ಯುವಕನಿಂದ ಕಿರುಕುಳ: ವಿದ್ಯಾರ್ಥಿನಿ ದೂರು
ಬೆಳ್ಳಾರೆ, ಆ.18: ಭಿನ್ನ ಕೋಮಿನ ಯುವಕನೋರ್ವ ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಆಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೋರ್ವಳು ಬೆಳ್ಳಾರೆ ಠಾಣೆಯಲ್ಲಿ ಗುರುವಾರ ದೂರು ನೀಡಿದ್ದಾರೆ.
ಪೆರುವಾಜೆಯ ಹಕೀಂ ಎಂಬಾತ ಕಳೆದ ಎಪ್ರಿಲ್ ತಿಂಗಳಿನಿಂದ ನಿರಂತರವಾಗಿ ನನ್ನನ್ನು ಹಿಂಬಾಲಿಸಿಕೊಂಡು ಬಂದು ಪ್ರೀತಿಸುವಂತೆ ಕಾಡುತ್ತಿದ್ದಾನೆ ಎಂದು ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಈ ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ.
ಬೆಳ್ಳಾರೆ ಪೊಲೀಸರು ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
Next Story