Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೆಡಿಎಸ್ ಅಧಿಕಾರಕ್ಕೆ ಬಂದರೆ ಸರಕಾರದ...

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸರಕಾರದ ಹಗರಣ ಬಯಲು: ಎಚ್‌ಡಿಕೆ

ವಾರ್ತಾಭಾರತಿವಾರ್ತಾಭಾರತಿ17 Aug 2017 10:11 PM IST
share
ಜೆಡಿಎಸ್ ಅಧಿಕಾರಕ್ಕೆ ಬಂದರೆ ಸರಕಾರದ ಹಗರಣ ಬಯಲು: ಎಚ್‌ಡಿಕೆ

ಬೆಂಗಳೂರು, ಆ.17: ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ನಡೆದಿರುವ ಹಗರಣಗಳನ್ನೆಲ್ಲ ಬಯಲುಗೊಳಿಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ನಗರದ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಕಚೇರಿ(ಜೆ.ಪಿ.ಭವನ)ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಜಂತಕಲ್ ಗಣಿ ಪ್ರಕರಣವನ್ನು ಮುಂದಿಟ್ಟುಕೊಂಡು ಜಗ್ಗಾಡುತ್ತಿದ್ದಾರೆ. ನಮ್ಮ ಸರಕಾರ ಬರಲಿ ಆಗ ನೋಡಿಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಸಿದ್ದರಾಮಯ್ಯ ದಿಲ್ಲಿಯಲ್ಲಿ ಕುಳಿತುಕೊಂಡು ಮೂರ್ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಜೆಡಿಎಸ್ ಅಸ್ತಿತ್ವವಿದೆ ಎಂದು ನಮ್ಮ ಪಕ್ಷದ ಬಗ್ಗೆ ದುರಂಹಕಾರದ ಮಾತುಗಳನ್ನಾಡಿ ದ್ದಾರೆ. ಅವರ ಈ ಮಾತನ್ನು ಸವಾಲಾಗಿ ಸ್ವೀಕರಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿರುತ್ತದೆ ಎಂಬುದನ್ನು ತೋರಿಸುತ್ತೇನೆ. ಹಣದ ಬಲದ ಮೇಲೆ ಚುನಾವಣೆ ಗೆಲ್ಲಬಹುದೆಂಬ ದುರಂಹಕಾರ ಮುಖ್ಯಮಂತ್ರಿಗೆ ಬಂದಿದೆ ಎಂದು ಕುಮಾರಸ್ವಾಮಿ ಟೀಕಿಸಿದರು.
ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ನಮ್ಮ ಅಭಿವೃದ್ಧಿಗೆ ಜನ ಮತ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈ ಚುನಾವಣೆ ಗೆಲ್ಲಲು ನೂರು ಕೋಟಿ ರೂ.ಖರ್ಚು ಮಾಡಿರುವುದು ನನಗೂ ಗೊತ್ತಿದೆ. ಮುಂದಿನ ಚುನಾವಣೆಯಲ್ಲಿ ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದು ತೋರಿಸಲಿ ಎಂದು ಅವರು ಸವಾಲು ಹಾಕಿದರು.

ಸಿದ್ದರಾಮಯ್ಯ ಅವರಿಂದಲೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಮುಕ್ತವಾಗುತ್ತದೆ. ಒಂದು ಪಕ್ಷವನ್ನ ಕಟ್ಟಲು ಆಗದವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರೆ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಜನರೆ ಪಾಠ ಕಲಿಸುತ್ತಾರೆ. ನಾನು ಬಹಳ ಮೃದು ಸ್ವಭಾವದವನು ಎಂದು ತಿಳಿದುಕೊಂಡಿದ್ದಾರೆ. ಆದರೆ, ಇನ್ನು ಮುಂದೆ ಈ ಸರಕಾರದ ಸ್ವೇಚ್ಛಾಚಾರ, ಹಣದ ಲೂಟಿ ವಿರುದ್ಧ ಮೃದು ಧೋರಣೆ ತಾಳುವುದಿಲ್ಲ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಬೆಂಗಳೂರು ನಗರದ ಅಭಿವೃದ್ಧಿ ಮಾಡಿದ್ದೇವೆ ಎಂದು ಸರಕಾರ ಪುಟಗಟ್ಟಲೆ ಜಾಹೀರಾತು ನೀಡುತ್ತಾ ಬಂದಿದ್ದಾರೆ. ಬೆಂಗಳೂರು ಹಣೆಬರಹ ಏನು ಎಂದು ಮಳೆ ಬಂದ ಮೇಲೆ ಗೊತ್ತಾಗಿದೆ. ಬೆಂಗಳೂರು ನಗರದ ಜನ ಚುನಾವಣೆ ಬರಲಿ ಎಂದು ಕಾಯುತ್ತಿದ್ದಾರೆ. ಚುನಾವಣೆಯಲ್ಲಿ ಬೆಂಗಳೂರು ಜನ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

ಬಿಬಿಎಂಪಿ ಮೈತ್ರಿ ಅಂತ್ಯ?: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ಯಾವುದೇ ಅಧಿಕಾರವಿಲ್ಲ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಎಲ್ಲ ಅಧಿಕಾರ ಸಚಿವ ಕೆ.ಜೆ.ಜಾರ್ಜ್ ಕೈಯಲ್ಲಿದೆ. ಹೈ ಪವರ್ ಕಮಿಟಿ ಮಾಡಿಕೊಂಡು ಸಾವಿರಾರು ಕೋಟಿ ಹಣ ಲೂಟಿ ಹೊಡೆಯಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಇಂತಹವರಿಗೆ ನಾವು ಬೆಂಬಲ ನೀಡಬೇಕೇ? ಬಿಬಿಎಂಪಿಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವ ಕುರಿತು ಶೀಘ್ರವೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎನ್ನುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯನ್ನು ಅಂತ್ಯಗೊಳಿಸುವ ಕುರಿತು ಅವರು ಮುನ್ಸೂಚನೆ ನೀಡಿದರು.

ರಾಜ್ಯ ಸರಕಾರದಲ್ಲಿ ಒಂದೇ ಒಂದು ಭ್ರಷ್ಟಾಚಾರ ನಡೆದಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಸಾವಿರಾರು ಕೋಟಿ ರೂಪಾಯಿ ಲೂಟಿ ಹೊಡೆಯುವಲ್ಲಿ ಕಾಂಗ್ರೆಸ್ ಶಾಸಕರು, ಸಚಿವರು ತಲ್ಲೀನರಾಗಿದ್ದಾರೆ. ಅರ್ಕಾವತಿ ಡಿನೋಟಿಫಿಕೆಷನ್ ಹಗರಣ ಮುಚ್ಚಿಹಾಕಲು ನ್ಯಾ.ಕೆಂಪಣ್ಣ ಆಯೋಗ ರಚನೆ ಮಾಡಲಾಗಿದೆ. ಅದಕ್ಕಿಂತ ದೊಡ್ಡ ಹಗರಣ ಮುಖ್ಯಮಂತ್ರಿಗೆ ಬೇಕಾ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ವಾಂಗೀಬಾತ್-ಮನ್ ಕೀ ಬಾತ್ ಅಂತ ಮಾತನಾಡುತ್ತಾರೆ. ಮಳೆ ಬಂದು ಬೆಂಗಳೂರಿನಲ್ಲಿ ಜನಸಾಮಾನ್ಯರು ಪರದಾಡುತ್ತಿದ್ದರೆ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರು ಬಿಸಿಬೇಳೆ ಬಾತ್ ತಿನ್ನುವಲ್ಲಿ ತಲ್ಲೀನರಾಗಿದ್ದರು ಎಂದು ಅವರು ಕಿಡಿಗಾರಿದರು.


ಯುದ್ಧಕ್ಕೆ ತಯಾರಾಗುತ್ತೇನೆ

ನನ್ನ ಆರೋಗ್ಯ ಸುಧಾರಿಸಿದೆ. ವಾಸಿಯಾಗದ ಆರೋಗ್ಯ ಸಮಸ್ಯೆಯಿಂದ ನಾನು ಬಳಲುತ್ತಿಲ್ಲ. ಕಫ ಮತ್ತು ಕೆಮ್ಮಿನಿಂದ ಮಾತ್ರ ಬಳಲುತ್ತಿದ್ದೆ. ಒಂದು ವಾರದಲ್ಲಿ ಯುದ್ಧಕ್ಕೆ ತಯಾರಾಗುತ್ತೇನೆ. ಉತ್ತರ ಕರ್ನಾಟಕ ಭಾಗದಲ್ಲಿ 35 ರಿಂದ 40 ಸ್ಥಾನ ಗೆಲ್ಲುವುದು ನಮ್ಮ ಗುರಿ. ಹೀಗಾಗಿ ಉತ್ತರ ಕರ್ನಾಟಕ ಭಾಗದ ಪ್ರವಾಸಕ್ಕೆ ತಯಾರಾಗುತ್ತಿದ್ದೇನೆ.

-ಎಚ್.ಡಿ.ಕುಮಾರಸ್ವಾಮಿ, 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X