Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೆಂಗಿನ ಮರಗಳಿಗೆ ಹುಳ ಬಾಧೆ:...

ತೆಂಗಿನ ಮರಗಳಿಗೆ ಹುಳ ಬಾಧೆ: ಬೆಳೆಗಾರರಿಗೆ ಪುನಶ್ಚೇತನ ಪ್ಯಾಕೇಜ್

ವಾರ್ತಾಭಾರತಿವಾರ್ತಾಭಾರತಿ21 Aug 2017 11:20 PM IST
share
ತೆಂಗಿನ ಮರಗಳಿಗೆ ಹುಳ ಬಾಧೆ: ಬೆಳೆಗಾರರಿಗೆ ಪುನಶ್ಚೇತನ ಪ್ಯಾಕೇಜ್

ಮಂಗಳೂರು, ಆ.21: ಉಳ್ಳಾಲ ಸುತ್ತಮುತ್ತ ತೆಂಗಿನ ಮರಗಳಲ್ಲಿ ಕಪ್ಪುಹುಳ ಬಾಧೆ ನಿಯಂತ್ರಣಕ್ಕೆ ಈಗಾಗಲೇ ವೈಜ್ಞಾನಿಕ ಕ್ರಮಗಳನ್ನು ನಡೆಸಲಾಗುತ್ತಿದೆ. ತೀವ್ರ ಹುಳ ಪೀಡಿತವಾಗಿರುವ ಮರಗಳನ್ನು ತೆಗೆದು, ಹೊಸದಾಗಿ ತೆಂಗಿನ ಗಿಡ ನೆಡಲು ರೈತರಿಗೆ ತೋಟಗಾರಿಕೆ ಇಲಾಖೆಯು ಪುನಶ್ಚೇತನ ಪ್ಯಾಕೇಜ್‌ಜಾರಿಗೊಳಿಸಿದೆ ಎಂದು ಮಂಗಳೂರು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಸೀಮಾ ತಿಳಿಸಿದ್ದಾರೆ.

ತೋಟಗಾರಿಕೆ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕಲ್ಲಾಪುವಿನಲ್ಲಿ ಕಪ್ಪುಹುಳ ಪೀಡಿತ ತೆಂಗಿನ ತೋಟದಲ್ಲಿ ನಡೆದ ಹುಳಬಾಧೆ ನಿಯಂತ್ರಣ ಕುರಿತು ಬೆಳೆಗಾರರಿಗೆ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಪುನಶ್ಚೇತನ ಪ್ಯಾಕೇಜ್ ಅನ್ವಯ 1 ತೆಂಗಿನ ಮರಕ್ಕೆ 1,000 ರೂ.ಗಳಂತೆ ಒಂದು ಹೆಕ್ಟೇರ್ ಜಮೀನಿಗೆ ಗರಿಷ್ಠ 44,750 ರೂ. ಪರಿಹಾರವನ್ನು ತೆಂಗಿನ ಮರಗಳ ಪುನಶ್ಚೇತನಕ್ಕೆ ಇಲಾಖೆ ನೀಡಲಿದೆ. ಬೆಳೆಗಾರರು ಇದರ ಪ್ರಯೋಜನ ಪಡೆಯಬೇಕು ಎಂದರಲ್ಲದೆ, ತೋಟಗಾರಿಕೆ ಇಲಾಖೆ ಹಾಗೂ ಕಂದಾಯ ಇಲಾಖೆ ಜತೆಗೂಡಿ ಹುಳ ಬಾಧೆಯಿಂದ ಹಾನಿಗೀಡಾಗಿರುವ ಮರ ಮತ್ತು ತೋಟಗಳ ಜಂಟಿ ಸಮೀಕ್ಷೆ ಕಾರ್ಯವನ್ನು ಶೀಘ್ರ ನಡೆಸಲಾಗುವುದು. ಅಂದಾಜು 100 ಹೆಕ್ಟೇರ್ ಜಮೀನಿನಲ್ಲಿ ತೆಂಗಿನ ಮರಗಳಿಗೆ ಕಪ್ಪುಹುಳ ಬಾಧೆಗೀಡಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಈ ಬಗ್ಗೆ ನಿಖರವಾಗಿ ಅಂದಾಜಿಸಲು ಜಂಟಿ ಸಮೀಕ್ಷೆ ನಡೆಸಲಾಗುತ್ತಿದ್ದು, ಈ ವಾರದಲ್ಲೇ ಸಮೀಕ್ಷೆ ಆರಂಭವಾಗಲಿದೆ ಎಂದು ಹೇಳಿದರು.

ತೆಂಗಿನ ಮರಗಳಿಗೆ ಕಪ್ಪುಹುಳ ಬಾಧೆ ನಿಯಂತ್ರಿಸಲು ಮರಗಳಿಗೆ ವೈಜ್ಞಾನಿಕವಾಗಿ ಸಂಶೋಧಿಸಿದ ಪರೋಪ ಜೀವಿಗಳನ್ನು ಬಿಡಲಾಗುತ್ತಿದೆ. ಪ್ರತೀ 15 ದಿನಗಳಿಗೊಮ್ಮೆ ಪರೋಪ ಜೀವಿಗಳನ್ನು ತೆಂಗಿನ ಮರಕ್ಕೆ ಬಿಡುವುದರಿಂದ ಕಪ್ಪುಹುಳ ಬಾಧೆ ನಿಯಂತ್ರಣವಾಗಲಿದೆ. ತೋಟಗಾರಿಕೆ ಇಲಾಖೆಯು ಬೆಳೆಗಾರರಿಗೆ ಪರೋಪ ಜೀವಿಯನ್ನು ಒದಗಿಸಲಿದೆ. ಈ ನಿಟ್ಟಿನಲ್ಲಿ ಸುಮಾರು 20 ಲಕ್ಷ ಪರೋಪಕಾರಿ ಜೀವಿ ಅಗತ್ಯವಿದ್ದು ಈ ಪೈಕಿ ತುಂಬೆಯಲ್ಲಿರುವ ತೋಟಗಾರಿಕೆ ಇಲಾಖೆಯ ಘಟಕದಲ್ಲಿ 12ಲಕ್ಷ ಜೀವಿಗಳನ್ನು ಉತ್ಪಾದಿಸಲಾಗುವುದು. ಉಳಿದ ಜೀವಿಗಳನ್ನು ಹೊರಜಿಲ್ಲೆಗಳಿಂದ ತರಿಸಲಾಗುವುದು ಎಂದು ಸೀಮಾ ತಿಳಿಸಿದರು.

ಬೆಳೆಗಾರರು ತೆಂಗಿನ ಮರಗಳಿಗೆ ಸೂಕ್ತ ನಿರ್ವಹಣಾ ಪದ್ದತಿ ಅನುಸರಿಸಿದರೆ ಕೀಟಬಾಧೆ ಕಡಿಮೆಯಾಗಲಿದೆ. ಮುಖ್ಯವಾಗಿ ಹುಳಬಾಧೆಗೀಡಾಗಿರುವ ತೆಂಗಿನ ಗರಿಗಳನ್ನು ಹಾಗೆಯೇ ಬಿಡದೆ ಸುಟ್ಟು ನಾಶ ಮಾಡಬೇಕು. ಗರಿಗಳನ್ನು ಸುಡದೆ ಸಂಗ್ರಹಿಸಿಟ್ಟರೆ ಕೀಟಬಾಧೆ ಇನ್ನಷ್ಟು ಅಧಿಕವಾಗಲಿದೆ. ತೆಂಗಿನ ಗಿಡಗಳಿಗೆ ಗೊಬ್ಬರ ನಿರ್ವಹಣೆ ಹಾಗೂ ಸಾವಯವ ಹೊದಿಕೆಯಿಂದ ನಿಯಂತ್ರಣವಾಗಲಿದೆ. ಈ ನಿಟ್ಟಿನಲ್ಲಿ ಬೆಳೆಗಾರರ ಸಹಕಾರ ಅಗತ್ಯವಾಗಿದೆ ಎಂದು ತೋಟಗಾರಿಕೆ ಅಧಿಕಾರಿಗಳು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತೆಂಗಿನ ಬೆಳೆಗಾರರು, ತೋಟಗಾರಿಕೆ ಇಲಾಖೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X