ಕಾರು ಢಿಕ್ಕಿ: ಮಹಿಳೆ ಮೃತ್ಯು
ಕುಂದಾಪುರ, ಆ.20: ಹಂಗಳೂರು ಗ್ರಾಮದ ಕಾಮತ್ ಮೋಟಾರ್ಸ್ ಶೋ ರೂಂ ಬಳಿ ಇಂದು ಬೆಳಗ್ಗೆ 6.15ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ರಮಣಿ ಆರ್.ಭಂಡಾರಿ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಕುಂದಾಪುರ ಕಡೆ ಹೋಗುತ್ತಿದ್ದ ಕಾರು ರಸ್ತೆ ದಾಟುತ್ತಿದ್ದ ರಮಣಿ ಭಂಡಾರಿಗೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story