Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತನ್ನಲ್ಲಿ ಹೆಚ್ಚಿನ ಆತಂಕ, ದಿಗಿಲು...

ತನ್ನಲ್ಲಿ ಹೆಚ್ಚಿನ ಆತಂಕ, ದಿಗಿಲು ಹುಟ್ಟಿಸುತ್ತಿದೆ: ಮುಖ್ಯ ನ್ಯಾ. ಎಸ್.ಕೆ.ಮುಖರ್ಜಿ

ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯಲ್ಲಿ ಇಳಿಮುಖ

ವಾರ್ತಾಭಾರತಿವಾರ್ತಾಭಾರತಿ23 Aug 2017 10:36 PM IST
share
ತನ್ನಲ್ಲಿ ಹೆಚ್ಚಿನ ಆತಂಕ, ದಿಗಿಲು ಹುಟ್ಟಿಸುತ್ತಿದೆ: ಮುಖ್ಯ ನ್ಯಾ. ಎಸ್.ಕೆ.ಮುಖರ್ಜಿ

ಬೆಂಗಳೂರು, ಆ.23: ರಾಜ್ಯ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ ಪ್ರತಿದಿನ ಕಡಿಮೆಯಾಗುತ್ತಿರುವುದರಿಂದ ತನ್ನಲ್ಲಿ ಹೆಚ್ಚಿನ ಆತಂಕ ಮತ್ತು ದಿಗಿಲು ಹುಟ್ಟಿಸುತ್ತಿದೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಬೇಸರ ವ್ಯಕ್ತಪಡಿಸಿದ್ದಾರೆ. 

ನ್ಯಾಯಮೂರ್ತಿ ಅಶೋಕ ಬಿ.ಹಿಂಚಿಗೇರಿ ಅವರು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಬುಧವಾರ ಹೈಕೋರ್ಟ್‌ನಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಜ್ಯ ಹೈಕೋರ್ಟ್‌ನಲ್ಲಿ ಸೇವೆಯಿಂದ ನಿವೃತ್ತರಾಗುತ್ತಿರುವ ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚುತ್ತಿದೆ. ಪರಿಣಾಮ ಪ್ರತಿದಿನ ನ್ಯಾಯಾಮೂರ್ತಿಗಳ ಪ್ರಮಾಣ ಕುಸಿಯುತ್ತಿದೆ. ಆದರೆ, ನೂತನ ನ್ಯಾಯಮೂರ್ತಿಗಳ ಮಾತ್ರ ನೇಮಕವಾಗುತ್ತಿಲ್ಲ. ಇದೊಂದು ಆತಂಕಕಾರಿ ವಿಷಯವಾಗಿದ್ದು, ನನ್ನಲ್ಲಿ ದಿಗಿಲು ಹುಟ್ಟಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಅಪ್ರಾಪ್ತರು ಪಾಲ್ಗೊಳ್ಳುವ ಹೀನ ಅಪರಾಧ ಕೃತ್ಯಗಳ ವಿಚಾರಣೆಯ ಮೇಲ್ವಿಚಾರಣೆ ವಹಿಸುವ ಮಕ್ಕಳ ನ್ಯಾಯ ಮಂಡಳಿ ಸಮಿತಿ ಅಧ್ಯಕ್ಷರಾಗಿ ನ್ಯಾಯಮೂರ್ತಿ ಅಶೋಕ್ ಬಿ.ಹಿಂಚಿಗೇರಿ ಅವರು ಸಾಕಷ್ಟು ಉತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಹಾಗೆಯೇ, ನ್ಯಾಯಮೂರ್ತಿ ಹಿಂಚಿಗೇರಿ ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು.

ಬೆಂಗಳೂರು ವಕೀಲರ ಸಂಘ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮ ಸನ್ಮಾನ ಸ್ವೀಕರಿಸಿದ ಮಾತನಾಡಿದ ನ್ಯಾಯಮೂರ್ತಿ ಅಶೋಕ್ ಬಿ.ಹಿಂಚಿಗೇರಿ ಅವರು, ಹಸಿದವರ ಹೊಟ್ಟೆ ತಣಿಸಲು ವಕೀಲರು ಕಾನೂನು ಎಂಬ ಅಸ್ತ್ರವನ್ನು ಸೂಕ್ತವಾಗಿ ಬಳಸಬೇಕು. ಕಿರಿಯ ವಕೀಲರು ಪ್ರಾಮಾಣಿಕತೆ ಮತ್ತು ಮಾನವೀಯತೆಯಿಂದ ದುಡಿಯುವ ಮೂಲಕ ವಕೀಲಿ ವೃತ್ತಿಯ ಘನತೆ-ಗೌರವ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ಸಿ.ಶಿವರಾಮು, ಪ್ರಧಾನ ಕಾರ್ಯದರ್ಶಿ ಪುಟ್ಟೇಗೌಡ, ಖಜಾಂಚಿ ಪ್ರವೀಣ್ ಗೌಡ ಮತ್ತು ಉಪಾಧ್ಯಕ್ಷ ರಾಜು ಉಪಸ್ಥಿತರಿದ್ದರು.


ನಾನು ವಕೀಲನಾಗಿದ್ದಾಗ ಪ್ರಕರಣವೊಂದರಲ್ಲಿ ನನ್ನ ಕಕ್ಷಿದಾರ ಕಡು ಬಡವನಾಗಿದ್ದ. ನನಗೆ ಫೀಸು ನೀಡಲು ಆತನಲ್ಲಿ ಹಣವಿರಲಿಲ್ಲ. ಇದರಿಂದ ಗೋಣಿ ಚೀಲದಲ್ಲಿ ತನ್ನ ಮನೆಯಲ್ಲಿದ್ದ ದೊಡ್ಡ ಪಾತ್ರೆಯೊಂದನ್ನು ತುಂಬಿಕೊಂಡು ಬಂದು ನನಗೆ ನೀಡಿದ್ದರು. ಈ ಪಾತ್ರೆ ಏಕೆ ನೀಡುತ್ತೀರಿ ಎಂಬ ನನ್ನ ಪ್ರಶ್ನೆಗೆ ಉತ್ತರಿಸಿದ ಆತ, ನಿಮಗೆ ಫೀಸು ನೀಡಲು ನನ್ನಲ್ಲಿ ಹಣವಿಲ್ಲ. ಪಾತ್ರೆ ಅಡಮಾನವಿಟ್ಟರೆ ಮತ್ತೆ ಅದನ್ನು ಬಿಡಿಸಿಕೊಳ್ಳಲು ಹಣ ಜಮಾ ಮಾಡಲು ಕಷ್ಟವಾದೀತು ಎಂಬ ಕಾರಣಕ್ಕೆ ನೇರವಾಗಿ ಪಾತ್ರೆ ನಿಮಗೆ ಕೊಡಲು ತಂದಿದ್ದೇನೆ ಎಂದರು. ಇದರಿಂದ ಒಂದು ಕ್ಷಣ ನಾನು ವಿಚಲಿತನಾದೆ ಮತ್ತು ಆ ಬಡ ಕಕ್ಷಿದಾರನ ಪ್ರಾಮಾಣಿಕತೆ ಕಂಡು ಅವರ ಮೇಲೆ ನನಗೆ ಗೌರವ ಹೆಚ್ಚಾಯಿತು. ನನಗಿಂತ ಹಿರಿಯನಾಗಿದ್ದರಿಂದ ಆತನ ಕಾಲಿಗೆ ನಾನು ನಮಸ್ಕರಿಸಿದೆ.

 -ನ್ಯಾಯಮೂರ್ತಿ ಅಶೋಕ್ ಬಿ.ಹಿಂಚಿಗೇರಿ .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X