Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ...

ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ರಾಜಾತಿಥ್ಯ: ಡಿಎಆರ್ ಎಎಸ್ಸೈ ಸಹಿತ ಮೂವರು ಪೊಲೀಸರ ಅಮಾನತು

ವಾರ್ತಾಭಾರತಿವಾರ್ತಾಭಾರತಿ21 Aug 2017 10:30 PM IST
share
ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ರಾಜಾತಿಥ್ಯ: ಡಿಎಆರ್ ಎಎಸ್ಸೈ ಸಹಿತ ಮೂವರು ಪೊಲೀಸರ ಅಮಾನತು

ಉಡುಪಿ, ಆ. 21: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ, ನಿರಂಜನ್ ಭಟ್ ಇಂದು ನ್ಯಾಯಾಲಯಕ್ಕೆ ಹಾಜರಾಗಲು ಹವಾನಿಯಂತ್ರಿತ ಇನ್ನೋವಾ ಕಾರಿನ ವ್ಯವಸ್ಥೆ ಕಲ್ಪಿಸಿ ರಾಜಾತಿಥ್ಯ ನೀಡಿರುವ ಎಎಸ್ಸೈ ಸಹಿತ ಮೂವರು ಪೊಲೀಸ್ ಸಿಬ್ಬಂದಿ ಗಳನ್ನು ಉಡುಪಿ ಎಸ್ಪಿ ಡಾ. ಸಂಜೀವ ಪಾಟೀಲ್ ಅಮಾನತುಗೊಳಿಸಿದ್ದಾರೆ.

ಆರೋಪಿಗಳಿಗೆ ಭದ್ರತಾ ಕರ್ತವ್ಯ ನಿರ್ವಹಿಸಿದ ಉಡುಪಿ ಸಶಸ್ತ್ರ ಮೀಸಲು ಪಡೆಯ ಸಹಾಯಕ ಉಪನಿರೀಕ್ಷಕ ಸುಧಾಕರ್, ಮಣಿಪಾಲ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ರೇಣುಕಾ ಹಾಗೂ ಕಾನ್‌ಸ್ಟೇಬಲ್ ಸಲ್ಮಾನ್ ಖಾನ್ ಅವರನ್ನು ಅಮಾನುತುಗೊಳಿಸಲಾಗಿದೆ.

ಮಂಗಳೂರು ಜೈಲಿನಲ್ಲಿದ್ದ ಈ ಮೂವರು ಆರೋಪಿಗಳನ್ನು ಪೊಲೀಸರು ಇಂದು ವಿಚಾರಣೆಗಾಗಿ ಉಡುಪಿ ನ್ಯಾಯಾಲಯಕ್ಕೆ ಸರಕಾರಿ ವಾಹನ ಅಥವಾ ಬಸ್‌ಗಳಲ್ಲಿ ಕರೆದುಕೊಂಡು ಬರಬೇಕಿತ್ತು. ಆದರೆ ಅದರ ಬದಲು ಪೊಲೀಸರು ಆರೋಪಿಗಳೇ ಗೊತ್ತು ಮಾಡಿದ ಖಾಸಗಿ ಹವಾನಿಯಂತ್ರಿತ ಇನೋವಾ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಪೊಲೀಸರು ಕೂಡ ಆರೋಪಿಗಳ ಜೊತೆ ಇದೇ ವಾಹನದಲ್ಲಿ ಬಂದಿದ್ದರು.

ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಎದುರಿನಿಂದ ಕರೆದು ಕೊಂಡು ಬರುವ ಬದಲು ಹಿಂದಿನಿಂದ ಕರೆದುಕೊಂಡು ಬಂದಿದ್ದರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಾಪಾಸ್ ಕರೆದುಕೊಂಡು ಹೋಗುವಾಗ ಶಂಕಿತ ನಕ್ಸಲ್ ವೀರಮಣಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಬಗ್ಗೆ ವರದಿ ಮಾಡಲು ನ್ಯಾಯಾಲಯಕ್ಕೆ ಆಗಮಿಸಿದ್ದ ಮಾಧ್ಯಮದವರಿಗೆ ಈ ದೃಶ್ಯ ಕಂಡುಬಂದಿತು. ಕೊಲೆ ಆರೋಪಿಗಳಿಗೆ ಈ ರೀತಿ ರಾಜಾತಿಥ್ಯ ನೀಡಿರುವ ವಿಚಾರ ಮಾಧ್ಯಮಗಳಲ್ಲಿ ಬಿತ್ತರಗೊಂಡಿತು.

ಈ ಹಿನ್ನೆಲೆಯಲ್ಲಿ ಉಡುಪಿ ಎಸ್ಪಿ ಡಾ. ಸಂಜೀವ ಪಾಟೀಲ್ ಪ್ರಕರಣದ ವಿಚಾರಣೆಗೆ ಆದೇಶ ನೀಡಿದರು. ಅದರಂತೆ ಉಡುಪಿ ಡಿವೈಎಸ್ಪಿ ಕುಮಾರ ಸ್ವಾಮಿ ಪ್ರಕರಣದ ಪ್ರಾಥಮಿಕ ತನಿಖೆಯನ್ನು ನಡೆಸಿ ಎಸ್ಪಿಯವರಿಗೆ ವರದಿ ನೀಡಿದರು.

‘ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳ ಭದ್ರತಾ ಕರ್ತವ್ಯದಲ್ಲಿ ಪೊಲೀಸರು ಘೋರ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಇವರನ್ನು ಮುಂದಿನ ಇಲಾಖಾ ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಲಾಗಿದೆ’ ಎಂದು ಎಸ್ಪಿ ಡಾ.ಸಂಜೀವ ಪಾಟೀಲ್ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

ಈ ಹಿಂದೆ, ತನಿಖೆಯ ಸಂದರ್ಭ ನವನೀತ್ ಶೆಟ್ಟಿಯನ್ನು ಪೊಲೀಸ್ ಜೀಪಿನ ಮುಂದಿನ ಸೀಟಿನಲ್ಲಿ ಕುಳ್ಳಿರಿಸಿ ಕರೆದುಕೊಂಡು ಹೋಗಿರುವುದು ಮತ್ತು ಮೂವರು ಆರೋಪಿಗಳಿಗೆ ನಿಟ್ಟೆಯ ಪ್ರತಿಷ್ಠಿತ ಹೋಟೆಲೊಂದರಲ್ಲಿ ಊಟ ನೀಡಿರುವುದು ಮತ್ತು ರಾಜೇಶ್ವರಿ ಶೆಟ್ಟಿಯನ್ನು ಖಾಸಗಿ ಬಸ್‌ನಲ್ಲಿ ಉಡುಪಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿರುವ ವಿಚಾರ ಸಾಕಷ್ಟು ವಿವಾದ ಸೃಷ್ಟಿಸಿದ್ದವು.

ಚಾರ್ಚ್ ವಾಚಿಸುವ ಪ್ರಕ್ರಿಯೆ ಮುಂದೂಡಿಕೆ
ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಪ್ರಮುಖ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ, ನಿರಂಜನ್ ಭಟ್, ಸಾಕ್ಷನಾಶ ಆರೋಪಿಗಳಾದ ಶ್ರೀನಿವಾಸ ಭಟ್, ರಾಘವೇಂದ್ರ ಅವರನ್ನು ಇಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

 

ಪ್ರಕರಣಕ್ಕೆ ಸಂಬಂಧಿಸಿ ಸಿಒಡಿ ಪೊಲೀಸರು ಹೆಚ್ಚುವರಿ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸದ ಹಿನ್ನೆಲೆಯಲ್ಲಿ ಆರೋಪಿಗಳ ದೋಷಾರೋಪ ವಾಚಿಸುವ ಪ್ರಕ್ರಿಯೆಯನ್ನು ನ್ಯಾಯಾಧೀಶ ವೆಂಕಟೇಶ್ ನಾಯ್ಕಾ ಅ. 23ಕ್ಕೆ ಮುಂದೂಡಿ ಆದೇಶ ನೀಡಿದರು. ಈ ಸಂದರ್ಭ ಜಿಲ್ಲಾ ಸರಕಾರಿ ಅಭಿ ಯೋಜಕಿ ಶಾಂತಿ ಬಾಯಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X