ಎಸಿಬಿ ದಾಖಲಿಸಿರುವ ಎರಡನೆ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಬಿಎಸ್‌ವೈ ಅರ್ಜಿ

ಬೆಂಗಳೂರು, ಆ.21: ಡಾ.ಕೆ.ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಎಸಿಬಿ ದಾಖಲಿಸಿರುವ ಎರಡನೆ ಎಫ್‌ಐಆರ್ ರದ್ದುಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಶಿವರಾಮ ಕಾರಂತ ಬಡಾವಣೆಗೆ ಭೂ ಸ್ವಾಧೀನಕ್ಕಾಗಿ ಹೊರಡಿಸಿದ್ದ ಪ್ರಾಥಮಿಕ ಅಧಿಸೂಚನೆಯನ್ನು ಈ ಹಿಂದೆಯೇ ಹೈಕೋರ್ಟ್ ರದ್ದುಪಡಿಸಿದ್ದು, ಅಂತಿಮ ಅಧಿಸೂಚನೆಯನ್ನೇ ಹೊರಡಿಸಲಾಗಿಲ್ಲ. ಹೀಗಿರುವಾಗ ಜಮೀನು ಡಿನೋಟೈ ಮಾಡಲು ಸಾಧ್ಯವಿಲ್ಲ. ಪ್ರಕರಣದಲ್ಲಿ ತಮ್ಮ ಪಾತ್ರವೇನೂ ಇಲ್ಲದಿದ್ದರೂ, ಕೇವಲ ದ್ವೇಷ ರಾಜಕಾರಣ ನಡೆಸುವ ಉದ್ದೇಶದಿಂದ ಹಾಗೂ ಮಾನಹಾನಿ ಮಾಡುವ ಉದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ ತಮ್ಮ ವಿರುದ್ಧ ಎಸಿಬಿ ಅವರು ಆ.17ರಂದು ದಾಖಲಿಸಿರುವ ಎರಡನೆ ಪ್ರಕರಣವನ್ನು ರದ್ದುಪಡಿಸುವಂತೆ ಯಡಿಯೂರಪ್ಪ ಅರ್ಜಿಯಲ್ಲಿ ಕೋರಿದ್ದಾರೆ.
Next Story





