Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧರ್ಮದ ಹೆಸರಿನಲ್ಲಿ ದಾರಿ ತಪ್ಪಿಸುವವರ...

ಧರ್ಮದ ಹೆಸರಿನಲ್ಲಿ ದಾರಿ ತಪ್ಪಿಸುವವರ ಬಗ್ಗೆ ಎಚ್ಚರ: ಶ್ರೀವಿಜಯಾನಂದ ಸ್ವಾಮಿ

ಮಾನವ ಬಂಧುತ್ವ ವಲಯ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ20 Aug 2017 5:19 PM IST
share
ಧರ್ಮದ ಹೆಸರಿನಲ್ಲಿ ದಾರಿ ತಪ್ಪಿಸುವವರ ಬಗ್ಗೆ ಎಚ್ಚರ: ಶ್ರೀವಿಜಯಾನಂದ ಸ್ವಾಮಿ

ಉಡುಪಿ, ಆ.20: ಜನಿವಾರದ ಸ್ವಾಮೀಜಿ ಅಲ್ಲ ಎಂಬ ಕಾರಣಕ್ಕೆ ಕೊಲ್ಲೂರು ಶ್ರೀಸದ್ಗುರು ನಿತ್ಯಾನಂದ ಮಠದ ವಿಮಲಾನಂದ ಸ್ವಾಮೀಜಿಯ ಸಮಾಧಿ ತೆರವು ಮಾಡಲು ಮುಂದಾಗಿರುವ ಮನಸ್ಥಿತಿಯು ಹಿಂದುಗಳೆಲ್ಲಾ ಒಂದು ಎಂದು ಒಪ್ಪಲು ಸಿದ್ಧರಿಲ್ಲ ಎಂಬುವುದಕ್ಕೆ ನಿದರ್ಶನ. ಹಾಗಾಗಿ ಧರ್ಮದ ಹೆಸರಿನಲ್ಲಿ ದಾರಿ ತಪ್ಪಿಸುವವರ ಬಗ್ಗೆ ಬಹಳ ಎಚ್ಚರ ವಹಿಸಬೇಕಾಗಿದೆ ಎಂದು ಬೈಲಹೊಂಗಳ ತಾಲೂಕಿನ ಬೇವಿನಕೊಪ್ಪ ಆನಂದ ಮಠದ ನಿತ್ಯಾನಂದ ಧ್ಯಾನ ಕೇಂದ್ರದ ಶ್ರೀವಿಜಯಾನಂದ ಸ್ವಾಮಿ ಹೇಳಿದ್ದಾರೆ.

ಕರ್ನಾಟಕ ಮಾನವ ಬಂಧುತ್ವ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿ ಯಿಂದ ಕಟಪಾಡಿ ಶ್ರೀವಿಶ್ವನಾಥ ಕ್ಷೇತ್ರದ ಶ್ರೀನಾರಾಯಣ ಗುರು ಸಭಾಭವನ ದಲ್ಲಿ ಆಯೋಜಿಸಲಾದ ಶ್ರೀನಾರಾಯಣ ಗುರುಗಳ ಜಯಂತಿ ಮತ್ತು ಮಂಗ ಳೂರು ವಲಯ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕೋಟ್ಯಂತರ ರೂ. ಹಣ ವೆಚ್ಚ ಮಾಡಿ ರಾಮಮಂದಿರ ಕಟ್ಟುವವರು ಇಂದು ಶಾಲೆಗೆ ಕೊಲ್ಲೂರಿನ ದೇವಸ್ಥಾನದ ಹಣ ನೀಡುವುದನ್ನು ಸ್ಥಗಿತಗೊಳಿಸಿದ ರೆಂದು ಬೀದಿಯಲ್ಲಿ ಭಿಕ್ಷೆ ಬೇಡುವ ನಾಟಕ ಆಡುತ್ತಿರುವುದು ವಿಪರ್ಯಾಸವೇ ಸರಿ. ಒಳ್ಳೆಯ ಕೆಲಸ ಮಾಡಿದರೆ ಹಣಕ್ಕೆ ಯಾವುದೇ ಕೊರತೆ ಆಗಲ್ಲ. ನಾವು ಬದಲಾಗಬೇಕೆ ಹೊರತು ಜಗತ್ತನ್ನು ಬದಲಿಸಲು ನಮಗೆ ಸಾಧ್ಯವಿಲ್ಲ ಎಂದರು.

ಗುರು ಅಂದರೆ ದಾರಿ ತೋರಿಸುವ ಮೈಲುಗಲ್ಲು. ಆದರೆ ಇಂದು ಗುರುಗಳು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆಸೆಯನ್ನು ಸುಟ್ಟ ಸನ್ಯಾಸಿಗಳು ಮಾತ್ರ ಗುರುಗಳಾಗಲು ಸಾಧ್ಯ. ಖಾವಿ ತೊಟ್ಟ ಎಲ್ಲರು ಗುರುಗಳಲ್ಲ ಎಂದು ಅರಿಯ ಬೇಕು. ಮತಗಳು ಬೇರೆ ಬೇರೆಯಾಗಿದ್ದರೂ ಎಲ್ಲಾ ಮತಗಳ ಧರ್ಮ ಒಂದೇ ಆಗಿದೆ. ಅದುವೇ ಮಾನವ ಧರ್ಮ ಎಂದು ಅವರು ತಿಳಿಸಿದರು.

ಕಾಪು ಶಾಸಕ ವಿನಯ ಕುಮಾರ್ ಸೊರಕೆ ಮಾತನಾಡಿ, ಜಾತಿ ಧರ್ಮದ ಹೆಸರಿನಲ್ಲಿ ತುಳಿತಕೊಳಗಾದ ಸಮುದಾಯವನ್ನು ಎಚ್ಚರಿಸಿದ್ದ ನಾರಾಯಣ ಗುರುಗಳು, ಅವರಿಗೆ ಸರಿಯಾದ ದಾರಿಯನ್ನು ತೋರಿಸಿಕೊಟ್ಟರು. ಇದರ ಪರಿಣಾಮ ಇಂದು ಸಮಾಜದಲ್ಲಿ ತಲೆ ಎತ್ತಿ ನಡೆಯುತ್ತಿರುವ ಈ ಸಮು ದಾಯಗಳನ್ನು ಮತ್ತೆ ಧರ್ಮದ ಹೆಸರಲ್ಲಿ ದಾರಿ ತಪ್ಪಿಸುವ ಕೆಲಸ ಮಾಲಾಗುತ್ತಿದೆ ಎಂದು ಆರೋಪಿಸಿದರು.

ನಿವೃತ್ತ ಐಎಎಸ್ ಅಧಿಕಾರಿ ಟಿ.ಆರ್.ರಘುನಂದನ್ ‘ವೈದಿಕ ಧರ್ಮದ ಅಮಾನವೀಯತೆಯನ್ನು ದಿಕ್ಕರಿಸಿದ ನಾರಾಯಣಗುರು ಪರಂಪರೆ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಟ ಡಾ.ರಾಜಶೇಖರ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆ ಯನ್ನು ವೇದಿಕೆಯ ರಾಜ್ಯ ಸಂಚಾಲಕ ವಿಲ್‌ಫ್ರೇಡ್ ಡಿಸೋಜ ವಹಿಸಿದ್ದರು.

ಮಂಗಳೂರು ವಿವಿಯ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ಸಬಿತಾ, ಮಂಗಳೂರು ಕುದ್ಮಲ್ ರಂಗರಾವ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಆರ್. ಕೇಶವ ಧರಣಿ, ಡಾ.ಲೀಲಾ, ಕಾಪು ಪುರಸಭೆ ಅಧ್ಯಕ್ಷೆ ಸೌಮ್ಯಾ ಸಂಜೀವ್, ಕಟಪಾಡಿ ಶ್ರೀವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಅಶೋಕ್ ಎಂ.ಸುವರ್ಣ, ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್, ಮಾನವ ಬಂಧುತ್ವ ವೇದಿಕೆಯ ಉಡುಪಿ ಜಿಲ್ಲಾ ಗೌರವ ಸಂಚಾಲಕ ಪ್ರಭಾಕರ್ ಪೂಜಾರಿ, ಜಿಲ್ಲಾ ಸಮಿತಿಯ ಸದಸ್ಯ ರಾದ ನವೀನ್ ಅಮೀನ್ ಶಂಕರಪು, ಪ್ರಭಾ ವಿ.ಶೆಟ್ಟಿ ಉಪಸ್ಥಿತರಿದ್ದರು.

ಮಂಗಳೂರು ವಲಯ ಸಂಚಾಲಕ ಕೆ.ಎಸ್.ಸತೀಶ್ ಕುಮಾರ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ದಿನೇಶ್ ಕೋಟ್ಯಾನ್ ಸ್ವಾಗತಿಸಿದರು. ರಾಜೇಶ್ ದೇವಾಡಿಗ ಪಡುಬಿದ್ರಿ, ಜಯವಂತ ರಾವ್ ಹಿರಿಯಡ್ಕ, ನವ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X