Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಲಸಮಾವೇಶದಲ್ಲಿ ಕೈಗೊಂಡ ನಿರ್ಧಾರಗಳು...

ಜಲಸಮಾವೇಶದಲ್ಲಿ ಕೈಗೊಂಡ ನಿರ್ಧಾರಗಳು ಕಾರ್ಯರೂಪಕ್ಕೆ ಬರಲಿ: ಸಿಎಂ

ರಾಷ್ಟ್ರೀಯ ಜಲ ಸಮಾವೇಶಕ್ಕೆ ತೆರೆ

ವಾರ್ತಾಭಾರತಿವಾರ್ತಾಭಾರತಿ18 Aug 2017 8:59 PM IST
share
ಜಲಸಮಾವೇಶದಲ್ಲಿ ಕೈಗೊಂಡ ನಿರ್ಧಾರಗಳು ಕಾರ್ಯರೂಪಕ್ಕೆ ಬರಲಿ: ಸಿಎಂ

ವಿಜಯಪುರ, ಆ.18: ರಾಷ್ಟ್ರೀಯ ಜಲ ಸಮಾವೇಶದಲ್ಲಿ ಕೈಗೊಂಡ ನಿರ್ಧಾರಗಳು ನೀತಿ ಆಯೋಗದಲ್ಲಿ ಚರ್ಚೆ ಆಗುವ ಜೊತೆಗೆ ಸಮರ್ಪಕವಾಗಿ ಕಾರ್ಯರೂಪಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ಬಿಎಲ್‌ಡಿಇ ವಿಶ್ವವಿದ್ಯಾಲಯದ ಆವರಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ ಬರ ಮುಕ್ತ ಭಾರತಕ್ಕಾಗಿ ರಾಷ್ಟ್ರೀಯ ಜಲ ಸಮಾವೇಶದ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅರಣ್ಯ ಸಂಪತ್ತನ್ನು ಕಾಪಾಡುವುದರ ಮೂಲಕ ಪ್ರಕೃತಿ ಸಮತೋಲನ ಕಾಯ್ದುಕೊಳ್ಳಬೇಕು. ಲಭ್ಯ ನೀರನ್ನು ಸಾಧ್ಯವಾದಷ್ಟು ಹೆಚ್ಚು ಜನರಿಗೆ ದೊರೆಯುವಂತೆ ಮಾಡಬೇಕು. ಆಧುನಿಕ ಜಲ ತಂತ್ರಜ್ಞಾನ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯ ಕೇವಲ ಶೇ.34 ನಷ್ಟು ಮಾತ್ರ ನೀರಾವರಿ ಹೊಂದಿದೆ. ಮಳೆಯಾಧಾರಿತ ವ್ಯವಸಾಯವೇ ಹೆಚ್ಚಾಗಿದೆ. ಪ್ರಕೃತಿ ಸಮತೋಲನಕ್ಕೆ ಮೂರನೇ ಒಂದರಷ್ಟು ಅರಣ್ಯವನ್ನು ಸಂರಕ್ಷಿಸಬೇಕಿದೆ ಎಂದು ತಿಳಿಸಿದರು. ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ, ವಿಜಯಪುರ ಘೋಷಣೆ ಪ್ರಕಟಿಸಿದ ಬಳಿಕ ಮಾತನಾಡಿದ ಅವರು, ಜಲ ಸಾಕ್ಷರತೆಯ ಧ್ಯೇಯೋದ್ದೇಶಗಳನ್ನು ಸಾಧಿಸಲು ದೇಶಾದ್ಯಂತ 21 ನದಿ ಸಂಸತ್ತನ್ನು ರಚಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ದೇಶದ 101 ನದಿಗಳ ನೀರು ತುಂಬಿದ ಕಳಶವನ್ನು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಗೆ ಹಸ್ತಾಂತರಿಸಿದರು.

 ಇದೇ ವೇಳೆ ಕೃಷ್ಣಾ ನದಿ ನೀರು ತುಂಬಿದ ಕಳಶವನ್ನು ಜಲ ತಜ್ಞ ರಾಜೇಂದ್ರಸಿಂಗ್ ಅವರಿಗೆ ಹಸ್ತಾಂತರಿಸಲಾಯಿತು. ಕರ್ನಾಟಕ ಅಂಚೆ ಇಲಾಖೆಯಿಂದ ಜಲವೇ ಸಂಪತ್ತು ವಿಶೇಷ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು, ಮಮದಾಪುರ ವೀರಕ್ತಮಠದ ಅಭಿನವ ಮುರುಘೇಂದ್ರ ಮಹಾಸ್ವಾಮೀಜಿ, ಸಂಸದೀಯ ಕಾರ್ಯದರ್ಶಿ ಡಾ.ಮಕ್ಬೂಲ್ ಭಗವಾನ್ ಇತರರು ಪಾಲ್ಗೊಂಡಿದ್ದರು.

‘ಡಿನೋಟಿಫೈ ಮಾಡುವ ಪ್ರಸ್ತಾಪ ಸರಕಾರದ ಮುಂದಿಲ್ಲ. ಯಾವುದೇ ಕಾರಣಕ್ಕೂ ಕೆರೆಗಳನ್ನು ಡಿನೋಟಿಫೈ ಮಾಡುವುದಿಲ್ಲ. ಈ ವಿಚಾರದಲ್ಲಿ ಅನಗತ್ಯವಾಗಿ ಅಪಪ್ರಚಾರ ಮಾಡುವುದು ಸರಿಯಲ್ಲ’

- ಸಿದ್ದರಾಮಯ್ಯ,ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X