Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗೆ...

ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗೆ ಹೋರಾಟ ಅವಶ್ಯಕ

ಅರಸು ದಿನಾಚರಣೆಯಲ್ಲಿ ಎಲ್.ಸಂದೇಶ್ ಕರೆ

ವಾರ್ತಾಭಾರತಿವಾರ್ತಾಭಾರತಿ20 Aug 2017 9:14 PM IST
share
ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗೆ ಹೋರಾಟ ಅವಶ್ಯಕ

ಮಂಡ್ಯ, ಆ.20: ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ದೊರೆಯಬೇಕಿದ್ದು,  ರಾಷ್ಟ್ರೀಯಮಟ್ಟದಲ್ಲಿ ಹೋರಾಟ ನಡೆಸುವ ಅನಿವಾರ್ಯತೆ ಇದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್ ಹೇಳಿದ್ದಾರೆ.

ನಗರದ ಸಂಜಯ ವೃತ್ತದಲ್ಲಿ  ವೇದಿಕೆ ವತಿಯಿಂದ ರವಿವಾರ ನಡೆದ ಅರಸು 102 ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ, ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.

ಜನಸಂಖ್ಯೆಗೆ ಅನುಗುಣವಾಗಿ ಹಿಂದುಳಿದ ವರ್ಗದ ಶಾಸಕರು, ಸಂಸದರು ಇಲ್ಲ. ತಳಸಮುದಾಯಗಳ ಅಂತರಾಳದ ಅಳಲುಗಳಿಗೆ ಧ್ವನಿ ಇಲ್ಲದಂತಾಗಿದ್ದು.  ಹಿಂದುಳಿದವರ ರಾಜಕೀಯ ಮೀಸಲಾತಿಗಾಗಿ ಗಂಭೀರ ಹೋರಾಟ ನಡೆಸಬೇಕಿದೆ ಎಂದು ಅವರು ಕರೆ ನೀಡಿದರು.

ಡಿ. ದೇವರಾಜ ಅರಸು ಅವರ ಅಧಿಕಾರಾವಧಿಯಲ್ಲಿ 60ಕ್ಕಿಂತ ಹೆಚ್ಚು ಮಂದಿ ಹಿಂದುಳಿದ ವರ್ಗದ ಶಾಸಕರಿದ್ದರು. ಆದರೆ, ಈಗ 30ಕ್ಕೆ ಇಳಿದಿದೆ. ಇದು ರಾಜಕೀಯ ಹಿನ್ನಡೆಯನ್ನು ತೋರುತ್ತದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳಿಂದ 100 ಕ್ಷೇತ್ರಗಳಲ್ಲಿ ಹಿಂದುಳಿದವರಿಗೆ ಟಿಕೆಟ್ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಬಸವಣ್ಣ, ಅಂಬೇಡ್ಕರ್, ನಾಲ್ವಡಿ, ಅರಸು ಅವರ ಸಾಮಾಜಿಕ ನ್ಯಾಯದ ಆಶಯವನ್ನು ಮುನ್ನಡೆಸುವುದು ಎಲ್ಲರ ಹೊಣೆಗಾರಿಕೆ ಎಂದ ಅವರು, ಅಂದು ಅರಸು ಅವರು ಜಾರಿಗೆ ತಂದ ಕಾರ್ಯಕ್ರಮಗಳ ಫಲವನ್ನು ಇಂದು ನಾವುಗಳು ಅನುಭವಿಸುತ್ತಿದ್ದೇವೆ. ಅರಸುರವರ ದೂರದೃಷ್ಠಿ ಇಂದಿನ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ ಎಂದರು.

ರಾಜ್ಯದಲ್ಲಿ `ಅಹಿಂದ' ವರ್ಗವನ್ನು ಸಾಮಾಜದ ಮುಖ್ಯವಾಹಿನಿಗೆ ತರುವಲ್ಲಿ ಅರಸರ ಬಳುವಳಿ ಅಪಾರವಾದದ್ದು. ಆ ಪರಂಪರೆಯನ್ನು ಮುಖ್ಯಮಂತ್ರಿ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಸಾಮಾಜಿಕ ನ್ಯಾಯದ ಘನತೆಯನ್ನು ಎತ್ತಿ ಹಿಡಿದಿದ್ದಾರೆ. `ಅಹಿಂದ' ಎಂಬುದು ಒಂದು ಜಾತಿಯಲ್ಲ, ಶೋಷಿತ ಸಮಾಜಗಳ ಸಮಗ್ರ ರೂಪ ಎಂದು ಅವರು ಹೇಳಿದರು.

ಪ್ರಧಾನ ಕಾರ್ಯದರ್ಶಿ ಎಂ.ಕೃಷ್ಣ, ಉಪಾಧ್ಯಕ್ಷ ಸಿ.ಸಿದ್ದಶೆಟ್ಟಿ, ಹಿಂದುಳಿದ ಸಮಾಜದ ಮುಖಂಡರಾದ ಬಸವರಾಜು, ರಾಜಣ್ಣ, ಜಯರಾಂ, ಚನ್ನವೀರಶೆಟ್ಟಿ, ಕಾಂತರಾಜು, ಪುಟ್ಟಸ್ವಾಮಿ, ಪ್ರಕಾಶ್, ದೊಡ್ಡಯ್ಯ, ಸಾತನೂರು ಕೃಷ್ಣ, ಸೋಮಶೇಖರ್, ದಾಸ್‍ಪ್ರಕಾಶ್, ಮಂಜುನಾಥ್, ಗೋವಿಂದರಾಜ್, ಅರ್ಕೇಶ್ವರಚಾರ್, ಎಚ್.ಪಿ. ಸತೀಶ್, ರಾಜೇಂದ್ರ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X