Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಮಾಜಿಕ ನ್ಯಾಯದಿಂದ ವಂಚಿತರಿಗೆ ಬದುಕುವ...

ಸಾಮಾಜಿಕ ನ್ಯಾಯದಿಂದ ವಂಚಿತರಿಗೆ ಬದುಕುವ ಅವಕಾಶ ನೀಡಿದ ನೇತಾರ ಅರಸು: ಸಚಿವ ರೈ

ದ.ಕ: ದೇವರಾಜ ಅರಸು 102ನೆ ಜನ್ಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ20 Aug 2017 10:42 PM IST
share
ಸಾಮಾಜಿಕ ನ್ಯಾಯದಿಂದ ವಂಚಿತರಿಗೆ ಬದುಕುವ ಅವಕಾಶ ನೀಡಿದ ನೇತಾರ ಅರಸು: ಸಚಿವ ರೈ

ಮಂಗಳೂರು, ಆ.20: ದೇವರಾಜ ಅರಸು ಸಾಮಾಜಿಕ ನ್ಯಾಯದಿಂದ ವಂಚಿತರಾದ ಜನರಿಗೆ ಸ್ವಾಭಿಮಾನದ ಬದುಕು ನೀಡಿದ ಧೀಮಂತ ವ್ಯಕ್ತಿ ,ಅಹಿಂದ ವರ್ಗದ ಜನರ ಸಶಕ್ತತೆಗೆ ಶ್ರಮಿಸಿದ ಸಮರ್ಥ ನಾಯಕರಾಗಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದರು.

ದಕ್ಷಿಣ ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡ ದೇವರಾಜ ಅರಸು ಅವರ 102ನೆ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕರ್ನಾಟಕದಲ್ಲಿ ಇಂದಿರಾ ಗಾಂಧಿಯ 20 ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಜಾರಿಗೊಳಿಸಿದ ಕೀರ್ತಿ ದೇವರ ಅರಸು ಅವರಿಗೆ ಸಲ್ಲುತ್ತದೆ. ಜೀತ ಮುಕ್ತಿ,ಭೂಸುಧಾರಣೆಯ ಮೂಲಕ ರಾಜ್ಯದಲ್ಲಿ ಮಹತ್ವದ ಬದಲಾವಣೆಗೆ ಕಾರಣರಾದರು. ಸಾಮಾಜದಲ್ಲಿ ದುರ್ಬಲ ವರ್ಗದ ಜನರ ಬದುಕಿನಲ್ಲಿ ಮಹತ್ವದ ಬದಲಾವಣೆಗೆ ಕಾರಣರಾದರು. ಭೂಸುಧಾರಣೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಭೂನ್ಯಾಯ ಮಂಡಳಿಯನ್ನು ರಚಿಸಿ ಸಾಕಷ್ಟು ಜನರು ಪಟ್ಟದಾರರಾಗಲು ಊಳುವವನೆ ಹೊಲದೊಡೆಯನಾಗಲು ದೇವರಾಜ ಅರಸು ಕಾರಣರಾದರು. ಹಾವನೂರು ಆಯೋಗವನ್ನು ರಚಿಸಿ ಆ ವರದಿಯನ್ನು ಜಾರಿಗೆ ತರುವ ಮೂಲಕ ಹಿಂದುಳಿದ ವರ್ಗದ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ನಿಲಯ,ಶಿಕ್ಷಣ ದೊರೆಯಲು ಅರಸು ಕಾರಣರಾದರು ಎಂದು ರಮಾನಾಥ ರೈ ನೆನಪಿಸಿಕೊಂಡರು.

ಜಿಲ್ಲೆಯಲ್ಲಿ ಭೂಮಿಯ ಹಕ್ಕು ಸಮಸ್ಯೆ ಪರಿಹಾರಕ್ಕೆ ವಿಶೇಷ ಭೂ ನ್ಯಾಯ ಮಂಡಳಿ ಸ್ಥಾಪನೆ:-ಭೂಸುಧಾರಣೆ ಕಾನೂನು ಬಂದರೂ ಇನ್ನು ಹಲವಾರು ಪ್ರಕರಣಗಳಲ್ಲಿ ಸಮಸ್ಯೆ ಪರಿಹಾರ ಸಿಗದೆ ತೊಂದರೆ ಗೀಡಾಗಿದ್ದಾರೆ.ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ವಿಶೇಷ ಭೂ ನ್ಯಾಯ ಮಂಡಳಿಯನ್ನು ರಚಿಸಬೇಕಾದ ಅಗತ್ಯವಿದೆ.ಕಂದಾಯ ಸಚಿವರು ಜಿಲ್ಲೆಗೆ ಭೇಟಿ ನಿಡಿದ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ರಮಾನಾಥ ರೈ ತಿಳಿಸಿದ್ದಾರೆ.

ಜಾತಿ, ಧರ್ಮದ ಹೆಸರಿನಲ್ಲಿ ಗಿಲೀಟು ಮಾತುಗಳಿಗೆ ಮರುಳಾಗಬೇಡಿ, ಬದುಕಲು ಸಹಾಯ ಮಾಡುವವರ ಜೊತೆ ನಂಬಿಕೆ ಇಡಿ. ಮೈ ಮೇಲೆ ತುಂಡು ಬಟ್ಟೆ ಉಟ್ಟು, ಲಂಗೋಟಿಯಲ್ಲಿ ಸಾರ್ವಜನಿಕ ಸಭೆ ಸಮಾರಂಭದಲ್ಲಿ ಭಾಗವಹಿಸುತ್ತಿದ್ದ ಜನರನ್ನು ನಾನು ನೋಡಿದ್ದೇನೆ. ಇದು ಹಳೆ ಕಥೆಯಲ್ಲ. ಸುಮಾರು 50 ವರ್ಷದ ಹಿಂದಿನ ಕಥೆ. ಊಟಕ್ಕೆ ಅನ್ನವಿಲ್ಲದೆ ಬೈ ಹುಲ್ಲಿನ ಅಕ್ಕಿಯನ್ನು ಆರಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬಡವರು ಊಟ ಮಾಡುತ್ತಿದ್ದರು. ಇಲ್ಲದಿದ್ದರೆ ಮಳೆಗಾಲದಲ್ಲಿ ಹಲಸಿನ ಹಣ್ಣು, ಬೀಜ ತಿನ್ನುತ್ತಿದ್ದರು. ಧನಿಗಳ ಮನೆಗೆ ಬೆಳೆದ ಅಕ್ಕಿ ಗೇಣಿ ಕೊಟ್ಟು ಉಳಿದ ಪಾಲಲ್ಲಿ ಕಷ್ಟದ ಜೀವನ ಸಾಗಿಸುತ್ತಿದ್ದ ಜನರು ಶಿಕ್ಷಣ ದಿಂದ ವಂಚಿತರಾಗಿದ್ದರು. ಈ ಚರಿತ್ರೆಯನ್ನು ನಮ್ಮ ಇಂದಿನ ಪೀಳಿಗೆಯವರು ತಿಳಿಯಬೇಕಾಗಿದೆ. ಅದೇ ಕುಟುಂಬಗಳಲ್ಲಿ ಊಳುವವನೆ ಹೊಲದೊಡೆಯ ನೀತಿ, ಜೀತ ಮುಕ್ತ ನೀತಿ ಜಾರಿಯಾದ ಬಳಿಕ ಬದಲಾವಣೆಯಾಗಿದೆ. ಮಕ್ಕಳು ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದು ಸ್ಥಿತಿವಂತರಾಗಿದ್ದಾರೆ ಎಂದು ರಮಾನಾಥ ರೈ ತಿಳಿಸಿದರು.

ರಾಜ್ಯದ ಒಕ್ಕೂಟದ ವ್ಯವಸ್ಥೆಯ ಬಗ್ಗೆ ಚಿಂತನೆ ಅಗತ್ಯ

ದೇವರಾಜ ಅರಸು ಭಾರತ ದೇಶದೊಳಗೆ ಕರ್ನಾಟಕ ರಾಜ್ಯವನ್ನು ಒಕ್ಕೂಟ ವ್ಯವಸ್ಥೆಯೊಳಗೆ ಸಶಕ್ತಗೊಳಿಸಲು ಯೋಜನೆಗಳನ್ನು ರೂಪಿಸಿ ಕಾರ್ಯ ಗತಗೊಳಿಸಿದವರು ಎಂದು ಪ್ರಧಾನ ಭಾಷಣ ಮಾಡಿದ ಮಂಗಳೂರು ವಿ.ವಿ.ಎಸ್.ವಿ.ಪಿ ಅಧ್ಯಯನ ಕೇಂದ್ರದ ಅಧ್ಯಕ್ಷ ಶಿವರಾಮ ಶೆಟ್ಟಿ ತಿಳಿಸಿದರು.

ಅವರ ಕಾಲದಲ್ಲಿ ಮೈಸೂರು ಸಂಸ್ಥಾನವಾಗಿ ಗುರುತಿಸಿದ್ದ ರಾಜ್ಯ ಕರ್ನಾಟಕವಾಗಿ ನಾಮಕರಣಗೊಂಡಿತು. ಅರಸು ಕರ್ನಾಟಕ ದೊಳಗಿನ ಪ್ರಾದೇಶಿಕ ವೈವಿಧ್ಯತೆಗಳನ್ನು ಗುರುತಿಸಿಕೊಂಡು. ಅವುಗಳನ್ನು ಸಂರಕ್ಷಿಸುವ ಕೆಲಸಕ್ಕೆ ತೊಡಗಿದರು. ಕರ್ನಾಟಕ ರಾಜ್ಯದ ಮಟ್ಟಿಗೆ ಅರಸು ಅವರ ಕಾಲದ ನೆನಪುಗಳನ್ನು ಒಟ್ಟುಕೊಂಡ ಪ್ರಸಕ್ತ ಕಾಲಘಟ್ಟದಲ್ಲಿ ಎದುರಾಗಿರುವ ಭಾಷಾ ಹೇರಿಕೆ, ಧ್ವಜದ ವಿವಾದದ ಸಮಸ್ಯೆಗಳಿಗೆ, ಬಹು ಸಂಸ್ಕೃತಿಯನ್ನು ನಿರ್ಲಕ್ಷಿಸಿ ಏಕ ಸಂಸ್ಕೃತಿಯನ್ನು ಹೇರುವ ಪಾಶ್ಚಾತ್ಯ ರ ‘ರಾಷ್ಟ್ರ ’ಪರಿಕಲ್ಪನೆಯನ್ನು ಹೇರುವ ಸವಾಲುಗಳಿಗೆ ಉತ್ತರ ಕಂಡು ಕೊಳ್ಳಬೇಕಾಗಿದೆ .ರಾಜ್ಯದ ಒಕ್ಕೂಟ ವ್ಯವಸ್ಥೆಯ ಬಗ್ಗೆ ಕೇಂದ್ರದ ಜೊತೆ ಸಂವಾದ ನಡೆಸುವ ಬಗ್ಗೆ ರಾಜ್ಯ ಸರಕಾರ ಚಿಂತಿಸಬೇಕಾಗಿದೆ ಎಂದು ಪ್ರೊ.ಶಿವರಾಮ ಶೆಟ್ಟಿ ತಿಳಿಸಿದರು.

ಸಮಾರಂಭದ ವೇದಿಕೆಯಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಬಿ.ಎ.ಮೊಯ್ದಿನ್ ಬಾವ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ ಸೋಜ, ಮನಪಾ ಮೇಯರ್ ಕವಿತಾ ಸನಿಲ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ದ.ಕ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್, ಜಿಲ್ಲಾ ಪಂಚಾಯತ್‌ನ ಉಪಕಾರ್ಯದರ್ಶಿ ಉಮೇಶ್ , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಡಾ.ಜಿ. ಸಂತೊಷ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X