Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳು ಭಾಷೆಯ ಬೆಳವಣಿಗೆಗೆ ಸಾಫ್ಟ್‌ವೇರ್...

ತುಳು ಭಾಷೆಯ ಬೆಳವಣಿಗೆಗೆ ಸಾಫ್ಟ್‌ವೇರ್ ಬಳಕೆ: ಪ್ರೊ. ಬಿ.ಎ. ವಿವೇಕ ರೈ ಸಲಹೆ

ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷರ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ19 Aug 2017 8:49 PM IST
share
ತುಳು ಭಾಷೆಯ ಬೆಳವಣಿಗೆಗೆ ಸಾಫ್ಟ್‌ವೇರ್ ಬಳಕೆ: ಪ್ರೊ. ಬಿ.ಎ. ವಿವೇಕ ರೈ ಸಲಹೆ

ಮಂಗಳೂರು, ಆ.19: ತುಳು ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವ ಸಲುವಾಗಿ ಮತ್ತು ಭಾಷೆಯ ಬೆಳವಣಿಗೆಗೆ ಸಾಫ್ಟ್‌ವೇರ್ ಬಳಕೆ ಮಾಡಬೇಕಾಗಿದೆ ಎಂದು ಹಿರಿಯ ವಿದ್ವಾಂಸ ಮತ್ತು ತುಳು ಸಾಹಿತ್ಯ ಅಕಾಡಮಿಯ ಪ್ರಥಮ ಮತ್ತು ದ್ವಿತೀಯ ಅವಧಿಯ ಅಧ್ಯಕ್ಷ ಪ್ರೊ. ಬಿ.ಎ.ವಿವೇಕ ರೈ ಹೇಳಿದರು.

ನಗರದ ಉರ್ವಸ್ಟೋರ್‌ನಲ್ಲಿರುವ ತುಳುಭವನದಲ್ಲಿ ಶನಿವಾರ ನಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ 9ನೆ ಅವಧಿಯ ಅಧ್ಯಕ್ಷ ಎ.ಸಿ. ಭಂಡಾರಿ ಮತ್ತವರ ತಂಡದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ತುಳು ವಿಕಿಪೀಡಿಯಾ ಭಾಷೆಯ ಬೆಳವಣಿಗೆಗೆ ಸಹಕಾರಿಯಾಗಿದೆ. ಅಂತರ್ಜಾಲದಲ್ಲೂ ಕೂಡ ತುಳು ಭಾಷೆಗಾಗಿ ಕೆಲಸ ಕಾರ್ಯ ನಡೆಯುತ್ತಿದೆ. ಆದರೆ ಸೂಕ್ತ ಮಾರ್ಗದರ್ಶನದ ಕೊರತೆಯಿದೆ. ಈ ನಿಟ್ಟಿನಲ್ಲಿ ಅಕಾಡಮಿಯು ನಾಟಕ, ಸಿನೆಮಾ, ಸಾಂಸ್ಕೃತಿಕ, ಅನುವಾದ, ಸಾಫ್ಟ್‌ವೇರ್ ಇತ್ಯಾದಿಯಾಗಿ ಪ್ರತ್ಯೇಕ ತಂಡ ಕಟ್ಟಿಕೊಂಡು ಕೆಲಸ ಮಾಡಬೇಕಾಗಿದೆ ಎಂದು ಪ್ರೊ. ಬಿ.ಎ. ವಿವೇಕ ರೈ ನುಡಿದರು.

ರೋಮನ್ ಲಿಪ್ಯಂತರ ಬಳಸಿಕೊಂಡು ತುಳು ಭಾಷೆಯನ್ನು ಬೆಳೆಸಬೇಕಿದೆ. ಸಾಫ್ಟ್‌ವೇರ್ ಕ್ಷೇತ್ರದ ಅನೇಕ ಉತ್ಸಾಹಿ ಯುವಕರು ತುಳು ಭಾಷೆಗಾಗಿ ಕೆಲಸ ಮಾಡಲು ಸಿದ್ಧರಿದ್ದಾರೆ. ಅಕಾಡಮಿಯು ಕಲೆ, ಸಂಸ್ಕೃತಿಗೆ ಮಾತ್ರ ಸೀಮಿತಗೊಳ್ಳದೆ ಅನುವಾದ, ವ್ಯಾಕರಣ ಇತ್ಯಾದಿ ಅಕಡಮಿಕ್ ಕೆಲಸಕ್ಕೆ ಆದ್ಯತೆ ನೀಡಬೇಕು. ತುಳು ಸಾಹಿತ್ಯವನ್ನು ಇಂಗ್ಲಿಷ್ ಸಹಿತ ಇತರ ಭಾಷೆಗಳಿಗೆ ಅನುವಾದಕ್ಕೆ ಪ್ರೋತ್ಸಾಹ ನೀಡಬೇಕು ಎಂದು ವಿವೇಕ ರೈ ಹೇಳಿದರು.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಶಾಸಕರಾದ ಅಭಯಚಂದ್ರ ಜೈನ್, ಬಿ.ಎ. ಮೊಯ್ದಿನ್ ಬಾವಾ, ಮೇಯರ್ ಕವಿತಾ ಸನಿಲ್ ಶುಭ ಹಾರೈಸಿದರು.

ಅಕಾಡಮಿಯ ಮಾಜಿ ಅಧ್ಯಕ್ಷರಾದ ಡಾ. ವಾಮನ ನಂದಾವರ, ಸೀತಾರಾಮ ಕುಲಾಲ್, ಜಾಗತಿಕ ಬಂಟರ ಸಂಘದ ಉಪಾಧ್ಯಕ್ಷ ಐಕಳ ಹರೀಶ್ ಶೆಟ್ಟಿ, ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ದೇವಾಡಿಗ, ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಮನಪಾ ಸಚೇತಕ ಶಶಿಧರ ಹೆಗ್ಡೆ, ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ, ನೂತನ ಸದಸ್ಯರಾದ ಸುಧಾ ನಾಗೇಶ್, ವಿಜಯಾ ಶೆಟ್ಟಿ, ತಾರಾನಾಥ ಗಟ್ಟಿ ಕಾಪಿಕಾಡು, ಗೋಪಾಲ್ ಅಂಚನ್, ವಿದ್ಯಾಶ್ರೀ, ದುರ್ಗಾ ಮೆಮನ್, ಶಿವಾನಂದ ಕರ್ಕೇರಾ, ಬೆನೆಟ್ ಅಮ್ಮಣ್ಣ. ಚಂದ್ರಶೇಖರ ಗಟ್ಟಿ ಬೋಳೂರು, ಡಾ. ವಾಸುದೇವ ಬೆಳ್ಳೆ, ನಿರಂಜನ ರೈ ಮಠಂತಬೆಟ್ಟು, ಡಾ. ವೈ.ಎನ್. ಶೆಟ್ಟಿ ಉಪಸ್ಥಿತರಿದ್ದರು.


ಅಕಾಡಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಸ್ವಾಗತಿಸಿದರು. ಅಕಾಡಮಿಯ ಮಾಜಿ ಸದಸ್ಯರಾದ ಡಿ.ಎಂ. ಕುಲಾಲ್ ನೂತನ ಅಧ್ಯಕ್ಷರ ಪರಿಚಯ ಮಾಡಿದರು. ದುರ್ಗಾಪ್ರಸಾದ್ ರೈ ಕುಂಬ್ರ ಕಾರ್ಯಕ್ರಮ ನಿರೂಪಿಪಿಸಿದರು.

ನಿಕಟಪೂರ್ವ ಅಧ್ಯಕ್ಷೆ ಜಾನಕಿ ಬ್ರಹ್ಮಾವರ ಅವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಎ.ಸಿ. ಭಂಡಾರಿ ತುಳು ಸಾಹಿತಿಗಳು, ಕಲಾವಿದರು, ವಿದ್ವಾಂಸರನ್ನು ಜತೆಗೂಡಿಸಿಕೊಂಡು ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ತುಳು ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X