Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಪ್ರಥಮ:...

ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಪ್ರಥಮ: ಆರ್.ವಿ.ದೇಶಪಾಂಡೆ

ವಾರ್ತಾಭಾರತಿವಾರ್ತಾಭಾರತಿ23 Aug 2017 6:52 PM IST
share
ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಪ್ರಥಮ: ಆರ್.ವಿ.ದೇಶಪಾಂಡೆ

ಬೆಂಗಳೂರು, ಆ.23: ಬಂಡವಾಳ ಹೂಡಿಕೆ ಉದ್ದೇಶಿತ ಸ್ಥಾನದಲ್ಲಿ ಕರ್ನಾಟಕವು ಪ್ರಥಮ ಸ್ಥಾನವನ್ನು ಸತತ ಎರಡನೆ ವರ್ಷವು ಉಳಿಸಿಕೊಂಡಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರಕಾರದ ಕೈಗಾರಿಕಾ ನೀತಿ ಮತ್ತು ಪ್ರೋತ್ಸಾಹ ಇಲಾಖೆಯ ಪ್ರಕಾರ ರಾಜ್ಯವು ಬಂಡವಾಳ ಹೂಡಿಕೆ ಉದ್ದೇಶ ಶ್ರೇಣಿಯಲ್ಲಿ 2013ರಲ್ಲಿ 11ನೆ ಸ್ಥಾನದಲ್ಲಿತ್ತು. 2014 ಹಾಗೂ 2015ರಲ್ಲಿ ಕ್ರಮವಾಗಿ 5 ಮತ್ತು 4ನೆ ಸ್ಥಾನದಲ್ಲಿ ಗುರುತಿಸಿಕೊಂಡಿತ್ತು ಎಂದರು.

2016ರಲ್ಲಿ 1,54,173 ಕೋಟಿ ರೂ.ಬಂಡವಾಳ ಹೂಡಿಕೆ ಉದ್ದೇಶಿತ ಸ್ಥಾನದಲ್ಲಿ ರಾಜ್ಯವು ಪ್ರಥಮ ಸ್ಥಾನವನ್ನು ಪಡೆದಿದ್ದು, 2017ನೆ ಸಾಲಿನಲ್ಲಿ ಜೂನ್‌ವರೆಗೆ 1,40,683 ಕೋಟಿ ರೂ.ಬಂಡವಾಳ ಹೂಡಿಕೆ ಉದ್ದೇಶ ಹೊಂದಿ ಮೊದಲನೆ ಸ್ಥಾನವನ್ನು ಉಳಿಸಿಕೊಂಡಿದೆ ಎಂದು ದೇಶಪಾಂಡೆ ಸಂತಸ ವ್ಯಕ್ತಪಡಿಸಿದರು.

ಕೈಗಾರಿಕಾ ನೀತಿ 2014-19ರ ಪ್ರಕಾರ ನೀತಿಯ ಅವಧಿಯಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳವನ್ನು ಆಕರ್ಷಿಸುವುದರೊಂದಿಗೆ 15 ಲಕ್ಷ ಜನರಿಗೆ ಉದ್ಯೋಗಾವ ಕಾಶ ನೀಡುವ ಗುರಿಯನ್ನು ಹೊಂದಿದ್ದೇವೆ. ಕಳೆದ ನಾಲ್ಕು ವರ್ಷಗಳಲ್ಲಿ 1823 ಕೈಗಾರಿಕಾ ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಗಳಲ್ಲಿ ಅನುಮೋದನೆ ನೀಡಲಾಗಿದ್ದು, ರಾಜ್ಯಕ್ಕೆ 3.34 ಲಕ್ಷ ಕೋಟಿ ರೂ.ಬಂಡವಾಳ ಹೂಡಿಕೆಯಾಗಲಿದ್ದು, 8.98 ಲಕ್ಷ ಜನರಿಗೆ ಉದ್ಯೋಗ ದೊರಕಲಿದೆ ಎಂದು ಅವರು ಹೇಳಿದರು.

ಉದ್ಯೋಗ ಸೃಷ್ಟಿಯು ಇಂದಿನ ಬಹುದೊಡ್ಡ ಸವಾಲಾಗಿದೆ. ಕ್ಷಿಪ್ರಗತಿಯಲ್ಲಿ ಉಂಟಾಗುತ್ತಿರುವ ಆಟೋಮೇಷನ್ ಮತ್ತು ಡಿಜಿಟಲೀಕರಣದಿಂದ ಅಪಾರ ಸಂಖ್ಯೆಯ ಉದ್ಯೋಗಕ್ಕೆ ಸಂಚಕಾರ ಉಂಟಾಗಿದೆ. ಕೇಂದ್ರದ ಎನ್‌ಡಿಎ ಸರಕಾರ ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿತ್ತು. ಆದರೆ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ಸಮೀಕ್ಷೆಯ ಪ್ರಕಾರ ನಮ್ಮ ದೇಶದಲ್ಲಿ ಪ್ರತಿ ವರ್ಷ ಶೇ.60ಕ್ಕಿಂತ ಹೆಚ್ಚಿನ ಇಂಜಿನಿಯರಿಂಗ್ ಪದವೀಧರರು ನಿರುದ್ಯೋಗಿಗಳಾಗುತ್ತಿದ್ದಾರೆ ಎಂದು ದೇಶಪಾಂಡೆ ತಿಳಿಸಿದರು.

ರಾಜ್ಯ ಸರಕಾರವು ಹೆಚ್ಚಿನ ಉದ್ಯೋಗ ನೀಡುವ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡಲು ಕಾರ್ಮಿಕರ ಬೇಡಿಕೆಯಂತೆ ಗೊಂಬೆ ತಯಾರಿಕೆ, ಮೊಬೈಲ್‌ಫೋನ್, ಟ್ಯಾಬ್‌ಲೆಟ್, ಇಲೆಕ್ಟ್ರಾನಿಕ್ ಪರಿಕರಗಳು ಮತ್ತು ಜೋಡಣೆ ಕೈಗಾರಿಕೆಗಳ ಹೆಚ್ಚಳಕ್ಕೆ ಹೊಸ ನೀತಿಯನ್ನು ಶೀಘ್ರವೆ ಜಾರಿಗೆ ತರಲಿದೆ ಎಂದು  ಹೇಳಿದರು.

2438 ಕೋಟಿ ರೂ. ಬಂಡವಾಳ ಹೂಡಿಕೆಯ 9697 ಉದ್ಯೋಗ ಸೃಷ್ಟಿಸುವ ಓರಾಕಲ್ ಇಂಡಿಯಾ ಸಂಸ್ಥೆಯ ಯೋಜನೆ ಹಾಗೂ 112 ಕೋಟಿ ರೂ.ಬಂಡವಾಳ ಹೂಡಿಕೆಯ 50 ಉದ್ಯೋಗ ಸೃಷ್ಟಿಸುವ ವಿಪ್ರೋ ಸಂಸ್ಥೆಯ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದ ಯೋಜನೆಗೆ ಸರಕಾರ ಅನುಮೋದನೆ ನೀಡಿದೆ ಎಂದು ಳಿಸಿದರು.

ಇನ್ನುಳಿದಂತೆ ಟಿವಿಎಸ್ ಸಂಸ್ಥೆಯ 1110 ಕೋಟಿ ರೂ., ಮಂಗಳೂರು ರಿಫೈನರಿ ಅಂಡ್ ಪೆಟ್ರೊಕೆಮಿಕಲ್ಸ್‌ನ 966 ಕೋಟಿ ರೂ., ಐಕೆಇಎ ಸಂಸ್ಥೆಯ 810 ಕೋಟಿ ರೂ., ಸ್ಯಾಪ್‌ಲ್ಯಾಬ್ಸ್ ಸಂಸ್ಥೆಯ 499 ಕೋಟಿ ರೂ., ಏಸ್‌ಬ್ರೈಟ್ ಸಂಸ್ಥೆಯ 492 ಕೋಟಿ ರೂ. ಸೇರಿದಂತೆ 13 ಸಂಸ್ಥೆಗಳ ಯೋಜನೆಗಳಿಗೆ ಸೆಪ್ಟಂಬರ್‌ನಲ್ಲಿ ಅನುಮೋದನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಚೆನ್ನೈ-ಬೆಂಗಳೂರು-ಚಿತ್ರದುರ್ಗ ಕೈಗಾರಿಕಾ ಕಾರಿಡಾರ್ ಯೋಜನೆಯಡಿ ತುಮಕೂರು ಜಿಲ್ಲೆಯ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 9629 ಎಕರೆ ಪ್ರದೇಶದಲ್ಲಿ ತುಮಕೂರು ಕೈಗಾರಿಕಾ ನೋಡ್, 540 ಎಕರೆಯಲ್ಲಿ 425 ಕೋಟಿ ರೂ.ವೆಚ್ಚದಲ್ಲಿ ಮೆಷಿನ್ ಟೂಲ್‌ಪಾರ್ಕ್ ಹಾಗೂ ಜೆಟ್ರೋ ಸಲಹೆಯೊಂದಿಗೆ 500 ಎಕರೆ ಪ್ರದೇಶದಲ್ಲಿ ಜಾಪನೀಸ್ ಕೈಗಾರಿಕಾ ಟೌನ್‌ಶಿಪ್ ಸ್ಥಾಪಿಸಲಾಗುತ್ತಿದೆ ಎಂದರು.

ಹೂಡಿಕೆದಾರರ ಸಮಾವೇಶ: ಎಂಎಸ್‌ಎಂಇ ಮತ್ತು ಬೃಹತ್ ಕೈಗಾರಿಕೆಗಳನ್ನು ಒಂದೆಡೆ ತಂದು ಎಂಎಸ್‌ಎಂಇ ಘಟಕಗಳಿಗೆ ಮಾರುಕಟ್ಟೆ ಬೆಂಬಲ ಸೇವೆಯನ್ನು ನೀಡಲು ನವೆಂಬರ್ 23 ಹಾಗೂ 24ರಂದು ರಾಜ್ಯ ಸರಕಾರವು ರಾಷ್ಟ್ರೀಯ ಮಾರಾಟಗಾರರ ಮತ್ತು ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸುತ್ತಿದೆ ಎಂದು ದೇಶಪಾಂಡೆ ತಿಳಿಸಿದರು.

ಬೆಂಗಳೂರನ್ನು ವಿದ್ಯುತ್ ವಾಹನಗಳ ರಾಜಧಾನಿಯಾಗಿ ಮತ್ತು ರಾಜ್ಯವನ್ನು ಪರಿಸರ ಸ್ನೇಹಿ ಮಾಡಲು ರಾಜ್ಯ ಸರಕಾರವು ‘ನೂತನ ವಿದ್ಯುತ್ ವಾಹನ ಮತ್ತು ಇಂಧನ ಸಂಗ್ರಹಣಾ ನೀತಿ’ಯನ್ನು ರೂಪಿಸುತ್ತಿದೆ. ಈ ಮಾದರಿಯ ನೀತಿಯನ್ನು ಹೊಂದಲಿರುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ನಮ್ಮ ಪಾಲಾಗಲಿದೆ.

ಆರ್.ವಿ.ದೇಶಪಾಂಡೆ, ಬೃಹತ್ ಕೈಗಾರಿಕಾ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X