Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊನ್ನಾವರ: ಅಧ್ಯಕ್ಷ, ಉಪಾಧ್ಯಕ್ಷ ಸೇರಿ...

ಹೊನ್ನಾವರ: ಅಧ್ಯಕ್ಷ, ಉಪಾಧ್ಯಕ್ಷ ಸೇರಿ ಮೂವರ ಸದಸ್ಯತ್ವವನ್ನು ಊರ್ಜಿತಗೊಳಿಸಿದ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ23 Aug 2017 9:25 PM IST
share
ಹೊನ್ನಾವರ: ಅಧ್ಯಕ್ಷ, ಉಪಾಧ್ಯಕ್ಷ ಸೇರಿ ಮೂವರ ಸದಸ್ಯತ್ವವನ್ನು ಊರ್ಜಿತಗೊಳಿಸಿದ ಜಿಲ್ಲಾಧಿಕಾರಿ

ಹೊನ್ನಾವರ, ಆ. 23:  `ಹೊನ್ನಾವರ ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದ ದೂರಿನ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಗಳು. ಅಧ್ಯಕ್ಷ, ಉಪಾಧ್ಯಕ್ಷ ಸೇರಿ ಮೂವರ ಸದಸ್ಯತ್ವ ಊರ್ಜಿತಗೊಳಿಸಿ ಆದೇಶ ಹೊರಡಿಸಿರುವುದು ಸತ್ಯಕ್ಕೆ ಸಂದ ಜಯವಾಗಿದೆ' ಎಂದು ಪ.ಪಂ ಅಧ್ಯಕ್ಷೆ ಜೈನಾಬಿ ಸಾಬ್ ಹೇಳಿದರು.

    ನಾವು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ನಾವು ಯಾವುದೇ ಪಕ್ಷದ ಚುನಾವಣಾ ವಿಪ್ ಉಲ್ಲಂಘನೆ ಮಾಡಿಲ್ಲ. ಆದರೂ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೆಗಡೆ ಕಡತೋಕಾ ಹಾಗೂ ಸದಸ್ಯರಾದ ರಾಜಶ್ರೀ ಬಾಲಚಂದ್ರ ನಾಯ್ಕ ಮತ್ತು ಜಮಿಲಾ ಶೇಖ್ ಇವರು ಪಕ್ಷದ ವಿಪ್ ಉಲ್ಲಂಘಿಸಿರುವುದಾಗಿ ಆರೋಪಿಸಿ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ನಾಲ್ಕು ಸದಸ್ಯರಾದ ಜೈನಾಬಿ ಸಾಬ್, ಶರಾವತಿ ಮೇಸ್ತ, ಉದಯ ಮರ್ತು ನಾಯ್ಕ, ಸುರೇಶ ಮೇಸ್ತ ಇವರನ್ನು ಅನರ್ಹಗೊಳಿಸಲು ದೂರು ನೀಡಿದ್ದರು.

ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಕರ್ನಾಟಕ ಸ್ಥಳೀಯ ಸಂಸ್ಥೆಗಳ ಕಾಯ್ದೆ 1987ರ ಸೆಕ್ಷನ್ 1 (ಬಿ) ಅನ್ವಯ ವಿಚಾರಣೆ ನಡೆಸಿದ್ದು, ವಿಪ್ ಉಲ್ಲಂಘಿಸಿದ್ದಾರೆಂದು ಸುರೇಶ ಮೇಸ್ತ ಅವರನ್ನು ಅನರ್ಹಗೊಳಿಸಿ ಆದೇಶ ಹೊರಬಂದಿದೆ. ಇದು ನಮಗೆ ಬೇಸರ ತಂದಿದೆ. ಅವರ ಸಹಿ ಸಾಕ್ಷಿಯಾಗಿರುವುದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. ಆದರೆ ಅದು ನಕಲಿ ಸಹಿ ಎಂದು ಸುರೇಶ ಮೇಸ್ತ ನಮಗೆ ತಿಳಿಸಿದ್ದಾರೆ. ಈ ಬಗ್ಗೆ ನ್ಯಾಯಾಲಯದಲ್ಲಿ ಹೋರಾಟ ಕೈಗೆತ್ತುಕೊಳ್ಳಲಾಗುವುದು. ಹೋರಾಟದ ಮೂಲಕ ಅವರ ಸದಸ್ಯತ್ವವನ್ನು ಮರುಪಡೆಯುವ ವಿಶ್ವಾಸ ನಮಗಿದೆ ಎಂದರು.

    ಉಳಿದ ಮೂವರು ಸದಸ್ಯರ ವಿರುದ್ಧ ಸಮರ್ಪಕವಾದ ಸಾಕ್ಷಿ ಇಲ್ಲದ ಕಾರಣ ಸದಸ್ಯತ್ವ ಅನರ್ಹತೆಯನ್ನು ವಜಾಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಸಹಕರಿಸಿದ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕಿ ಶಾರದಾ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ ಪಕ್ಷಾತೀತವಾಗಿ ನಮ್ಮನ್ನು ಬೆಂಬಲಿಸಿದ ಪ.ಪಂ ಸದಸ್ಯರುಗಳಿಗೆ ಪಕ್ಷದ ಮುಖಂಡರುಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ಹೊನ್ನಾವರ ಪ.ಪಂ ಗೆ ವಿಶೇಷ ಅನುದಾನವನ್ನು ಶಾಸಕಿ ಶಾರದಾ ಶೆಟ್ಟಿ ಅವರು 5 ಕೋಟಿ ರೂ. ಹಾಗೂ ಉಸ್ತುವಾರಿ ಸಚಿವರು ಅಲ್ಪಸಂಖ್ಯಾತ ನಿಗಮದಿಂದ 1.16 ಕೋಟಿ ರೂ. ಹಣವನ್ನು ಬಿಡುಗಡೆಗೊಳಿಸುವ ಭರವಸೆ ನೀಡಿದ್ದಾರೆ. ಈಗಾಗಲೇ ಪ.ಪಂ ಗೆ ಅಲ್ಪಸಂಖ್ಯಾತರ ನಿಗಮದಿಂದ ಪತ್ರವೂ ಬಂದಿದೆ ಎಂದರು.

    ಪ.ಪಂ ಸದಸ್ಯ ಉದಯ ಮರ್ತು ನಾಯ್ಕ ಮಾತನಾಡಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆಯಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೆಗಡೆ ಕಡತೋಕಾ ಅವರು ಬಿಳಿಯ ಹಾಳೆಯ ಮೇಲೆ ಸಹಿ ಹಾಕಲು ಒತ್ತಡ ತಂದಿದ್ದರು. ಆದರೆ ನಾನು ಆ ಒತ್ತಡಕ್ಕೆ ಮಣಿಯಲಿಲ್ಲ. ಬಿಳಿಯ ಹಾಳೆಯ ಮೇಲೆ ಸುರೇಶ ಮೇಸ್ತ ಸಹಿ ಹಾಕಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

ಪ.ಪಂ ಸದಸ್ಯರಾದ ಸಿ.ಜಿ.ನಾಯ್ಕ, ಎ.ಜಿ.ನಾಯ್ಕ, ಮಂಜುನಾಥ ಖಾರ್ವಿ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X