Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆ್ಯಸಿಡ್ ಸಂತ್ರಸ್ತರಿಗೆ ಕಾನೂನು ಸೇವಾ...

ಆ್ಯಸಿಡ್ ಸಂತ್ರಸ್ತರಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ನೆರವು: ಜಿಲ್ಲಾ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ

ವಾರ್ತಾಭಾರತಿವಾರ್ತಾಭಾರತಿ22 Aug 2017 8:25 PM IST
share
ಆ್ಯಸಿಡ್ ಸಂತ್ರಸ್ತರಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ನೆರವು: ಜಿಲ್ಲಾ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ

ಉಡುಪಿ, ಆ.22: ಆ್ಯಸಿಡ್ ದಾಳಿಯಿಂದ ಸಂತ್ರಸ್ಥರಾದವರು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸೂಕ್ತ ಪರಿಹಾರ ಪಡೆಯಬಹುದು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ್ ನಾಯ್ಕಾ ಟಿ. ಹೇಳಿದ್ದಾರೆ.

ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ಪೊಲೀಸ್ ದೂರು ಪ್ರಾಧಿಕಾರ, ಕರ್ನಾಟಕ ಸಂತ್ರಸ್ತರ ಪರಿಹಾರ ಯೋಜನೆ-2011 ಮತ್ತು ಆ್ಯಸಿಡ್ ಸಂತ್ರಸ್ತರಿಗೆ ಸಿಗುವ ಕಾನೂನು ಸೇವೆಗಳ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಆ್ಯಸಿಡ್ ದಾಳಿಗೆ ಒಳಗಾಗಿ ಶೇ.80ಕ್ಕೂ ಹೆಚ್ಚು ಹಾನಿಗೊಳಗಾದವರಿಗೆ ರೂ.3 ಲಕ್ಷ, ಶೇ.40ರಿಂದ ಶೇ.80ರವರೆಗೆ ಹಾನಿಗೊಳಗಾದವರಿಗೆ 2 ಲಕ್ಷ ರೂ. ಹಾಗೂ ಶೇ.40ಗಿಂತ ಕಡಿಮೆ ಹಾನಿಗೊಳಗಾದವರಿಗೆ ಒಂದು ಲಕ್ಷ ರೂ. ಪರಿಹಾರವನ್ನು ನೀಡಲು ಅವಕಾಶವಿದೆ. ಅದೇ ರೀತಿ ಅತ್ಯಾಚಾರಕ್ಕೆ ಒಳಗಾದರೆ ಅಪ್ರಾಪ್ತ ವಯಸ್ಕರು 3 ಲಕ್ಷ ರೂ. ಹಾಗೂ ವಯಸ್ಕರು 1.50 ಲಕ್ಷ ರೂ. ಪರಿಹಾರವನ್ನು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪಡೆಯಬಹುದು ಎಂದವರು ವಿವರಿಸಿದರು.

ಈ ಕುರಿತಂತೆ ಸಂಬಂದಪಟ್ಟ ಪ್ರಾಧಿಕಾರದಲ್ಲಿ ದೂರು ನೀಡಬೇಕಾಗುತ್ತದೆ. ಸಂತ್ರಸ್ತರಿಗೆ ವೈದ್ಯಕೀಯ ವೆಚ್ಚ ಮತ್ತು ಪುರ್ನವಸತಿ ಸೌಲ್ಯವನ್ನೂ ಸಹ ಒದಗಿಸಲಾಗುವುದು ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.

ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸದ ಸಂದರ್ಭ ದಲ್ಲಿ, ಅಕ್ರಮವಾಗಿ ಬಂಧನದಲ್ಲಿಟ್ಟ ಸಂದರ್ಭದಲ್ಲಿ ಹಾಗೂ ಠಾಣೆಯಲ್ಲಿ ಹಿಂಸೆ ನೀಡಿದರೆ ಈಕುರಿತು ಪೊಲೀಸ್ ದೂರು ಪ್ರಾಧಿಕಾರಕ್ಕೆ ದೂರು ನೀಡಬಹುದು. ಜಿಲ್ಲಾಧಿಕಾರಿಗಳು ಈ ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ಪೊಲೀಸ್ ವರಿಷ್ಠಾಧಿ ಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ. ಕೋರ್ಟ್ ಹಾಗೂ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಇದಕ್ಕಾಗಿ ದೂರು ಪೆಟ್ಟಿಗೆ ಇಡಲಾಗಿದ್ದು, ಸಾರ್ವಜನಿಕರು ಇದರಲ್ಲಿ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಎಂ. ಪಾಟೀಲ್ ಮಾತನಾಡಿ, ಭಾರತ ದೇಶ ಅನೇಕ ವೈವಿಧ್ಯತೆಗಳಿಂದ ಕೂಡಿದ್ದರೂ ಸಹ ಏಕತೆಯಿಂದ ಬಾಳುತ್ತಿರುವುದಕ್ಕೆ ಮೂಲ ಕಾರಣ ನಮ್ಮ ಸಂವಿಧಾನ. ಪ್ರತಿಯೊಬ್ಬರೂ ಸಂವಿಧಾನ ಆಶಯಗಳಿಗೆ ಬದ್ಧರಾಗಿ ನಡೆಯಬೇಕು. ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತರು ದೈಹಿಕ ಹಾಗೂ ಮಾನಸಿಕವಾಗಿ ಕುಗ್ಗಿ ಹೋಗಿರುತ್ತಾರೆ. ಅವರೊಂದಿಗೆ ಸಂವಿಧಾನ ಮತ್ತು ಕಾನೂನು ಇದೆ ಎಂಬ ಆತ್ಮವಿಶ್ವಾಸವನ್ನು ಮೂಡಿಸಬೇಕು ಎಂದರು.

ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಅರಿವು ಹೊಂದಿರಬೇಕು. ಅವರು ಸಂತ್ರಸ್ತರಿಗೆ ನೆರವು ನೀಡಬೇಕು, ಧೈರ್ಯ ತುಂಬಬೇಕು. ಆ್ಯಸಿಡ್ ದಾಳಿಕೋರರಿಗೆ ಅತ್ಯಂತ ಕಠಿಣ ಶಿಕ್ಷೆ ಮತ್ತು ಸಂತ್ರಸ್ಥರ ನೆರವಿಗೆ ಸರಕಾರ ಇದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯ ವಿಧಾನವನ್ನು ಮತ್ತು ಅಲ್ಲಿ ಅಪರಾಧಿಗಳನ್ನು ನಡೆಸಿಕೊಳ್ಳುವ ರೀತಿಯನ್ನು ಖುದ್ದಾಗಿ ವೀಕ್ಷಿಸಬೇಕು. ಪೊಲೀಸ್ ಠಾಣೆಗಳಲ್ಲಿ ಯಾವುದೇ ಕಾನೂನು ಉಲ್ಲಂಘನೆಯ ಕಾರ್ಯ ನಡೆಯುತ್ತಿದ್ದರೆ ಕೂಡಲೇ ತಮಗೆ ವರದಿ ನೀಡುವಂೆ ಸಂಜೀವ ಎಂ. ಪಾಟೀಲ್ ಹೇಳಿದರು.

ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರಕಾಶ ಕಣಿವೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ಲತಾ, ಉಡುಪಿ ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ, ಪ್ರಾಧ್ಯಾಪ ಸಿಸಿಲಿಯಾ ಡಿಸೋಜಾ ಉಪಸ್ಥಿತರಿದ್ದರು.

 ವಿದ್ಯಾರ್ಥಿಗಳಿಂದ ಪ್ರಬಂಧಗಳ ಮಂಡನೆ ನಡೆಯಿತು. ಪೇಟ್ರಿಷಿಯಾ ಸ್ವಾಗತಿಸಿ ವರ್ಷಾ ವಂದಿಸಿದರು. ನಿಕಿತಾ ಶೆಣ್ಯೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X