‘ಇಂದಿರಾ ಕ್ಯಾಂಟೀನ್’ಗೆ ಚಾಲನೆ
ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ‘ಇಂದಿರಾ ಕ್ಯಾಂಟೀನ್’ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಚಾಲನೆ ನೀಡಿದರು. ಬಳಿಕ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆಗೆ ಉಪಾಹಾರ ಸೇವಿಸಿದರು. ಈ ವೇಳೆ ಸಚಿವರಾದ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ಯು.ಟಿ.ಖಾದರ್, ರಾಮಲಿಂಗಾ ರೆಡ್ಡಿ, ಮೇಯರ್ ಪದ್ಮಾವತಿ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕ ಆರ್.ವಿ. ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.
Next Story





