ಉಡುಪಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಕಾಪು, ಆ.18: ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವನ್ನು ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.
ಪಂದ್ಯಾಟವನ್ನು ಉದ್ಘಾಟಿಸಿದ ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಮಾತನಾಡಿ, ಕಬಡ್ಡಿ ನಮ್ಮ ದೇಸೀ ಕ್ರೆಡೆಯಾಗಿದ್ದು, ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಮತ್ತು ಶಾರೀರಿಕ ಬೆಳವಣಿಗೆಗೆ ಪೂರಕವಾಗಿದೆ. ವಿದ್ಯಾರ್ಥಿಗಳು ವಿವಿಧ ಕ್ರೆಡಾಕೂಟಗಳಲ್ಲಿ ನಿರಂತರವಾಗಿ ಭಾಗವಹಿಸುವುದರೊಂದಿಗೆ ತಮ್ಮಲ್ಲಿ ಆತ್ಮ ವಿಶ್ವಾಸವನ್ನು ಮೂಡಿಸಿ, ಗೆಲ್ಲುವ ಛಲವನ್ನು ವೃದ್ಧಿ ಸಿಕೊಳ್ಳಬೇಕು ಎಂದು ಹೇಳಿದರು.
ಪಂದ್ಯಾಟವನ್ನು ಉದ್ಘಾಟಿಸಿದ ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಮಾತನಾಡಿ, ಕಬಡ್ಡಿ ನಮ್ಮ ದೇಸೀ ಕ್ರೆಡೆಯಾಗಿದ್ದು, ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಮತ್ತು ಶಾರೀರಿಕ ಬೆಳವಣಿಗೆಗೆ ಪೂರಕವಾಗಿದೆ. ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟಗಳಲ್ಲಿ ನಿರಂತರವಾಗಿ ಭಾಗವಹಿಸುವುದರೊಂದಿಗೆ ತಮ್ಮಲ್ಲಿ ಆತ್ಮ ವಿಶ್ವಾಸವನ್ನು ಮೂಡಿಸಿ, ಗೆಲ್ಲುವ ಛಲವನ್ನು ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.
ಕಾಪು ಪುರಸಭೆಯ ಮುಖ್ಯಾಧಿಕಾರಿ ರಾಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣ ಮತ್ತು ಕ್ರೆಡೆಯಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಗಳನ್ನು ಅನಾವರಣ ಗೊಳಿಸುವುದರೊಂದಿಗೆ ಪರಿಸರ ನೈರ್ಮಲ್ಯಕ್ಕೂ ಹೆಚ್ಚಿನ ಒತ್ತು ನೀಡಬೇಕು. ತ್ಯಾಜ್ಯ ಮುಕ್ತ ಪರಿಸರ ನಿರ್ಮಾಣದಲ್ಲಿ ಹಿರಿಯರಿಗೆ ಮಾರ್ಗದರ್ಶನ ನೀಡುವಲ್ಲಿ ವಿದ್ಯಾರ್ಥಿಗಳು ಪ್ರಮುಖ ಪಾತ್ರ ನಿವಹಿರ್ಸಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣ ಆಚಾರ್ಯ ವಹಿಸಿದ್ದರು. ಕಾಪು ಪುರಸಭಾಧ್ಯಕ್ಷೆ ಸೌಮ್ಯ ಎಸ್., ಉಪಾಧ್ಯಕ್ಷ ಎಚ್.ಉಸ್ಮಾನ್, ಸದಸ್ಯ ಅನಿಲ್ ಕುಮಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶೇಖರ್ ಗೌಡ ಪಾಟೀಲ್, ಜೇಸಿಐ ರಾಷ್ಟ್ರೀಯ ಕಾರ್ಯಕ್ರಮಗಳ ನಿರ್ದೇಶಕ ರಾಕೇಶ್ ಕುಂಜೂರು, ಗಿರೀಶ್ ಪಾತ್ರಿ, ಸಿಆರ್‌ಪಿ ಇಂದಿರಾ, ಎಸ್‌ಡಿಎಂಸಿ ಉಪಾಧ್ಯಕ್ಷೆ ಆಶಾ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ರಜನಿ ಸ್ವಾಗತಿಸಿದರು. ಶಿಕ್ಷಕಿ ಉಷಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ವಿ್ಯಾವತಿ ಕಾರ್ಯಕ್ರಮ ನಿರೂಪಿಸಿದರು.







