Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ...

ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಘಟಕ ಉದ್ಘಾಟನೆ, ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ20 Aug 2017 8:49 PM IST
share
ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಘಟಕ ಉದ್ಘಾಟನೆ, ಸಾಹಿತ್ಯ ಸಮ್ಮೇಳನ

ಬೆಳ್ತಂಗಡಿ, ಆ. 20: ಜ್ಞಾನ ಸಂಪಾದನೆಯಿಂದ ವ್ಯಕ್ತಿಯ ಹಾಗೂ ದೇಶದ ಉನ್ನತಿ ಸಾಧ್ಯ. ಮಲೀನ ಮನಸ್ಸುಗಳಿಂದ ದೇಶ ಕಟ್ಟಲು ಸಾಧ್ಯವಿಲ್ಲ ಎಂದು ಸಾಹಿತಿ, ಕರ್ನಾಟಕ ವಿಧಾನ ಪರಿಷತ್ ಮಾಜಿ ಸದಸ್ಯ ಕರ್ನಾಟಕ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ  ದೊಡ್ಡರಂಗೇ ಗೌಡ ಹೇಳಿದರು.

ಅವರು ರವಿವಾರ ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಉದ್ಘಾಟನೆ ಮತ್ತು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತೀಯ ಸಂಸ್ಕೃತಿಯ ಪ್ರಚಾರ ದೇಶದ ಮೂಲೆ ಮೂಲೆಗಳಲ್ಲಿ ಆಗಬೇಕು. ವಿದೇಶಗಳಲ್ಲಿ ಯಾವುದೇ ಒಪ್ಪಂದಗಳು ನಡೆದರೂ ಭಾರತೀಯ ಸನಾತನ ಸಂಸ್ಕೃತಿಗೆ ಅಪಾಯವಿಲ್ಲ. ಇದರ ಬೇರು ಭದ್ರವಾಗಿದೆ. ಭಾರತದ ಯೋಗ, ಆಯುರ್ವೇದ ಮಹತ್ವವನ್ನು ವಿದೇಶದಲ್ಲಿ ಕೊಂಡಾಡಬೇಕಾದರೆ ಭಾರತಕ್ಕೆ ಎಷ್ಟು ಮೌಲ್ಯವಿದೆ ಎಂದು ಕಾಣಬಹುದು. ಯುವಜನತೆ ಭಾರತ ಮಾತೆ, ಭಾರತ ಧ್ವಜಕ್ಕೆ ಮತ್ತು ದೇಶಕಾಯುವ ಯೋದರಿಗೆ ಗೌರವ ನೀಡಿದಾಗ ಭಾರತ ಬಲಿಷ್ಠವಾಗಲು ಸಾಧ್ಯ. ಇಂದು ದೇಹ ಗಟ್ಟಿಗೊಳಿಸುವುದನ್ನು ಬಿಟ್ಟು ಶುದ್ಧ ಮನಸ್ಸನ್ನು ಬೆಳೆಸಿದಾಗ ದೇಶ ಸುಂದರವಾಗುತ್ತದೆ. ಜ್ಞಾನ ಸಂಪರ್ಕದಿಂದ ವ್ಯಕ್ತಿಯ, ದೇಶದ ಉನ್ನತಿಯಾಗುತ್ತದೆ. ವೈಜ್ಞಾನಿಕತೆಯನ್ನು ಬೆಳೆಸುವ ಮೊದಲು ನಮ್ಮ ಅಂತರಾತ್ಮವನ್ನು ಶುಚಿಗೊಳಿಸಬೇಕು ಎಂದರು.

ಪರಿಷತ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಭಾವನೆಗಳನ್ನು ಅರಳಿಸುವ ಕಾರ್ಯ ಸಾಹಿತ್ಯದಿಂದ ಆಗುತ್ತಿದ್ದು ಜೊತೆಗೆ ಭಾಷೆಯು ಸಮೂಹ ಮಾದ್ಯಮವಾಗಿ ಬೆಳೆಯುತ್ತಿದೆ ಎಂಬುದನ್ನು ಭಾವಿಸಬೇಕು. ಇಂದು ಭಾಷಾ ವಿಚಾರದಲ್ಲಿ ದೇಶವನ್ನು ಮತ್ತು ಜಾತೀಯತೆ ಯನ್ನು ಒಡೆಯುವ ಕಾರ್ಯವಾಗುತ್ತಿರುವುದು ವಿಷಾದನೀಯ. ಸಾಹಿತ್ಯ ಒಡೆಯುವ ಮನಸ್ಸುಗಳನ್ನು ಒಗ್ಗೂಡಿಸುವ ಕಾರ್ಯ ಮಾಡುತ್ತಿರುವುದು ಅಭಿನಂದನೀಯ ಎಂದರು.

ಕರ್ನಾಟಕ ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ದಿಕ್ಸೂಚಿ ಭಾಷಣ ಮಾಡಿದರು, ಇದೇ ಸಂದರ್ಭದಲ್ಲಿ ಹಿರಿಯರಾದ ಭೋಜರಾಜ ಹೆಗ್ಡೆ ಪಡಂಗಡಿ ಭಾಷಾಂತರಿಸಿದ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮುಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ ಶುಭ ಹಾರೈಸಿದರು. ತಾಲೂಕು ಸಾಹಿತ್ಯ ಪರಿಷತ್‌ನ ಗೌರವಾಧ್ಯಕ್ಷ ಕೆ ಪತಾಪಸಿಂಹ ನಾಯಕ್, ಸಂಚಾಲಕ ಚಂದ್ರಮೋಹನ ವುರಾಠೆ ಮುಂಡಾಜೆ ಉಪಸ್ಥಿತರಿದ್ದರು.

ತಾಲೂಕು ಘಟಕದ ಅಧ್ಯಕ್ಷ ಡಾ ಶ್ರೀಧರ ಭಟ್ ಉಜಿರೆ ಸ್ವಾಗತಿಸಿ ಮುರಳಿ ಕೃಷ್ಣ ಆಚಾರ್ ವಂದಿಸಿದರು. ದೇವುದಾಸ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X