ಪಿಎಸ್ಸೈ ಪರೀಕ್ಷೆ ಸೆ.17ಕ್ಕೆ ಮುಂದೂಡಿಕೆ
ಬೆಂಗಳೂರು, ಆ.19: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಸೆ.10ರಂದು ನಡೆಯಬೇಕಾಗಿದ್ದ ಪರೀಕ್ಷೆಯನ್ನು ಸೆ.17ಕ್ಕೆ ಮುಂದೂಡಲಾಗಿದೆ. ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಜತೆಗೆ ಕೆಪಿಎಸ್ಸಿ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸೆ.10ಕ್ಕೆ ಜಲಸಂಪನ್ಮೂಲ ಇಲಾಖೆಯ ಸಹಾಯಕ ಮತ್ತು ಕಿರಿಯ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಕೆಪಿಎಸ್ಸಿ ಪರೀಕ್ಷೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಸೆ.10ರಂದು ನಡೆಯಬೇಕಿದ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪಿಎಸ್ಸೈ ನೇಮಕಾತಿ ಲಿಖಿತ ಪರೀಕ್ಷೆ ಹಾಗೂ ಕೆಪಿಎಸ್ಸಿ ಪರೀಕ್ಷೆ ಒಂದೇ ದಿನ ಇದ್ದುದರಿಂದ ಎರಡೂ ಪರೀಕ್ಷೆ ಬರೆಯಲು ಇಚ್ಛಿಸುವವರಿಗೆ ತೊಂದರೆಯಾಗುತ್ತಿತ್ತು. ಹೀಗಾಗಿ ದಿನಾಂಕ ಬದಲು ಮಾಡುವಂತೆ ಅಭ್ಯರ್ಥಿಗಳು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story





