ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು, ಆ.21: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಂಗಳೂರು ಕಚೇರಿಯಲ್ಲಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಸ್ಪಷ್ಟ ವಿಜ್ಞಾನ ಹಾಗೂ ಕಂಪ್ಯೂಟರ್ ಬಳಕೆ ವಿಜ್ಞಾನ ಹೊಂದಿರುವ 22ರಿಂದ 38 ವರ್ಷ ವಯೋಮಿತಿಯ ಪರಿಶಿಷ್ಟ ಜಾತಿಗೆ ಸೇರಿದ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬಹುದು. ತರಬೇತಿಗೆ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದವರಿಗೆ ಮಾಸಿಕ 20 ಸಾವಿರ ರೂ. ಗೌರವಧನ ನೀಡಲಾಗುವುದು. ದ.ಕ. ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಇಲಾಖೆಯ ಕ್ಷೇತ್ರಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಸೆಪ್ಟಂಬರ್‌ನಿಂದ ಮಾರ್ಚ್ 2018ರವರೆಗೆ ಕಾರ್ಯನಿರ್ವಹಿಸಬೇಕಾಗುತ್ತದೆ.
ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಸೆಪ್ಟಂಬರ್ 1 ಕಡೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ವಾರ್ತಾ ಇಲಾಖೆ ಕಚೇರಿ, 2ನೆ ಮಹಡಿ, ಪಿಡಬ್ಲ್ಯುಡಿ ಕಟ್ಟಡ, ಆರ್‌ಟಿಒ ಸಮೀಪ ಮಂಗಳೂರು (ದೂ.ಸಂ: 0824- 2424254) ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಾರ್ತಾಧಿಕಾರಿಗಳ ಪ್ರಕಟನೆ ತಿಳಿಸಿದೆ.





