ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 3 ವರ್ಷ ಸಜೆ
ಚಿಕ್ಕಮಗಳೂರು, ಆ.19: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 3 ವರ್ಷಗಳ ಸಜೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ನಗರದ 1ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ.
ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ಶಂಕರಪುರ ವಾಸಿ ಆರೋಪಿ ವೆಂಕಟೇಶ ಎಂಬಾತ ರಮ್ಯ (ಹೆಸರು ಬದಲಿಸಿದೆ) ಎಂಬ 3 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಂಗಳದಲ್ಲಿ ಆಟವಾಡುತ್ತಿದ್ದಾಗ ಮನೆಗೆ ಕರೆದೋಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕಲಂ. 8 ರ ಅಡಿಯಲ್ಲಿ ಚಿಕ್ಕಮಗಳೂರು ಠಾಣೆ ಪೊಲೀಸ್‍ರು ಪ್ರಕರಣ ದಾಖಲಿಸಿಕೊಂಡು ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಡಿ.ಕಂಬೇಗೌಡ ಆರೋಪಿ ವೆಂಕಟೇಶಗೆ 3 ವರ್ಷ ಸಜೆ ಹಾಗೂ ರೂ. 10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಆರ್. ನಾಗರಾಜ್ ಮೊಕದ್ದಮೆಯನ್ನು ನಡೆಸಿದ್ದರು.





