Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಆ. 27ಕ್ಕೆ ವಿಷ್ಣು ರಾಷ್ಟ್ರೀಯ ಹಬ್ಬ

ಆ. 27ಕ್ಕೆ ವಿಷ್ಣು ರಾಷ್ಟ್ರೀಯ ಹಬ್ಬ

ಶಶಿಕರ ಪಾತೂರುಶಶಿಕರ ಪಾತೂರು22 Aug 2017 11:55 PM IST
share
ಆ. 27ಕ್ಕೆ ವಿಷ್ಣು ರಾಷ್ಟ್ರೀಯ ಹಬ್ಬ

ನಟನೊಬ್ಬನ ಹೆಸರಿನಲ್ಲಿ ರಾಷ್ಟ್ರೀಯ ಉತ್ಸವವನ್ನು ಹಮ್ಮಿಕೊಳ್ಳುತ್ತಿರುವುದು ಇದೇ ಪ್ರಥಮ. ಆಗಸ್ಟ್ 27ರಂದು ಭಾನುವಾರ ದೆಹಲಿಯಲ್ಲಿ ಅದ್ಧೂರಿಯಾಗಿ ನಡೆಯಲಿರುವ 'ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವ'ದ ವಿವರವಾದ ಮಾಹಿತಿಯನ್ನು ಪತ್ರಿಕಾಗೋಷ್ಠಿಯಲ್ಲಿ ‌ನೀಡಲಾಯಿತು.

ಡಾ. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ನಡೆಯಲಿರುವ ಉತ್ಸವದ ಕುರಿತು ಅವರೇ ಮಾತನಾಡಿ, "ಕಾರ್ಯಕ್ರಮವು ನವದೆಹಲಿಯ   ಎಂ ವಿಶ್ವೇಶ್ವರಯ್ಯ ಮೆಟ್ರೋ ಹತ್ತಿರ ಮೋತಿಭಾಗ್ ನಲ್ಲಿ ಅಲ್ಲಿನ ಕರ್ನಾಟಕ ಸಂಘದ ಸಹಯೋಗದಲ್ಲಿ ನಡೆಯಲಿದೆ.

ಬೆಳಿಗ್ಗೆ 6ಗಂಟೆಯಿಂದ ರಾತ್ರಿ 12ರವರೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಮುಖ್ಯವಾಗಿ, ವಿಷ್ಣುವರ್ಧನ್ ಅವರ 6ಅಡಿ ಎತ್ತರದ ಪ್ಲಾಸ್ಟರ್ ಆಫ್ ಪ್ಯಾರಿಸ್ ಪ್ರತಿಮೆಯ ಅನಾವರಣ ಮತ್ತು ಅವರ ಸಿನಿಮಾ ಮತ್ತು ಖಾಸಗಿ ಬದುಕಿನ ವಿವಿಧ ಘಟ್ಟಗಳನ್ನು ನೆನಪಿಸುವಂಥ ಸಾವಿರಾರು ಛಾಯಾಚಿತ್ರಗಳ‌ ಪ್ರದರ್ಶನವನ್ನು ಏರ್ಪಡಿಸಲಾಗಿದೆ'' ಎಂದರು.

ಛಾಯಾಚಿತ್ರ ಪ್ರದರ್ಶನ  'ನೆನಪಿನೋತ್ಸವ' ದ ನೇತೃತ್ವ ವಹಿಸಿರುವ ಚಿತ್ರಲೋಕ ಡಾಟ್ ಕಾಮ್ ನ ಸಂಪಾದಕ ವೀರೇಶ್ ಮಾತನಾಡುತ್ತಾ, " ಈ ಹಿಂದೆ ನಾನು ಕಳೆದ ಮೂರು ದಶಕಗಳಿಂದ ಕ್ಲಿಕ್ಕಿಸಿದ ಮೂರು ಸಾವಿರದಷ್ಟು ಫೊಟೋಗಳನ್ನು ಪ್ರದರ್ಶಿಸಿದಾಗ ಅದು ಲಿಮ್ಕಾ ದಾಖಲೆಯಾಗಿತ್ತು. ಆದರೆ ಈ ಬಾರಿಯ ಪ್ರದರ್ಶನದಲ್ಲಿ ನಾನು ತೆಗೆದಿರುವ ಚಿತ್ರಗಳೊಂದಿಗೆ ಇತರ ಪತ್ರಿಕಾ ಛಾಯಾಗ್ರಾಹಕರು ಮತ್ತು ಸಿನಿಮಾ ಸ್ಥಿರಚಿತ್ರ ಛಾಯಾಗ್ರಾಹಕರಿಂದ ಸಂಗ್ರಹಿಸಲಾದ ಚಿತ್ರಗಳೂ ಸೇರಿರುತ್ತವೆ" ಎಂದರು.

ಸಂಗ್ರಹಿತ ಅನುದಾನಗಳೊಂದಿಗೆ ನಡೆಸಬೇಕಾದ ಇಂಥ ದೊಡ್ಡ ಸಿನಿ‌ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೀರಕಪುತ್ರ ಶ್ರೀನಿವಾಸ್ ಒಬ್ಬರೇ ತಮ್ಮ‌ ಕೈಯಿಂದಲೇ ದುಡ್ಡು ಹಾಕುತ್ತಿರುವುದು ಅವರ ಅಭಿಮಾನದ ಪರಾಕಾಷ್ಠೆಯನ್ನು ತೋರಿಸುತ್ತದೆ ಎಂದು ವೀರೇಶ್ ಹೇಳಿದರು. ದೆಹಲಿಯಲ್ಲಿ 'ಡಾ. ವಿಷ್ಣುವರ್ಧನ್ ರಾಷ್ಟ್ರೀಯ ಪ್ರಶಸ್ತಿ'ಗೆ ಭಾಜನರಾಗಲಿರುವ  ವಿಷ್ಣುವರ್ಧನ್ ರ ಆತ್ಮೀಯ, ಹಿರಿಯ ನಟ ಶಿವರಾಮ್ ಅವರು , "ವಿಷ್ಣುವರ್ಧನ್ ಸಂಪತ್ ಕುಮಾರ್ ಹೆಸರಿನಲ್ಲಿ ಕಾಲೇಜಿನಲ್ಲಿದ್ದ ದಿನಗಳಿಂದಲೇ ನನಗೆ ಪರಿಚಿತ. ಚಿತ್ರರಂಗಕ್ಕೆ ಬಂದಮೇಲೆ ಆತ್ಮೀಯನಾದ. ಆತನ ನಿಧನ ಅನಿರೀಕ್ಷಿತವಾಗಿತ್ತು. ಆದರೆ ಅಭಿಮಾನಿಗಳು ಇಂದಿಗೂ‌ ವಿಷ್ಣುವನ್ನು ಜೀವಂತವಾಗಿರಿಸಿದ್ದಾರೆ. ಆತನಿಗಾಗಿ ಇದುವರೆಗೆ ತಾವು ಆಗಸದಲ್ಲಿ ಮಾತ್ರ ಕಂಡಿದ್ದ ವಿಮಾನದಲ್ಲಿ ಖುದ್ದಾಗಿ ಟಿಕೆಟ್ ಗಳನ್ನು ಕಾಯ್ದಿರಿಸಿದ್ದಾರೆ. ರೈಲ್ವೇ ಟಿಕೆಟ್ ಗಳನ್ನು ಕೂಡ ಬುಕ್ ಮಾಡಿದ್ದು ಬೋಗಿಗಳು‌ ತುಂಬಿರುವುದು ಅವರ ಅವರ ಅಭಿಮಾನಕ್ಕೆ ಸಾಕ್ಷಿಯಾಗಿದೆ" ಎಂದರು. ವಿಷ್ಣುವರ್ಧನ್ ಅಭಿಮಾನಿ ತಿಮ್ಮೇಗೌಡರು ಉಪಸ್ಥಿತರಿದ್ದರು.

ವಿಶೇಷ ಕಾರ್ಯಕ್ರಮಗಳು

ಬೆಳಿಗ್ಗೆ 7ಕ್ಕೆ ಜಾನಪದ ಕಲಾ ತಂಡಗಳೊಂದಿಗೆ ಡಾ.ವಿಷ್ಣುವರ್ಧನ್ ಭಾವಚಿತ್ರ ಮೆರವಣಿಗೆ.

9 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮನು ಬಳಿಗಾರ್ ಅವರಿಂದ ನಟ ಡಾ.ವಿಷ್ಣುವರ್ಧನ್ ಪ್ರತಿಮೆಯ ಅನಾವರಣ.

10 ಗಂಟೆಗೆ ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ ಎ ನಾರಾಯಣ ಗೌಡರಿಂದ.

10 ಗಂಟೆಗೆ ಸಾಹಿತಿ ಪುರುಷೋತ್ತಮ ಬಿಳಿಮಲೆಯವರಿಂದ ಸಮಾರಂಭದ ಉದ್ಘಾಟನೆ.

ಕನ್ನಡ ಸಾಂಸ್ಕೃತಿಕ ಲೋಕಕ್ಕೆ ವಿಷ್ಣುವರ್ಧನ್ ಕೊಡುಗೆಯ ಬಗ್ಗೆ ಸಿನಿಮಾ ಪತ್ರಕರ್ತರಿಂದ ಅಭಿಪ್ರಾಯ ಮಂಡನೆ.

ಅಪರಾಹ್ನ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಷ್ಣುವರ್ಧನ್ ಚಿತ್ರಗಳ‌ ವಿಶೇಷ ರಸಮಂಜರಿ.

ಇವಿಷ್ಟು ಉತ್ಸವದ ವಿಶೇಷತೆಗಳಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಚಲನಚಿತ್ರ ಅಕಾಡೆಮಿಯ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ  ಸಾ ರಾ ಗೋವಿಂದು, ರಾಜೇಂದ್ರ ಸಿಂಗ್ ಬಾಬು, ಆದಿತ್ಯ, ತಾರಾ, ಚರಣ್ ರಾಜ್, ಶೋಭರಾಜ್, ಸಾಧುಕೋಕಿಲ, ರಾಗಿಣಿ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಪಾಲ್ಗೊಳ್ಳಲಿದ್ದಾರೆ.

share
ಶಶಿಕರ ಪಾತೂರು
ಶಶಿಕರ ಪಾತೂರು
Next Story
X