: ಕರಾವಳಿ ಪ್ರಾಕೃತಿಕ ಪ್ರವಾಸಿ ತಾಣವಾಗಿರುವುದರಿಂದ ಇಲ್ಲಿಗೆ ಪ್ರವಾಸ ಬರುವವರು ಹೆಚ್ಚಾಗಿ ಗುತ್ತಿನ ಮನೆ, ಗ್ರಾಮೀಣ ಶೈಲಿಯ ಹೋಂಸ್ಟೇಗೆ ಹೆಚ್ಚು ಬೇಡಿಕೆ ಇಡುತ್ತಿದ್ದಾರೆ. ಈ ವಿನ್ಯಾಸದಲ್ಲಿ ನಿರ್ಮಾಣ ಮಾಡಿದರೆ ಒಳ್ಳೆಯ ಬೇಡಿಕೆ ಸಾಧ್ಯವಿದೆ. ವಿನ್ಯಾಸ ಮತ್ತು ಅನುಕೂಲತೆಗೆ ಅನುಗುಣವಾಗಿ ಹೋಂಸ್ಟೇಗಳ ದರದಲ್ಲೂ ವ್ಯತ್ಯಾಸವಾಗಲಿದೆ.

ಹೋಂಸ್ಟೇ ನಿಯಮಗಳು: ಅರ್ಜಿ ಸಲ್ಲಿಸಿದ ವ್ಯಕ್ತಿ ನಿವಾಸದ ಮಾಲಕನಾಗಿರಬೇಕು ಮತ್ತು ಅದೇ ನಿವಾಸದಲ್ಲಿ ವಾಸವಿರಬೇಕು. ಮನೆಯ ಕಾಂಪೌಂಡ್ ಮತ್ತು ಮುಖ್ಯದ್ವಾರಕ್ಕೆ 2 ಸಿಸಿ ಕ್ಯಾಮೆರಾ ಅಳವಡಿಕೆ ಮಾಡಿರಬೇಕು. ವರ್ಷಕ್ಕೊಮ್ಮೆ ಪೊಲೀಸರಿಂದ ನಿರಕ್ಷೇಪಣಾ ಪತ್ರ ಪಡೆದು, ಪರವಾನಗಿ ನವೀಕರಣ ಮಾಡಬೇಕು. ಗುಣಮಟ್ಟದ ಮನೆ ಹೊಂದಿದ್ದು, ಶೌಚಾಲಯ ಹಾಗೂ ಇತರ ಮೂಲ ಸೌಕರ್ಯಗಳನ್ನು ಹೊಂದಿರಬೇಕು. ಹೋಂ ಸ್ಟೇ ಅತಿಥಿಗಳ ವಿವರದ ಬಗ್ಗೆ ನೊಂದಣಿ ಪುಸ್ತಕವನ್ನು ಹಾಗೂ ಇಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಗಣಕೀಕರಣ ಮಾಡಿಸಬೇಕು.

ಹೋಂಸ್ಟೇ ಆರಂಭಿಸಲು ಸಲ್ಲಿಸಬೇಕಾದ ಅಗತ್ಯ ದಾಖಲೆಗಳು: ಸಂಬಂಧಪಟ್ಟ ನಗರ ಅಥವಾ ಗ್ರಾಪಂನಿಂದ ನಿರಾಕ್ಷೇಪಣಾ ಪತ್ರ. ಪೊಲೀಸ್ ಠಾಣೆಯಿಂದ ನಿರಾಕ್ಷೇಪಣಾ ಪತ್ರ. ಪಹಣಿ ಪತ್ರದ ಪ್ರತಿ, ಕಟ್ಟಡ ಪರವಾನಗಿ ಪ್ರತಿ, ಮನೆ ತೆರಿಗೆ ಪಾವತಿ ರಶೀದಿ, 9/11 ಪ್ರತಿ, ಸೇಲ್ ಡೀಡ್ ಪ್ರತಿ, ಹೋಂ ಸ್ಟೇ ಕಟ್ಟಡದ ಎದುರಿನ ಹಾಗೂ ಒಳ ಕೊಠಡಿಗಳ ಒಳಾಂಗಣ ಚಿತ್ರ -ಹೋಂ ಸ್ಟೇ ಕಟ್ಟಡದ ಶೌಚಾಲಯದ ಒಳಾಂಗಣ ಚಿತ್ರ, ಹೋಂ ಸ್ಟೇ ಮಾಲಕನ ಭಾವಚಿತ್ರ.

ಹೋಂ ಸ್ಟೇಗೆ ಅರ್ಜಿ ಸಲ್ಲಿಸುವ ವಿಧಾನ: ಸಂಬಂಧಿಸಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಹೋಂ ಸ್ಟೇ ವೆಬ್‌ಸೈಟ್ www.karnatakatourism.org ಅಂತರ್‌ಜಾಲದಲ್ಲಿ ಲಾಗ್ ಇನ್ ಆಗಿ, ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಅಪ್‌ಲೋಡ್ ಮಾಡಿ ನೇರವಾಗಿ ನೋಂದಣಿ ಮಾಡಿಕೊಳ್ಳಬಹುದು ಅಥವಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ದಾಖಲೆಗಳನ್ನು ನೀಡಿ, ಕಚೇರಿಯ ಪ್ರವಾಸೋದ್ಯಮ ಸಮಾಲೋಚಕರ ಮೂಲಕ ಆನ್‌ಲೈನ್ ನೋಂದಣಿ ಮಾಡಿಸಿಕೊಳ್ಳಬಹುದು. ನೋಂದಣಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್ ಅಥವಾ ನಗದು ರೂಪದಲ್ಲಿ ಚಲನ್ ಫಾರ್ಮ್‌ನ್ನು ಡೌನ್‌ಲೋಡ್ ಮಾಡಿ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಾವತಿಸಬೇಕು.

ಅರ್ಜಿ ಮತ್ತು ದಾಖಲೆಗಳನ್ನು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪರಿಶೀಲಿಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ (ದೂ.ಸಂ: 0824-2453926) ಅಥವಾ ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ ಸುಧೀರ್ ಟಿ.ಗೌಡ (ಮೊ.ಸಂ: 7411610243) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X