ಹೂಡೆ: ಶಿಕ್ಷಕಿಯರಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಆ.17: ತೋನ್ಸೆ ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ವಿಭಾಗದ ಶಿಕ್ಷಕಿಯರಿಗಾಗಿ ಕಲಿಕೆಯ ಕೌಶಲ್ಯ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಮೈಸೂರು ವಿಭಾಗದ ಸಂಪನ್ಮೂಲ ವ್ಯಕ್ತಿ ಮಂಜುಳಾ ಜಯಕರ್ ಮಾತ ನಾಡಿ, ವಿದ್ಯಾರ್ಥಿ ಕೇಂದ್ರಿತ ಕಲಿಕೆಯನ್ನು ಆಯ್ದು ಮಕ್ಕಳ ಮನಸ್ಥಿತಿ ಅರ್ಥೈಸಿ ಕೊಂಡು, ತರಗತಿಯಲ್ಲಿ ಕಲಿಕೆಯ ವಾತಾವರಣ ನಿರ್ಮಿಸಿದಾಗ ಮಾತ್ರ ಶಿಕ್ಷಣದ ಉದ್ದೇಶ ಈಡೇರುತ್ತದೆ. ಬೋಧಕ ವೃಂದ ಕೇವಲ ಪಠ್ಯಪುಸ್ತಕವನ್ನಲ್ಲದೆ ಪ್ರಸಕ್ತ ಸನ್ನಿವೇಶದ ಅವಲೋಕನವು ತರಗತಿ ಕೋಣೆಯಲ್ಲಿ ನಡೆಸಬೇಕು ಎಂದು ಹೇಳಿದರು.
ಕಾರ್ಯಾಗಾರವನ್ನು ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಉದ್ಘಾಟಿಸಿದರು. ವೇದಿಕೆಯಲ್ಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸುನಂದಾ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸಬೀಹಾ, ಸಹ ಮುಖ್ಯ ಶಿಕ್ಷಕಿ ಬಲ್ಕೀಸ್ ಬಾನು ಉಪಸ್ಥಿತರಿದ್ದರು.
Next Story





