Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ರಿಯಾದ್: ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ...

ರಿಯಾದ್: ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಕಾರ್ಮಿಕರಿಗೆ ನೆರವಾದ ಕೆಸಿಎಫ್

ಹನೀಫ್ ಬೆಳ್ಳಾರೆ,ಹನೀಫ್ ಬೆಳ್ಳಾರೆ,17 Aug 2017 8:48 PM IST
share
ರಿಯಾದ್: ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಕಾರ್ಮಿಕರಿಗೆ ನೆರವಾದ ಕೆಸಿಎಫ್

ರಿಯಾದ್, ಆ. 17: ಇಲ್ಲಿಗೆ ಸಮೀಪದ ಎಕ್ಸಿಟ್ 7 ಅಲ್ ರಶೀದ್ ಎಂಬ ಕಂಪನಿಯೊಂದರಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಭಾರತೀಯರನ್ನೊಳ ಗೊಂಡಂತೆ ಸುಮಾರು ಇಪ್ಪತ್ತೈದು ಮಂದಿಯಿದ್ದ ತಂಡವೊಂದು ಕಂಪನಿಯ  ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನಕ್ಕೆ ಒಳಗಾಗಿ  ಸಮಸ್ಯೆಗೆ ಸಿಲುಕಿ ಕೊಂಡಿದ್ದು ಕೆಸಿಎಫ್ ರಿಯಾದ್ ಘಟಕದ ಸಾಂತ್ವನ ವಿಭಾಗವು ಈ ಮಂದಿಗೆ ಆಸರೆಯಾಗಿ ನಿಂತಿದೆ.

ಸೌದಿ ಅರೇಬಿಯಾದಲ್ಲಿ ಸದ್ಯಕ್ಕೆ ತಲೆದೋರಿರುವ ಆರ್ಥಿಕ ಬಿಕ್ಕಟ್ಟಿಗೆ ಹೆಚ್ಚಾಗಿ ವಿದೇಶೀ ಕಾರ್ಮಿಕರೇ ಬಲಿಯಾಗುತ್ತಿದ್ದಾರೆ. ಇಬ್ಬರು ಮಂಗಳೂರು ನಿವಾಸಿಗಳು ಸೇರಿದಂತೆ ಭಾರತೀಯರಾದ ಇಪ್ಪತ್ತೈದು ಮಂದಿ ಕಾರ್ಮಿಕರು ಕಳೆದ ನಾಲ್ಕು ತಿಂಗಳಿನಿಂದ ಅತ್ತ ಕೆಲಸವೂ ಇಲ್ಲದೆ ಇತ್ತ ವೇತನವೂ ದೊರೆಯದೆ ಭಾರೀ ಸಮಸ್ಯೆಗೊಳಗಾಗಿದ್ದಾರೆ. ಇಕಾಮ ( ವಾಸ್ತವ್ಯ ದಾಖಲೆ) ದ ಅವಧಿ ಕೊನೆಗೊಂಡಿದ್ದರಿಂದ ಹೊರಗೆ ಹೋಗಲೂ ಸಾಧ್ಯವಾಗದೆ ತಗಡು ಶೀಟ್ ನಿಂದ ನಿರ್ಮಿಸಿದ ತಾತ್ಕಾಲಿಕ ಶೆಡ್ ಗಳಲ್ಲಿ ಜಾನುವಾರುಗಳಂತೆ ಕೂಡಿ ಹಾಕಲ್ಪಟ್ಟಿದ್ದರು. ಕಳೆದ ನಾಲ್ಕು ತಿಂಗಳಿನಿಂದ ವೇತನ ದೊರೆಯದೆ ಇದ್ದುದರಿಂದ ದಿನ ನಿತ್ಯದ  ಖರ್ಚು ನಿಭಾಯಿಸುವುದು ಅವರಿಗೆ ಕಷ್ಟವಾಗಿತ್ತು.

ಈ ಮಂದಿಯ ದುಸ್ಥಿತಿಯ ಕುರಿತಂತೆ ಸ್ಥಳೀಯ ಕೆಸಿಎಫ್ ಕಾರ್ಯಕರ್ತರಿಗೆ ಮಾಹಿತಿ ಅರಿತು, ಭೇಟಿ ನೀಡಿ ವೇಳೆ ಬಿಲ್ಲು ಪಾವತಿಸದೆ ಇರುವುದರಿಂದ ಕಳೆದ ಒಂದು ವಾರದಿಂದ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಸುಡು ಬಿಸಿಲಿಗೆ ಉರಿದು ಕೆಂಡವಾಗುವ ತಗಡು ಶೀಟಿನ ಅಡಿಯಲ್ಲಿ ಈ ಮಂದಿಯ ಬದುಕು ನಿಜಕ್ಕೂ ನರಕವೇ ಆಗಿತ್ತು. ಕೈಯಲ್ಲಿ ಹಣ ಇಲ್ಲದ್ದರಿಂದ ಈ ಮಂದಿ  ಕಳೆದ ಕೆಲವಾರು ದಿನಗಳಿಂದ  ಊಟವನ್ನೇ ಮಾಡಿರಲಿಲ್ಲ. ನೀರಿನ ಬಾಟಲಿಗಳು ಖಾಲಿಯಾಗಿದ್ದು ನಗರಸಭೆ ಪೂರೈಸುವ ಉಪ್ಪು ನೀರು ಕುಡಿದು ಬದುಕುತ್ತಿದ್ದರು. ಕರೆಂಟು, ಏಸಿ ಇಲ್ಲದ್ದರಿಂದ ರಸ್ತೆ ಬದಿಯಲ್ಲಿ ಮಂಚ ಹಾಸಿ ಮಲಗುತ್ತಿದ್ದರು.  ಈ ಮಂದಿಯ ಕರುಣಾ ಜನಕ ಸ್ಥಿತಿಯನ್ನು ಮನಗಂಡ ಕೆಸಿಎಫ್ ಸಾಂತ್ವನ ವಿಭಾಗದ ತಂಡ ಆರಂಭದಲ್ಲಿ ಒಂದು ತಿಂಗಳ ಅವಧಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಹಾಗೂ ಶುದ್ಧ ಕುಡಿಯುವ ನೀರನ್ನು ಒದಗಿಸಲು ಮುಂದಾಗಿದೆ. ತದನಂತರ ಸಂಸ್ಥೆಯ ಅಧಿಕಾರಿಗಳೊಂದಿಗೆ ನಡೆಸಿದ ಚರ್ಚೆಯಲ್ಲಿ ಆರಂಭಿಕ ಯಶಸ್ಸು ದೊರೆತಿದ್ದು ಕಂಪನಿಯು ವಿದ್ಯುತ್ ಸಂಪರ್ಕ ಮರು ಜೋಡಣೆ ಮಾಡಿದೆ.

ಸಂತ್ರಸ್ತರು ಈಗಾಗಲೇ ತಮ್ಮ ವಿರುದ್ಧ ಕಂಪನಿ ತೋರಿದ ನಿರ್ಲಕ್ಷ್ಯ ಹಾಗೂ ದೌರ್ಜನ್ಯದ ವಿರುದ್ಧ ಇಲ್ಲಿನ ಕಾರ್ಮಿಕ ಪ್ರಾಧಿಕಾರಕ್ಕೆ ದೂರು ನೀಡಿದ್ದು ಈ ಕುರಿತಂತೆ ಕಾನೂನು ಹೋರಾಟಕ್ಕೆ ಬೆಂಬಲ ನೀಡುವುದಾಗಿ ಕೆಸಿಎಫ್ ತಿಳಿಸಿದೆ. ಮುಂದಿನ ದಿನಗಳಲ್ಲಿ ಸಂತ್ರಸ್ತರಿಗೆ ಭಾರತೀಯ ರಾಯಭಾರಿ ಕಛೇರಿಯ ನೆರವು ಒದಗಿಸುವುದು ಸೇರಿದಂತೆ ಹೆಚ್ಚಿನ ಸಹಾಯ ನೀಡಲಾಗುವುದು ಎಂದು ಸಂಘಟನೆ ಭರವಸೆ ನೀಡಿದೆ.

ಕೆಸಿಎಫ್ ರಿಯಾದ್ ಝೋನಲ್ ನ ಸಾಂತ್ವನ ವಿಭಾಗದ ಜೊತೆಗೆ ಮುಖಂಡರಾದ ನಝೀರ್ ಕಾಶಿಪಟ್ಣ, ಹಂಝ ಮೈಂದಾಳ, ನವಾಝ್ ಸಖಾಫಿ, ಇಸ್ಮಾಯೀಲ್ ಜೋಗಿಬೆಟ್ಟು, ಖಲಂದರ್ ಪಾಣೆ ಮಂಗಳೂರು,  ರಮೀಝ್ ಕುಲಾಯಿ , ಹಸನ್ ಸಾಗರ  ಹಾಗು ಇತರರು ಶ್ರಮಿಸಿದ್ದು, ಈ ನಿಟ್ಟಿನಲ್ಲಿ ಕೆಸಿಎಫ್ ನ ಶ್ರಮಕ್ಕೆ ಸಾರ್ವಜನಿಕ ವಲಯದಿಂದ ಶ್ಲಾಘನೆ ವ್ಯಕ್ತವಾಗಿದೆ.

share
ಹನೀಫ್ ಬೆಳ್ಳಾರೆ,
ಹನೀಫ್ ಬೆಳ್ಳಾರೆ,
Next Story
X