22ನೆ ದ.ಕ. ಜಿಲ್ಲಾ ಸಾಹಿತ್ಯ ಸಮ್ಮೇಳನ
ಮಂಗಳೂರು, ಆ. 18: ಮುಂಬರುವ ನವೆಂಬರ ತಿಂಗಳಿನಲ್ಲಿ ಸುಳ್ಯದಲ್ಲಿ 22ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವುದೆಂದು ಸಾಹಿತ್ಯ ಪರಿಷತ್‌ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.
ಪೂರ್ವ ಸಭೆ ಈ ಸಮ್ಮೇಳನದ ರೂಪುರೇಷೆಗಳನ್ನು ಸಿದ್ಧಪಡಿಸುವ, ಸಮ್ಮೇಳನ ಸಮಿತಿಗಳನ್ನು ರಚಿಸಿ ಮುಂದಿನ ಚಟುವಟಿಕೆಗಳಿಗೆ ವೇಗ ತರುವ ನಿಟ್ಟಿನಲ್ಲಿ ಆ. 26ರಂದು ಸುಳ್ಯ ಕನ್ನಡ ಭವನದಲ್ಲಿ ಮಧ್ಯಾಹ್ನ 2:30ಕ್ಕೆ ಸಾಹಿತ್ಯಾಸಕ್ತರ ಸಭೆಯನ್ನು ಕರೆಯಲಾಗಿದೆ.
ಸಭೆಯಲ್ಲಿ ಸಾಹಿತಿಗಳು, ಕನ್ನಡಾಭಿಮಾನಿಗಳು, ಸಾಹಿತ್ಯ ಪರಿಷತ್‌ನ ಸದಸ್ಯರು, ಕನ್ನಡ ಪರ ಸಂಘಟನೆಗಳು, ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡುವಂತೆ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ.ಹರಿಪ್ರಸಾದ್ ತುದಿಯಡ್ಕ (ಮೊಬೈಲ್: 9341126260) ಮತ್ತು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ಬಿ. ತಮ್ಮಯ್ಯ (ಮೊ. 9886819771) ಅವರನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.







