Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ದಶರಥ' ನೃತ್ಯ ಸಂಭ್ರಮ

'ದಶರಥ' ನೃತ್ಯ ಸಂಭ್ರಮ

ಶಶಿಕರ ಪಾತೂರುಶಶಿಕರ ಪಾತೂರು24 Aug 2017 9:50 AM IST
share
ದಶರಥ ನೃತ್ಯ ಸಂಭ್ರಮ

ಎಂ.ಎಸ್.ರಮೇಶ್ ನಿರ್ದೇಶನದಲ್ಲಿ ಪ್ರಥಮ ಬಾರಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸುತ್ತಿರುವ ಚಿತ್ರ 'ದಶರಥ'ದ ಚಿತ್ರೀಕರಣ ಭರದಿಂದ ಸಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಸುತ್ತಮುತ್ತ ನಡೆಯುತ್ತಿರುವ ಚಿತ್ರೀಕರಣದ ವೇಳೆ 'ವಾರ್ತಾಭಾರತಿ'ಗೆ ಕಂಡ ಸನ್ನಿವೇಶಗಳು ಹೀಗಿವೆ.

ಚಿತ್ರದಲ್ಲಿ ಕನ್ನಡದ ನವನಾಯಕಿ ಚೆಲುವೆ ಮೇಘಶ್ರೀ ರವಿಚಂದ್ರನ್ ‌ರ ಪುತ್ರಿಯ ಪಾತ್ರ ನಿರ್ವಹಿಸುತ್ತಿದ್ದಾರೆ. ಆಕೆ ಅಪಘಾತಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿರುವ ಸನ್ನಿವೇಶದಲ್ಲಿ ಆತಂಕದಿಂದ ಬಂದು ವೀಕ್ಷಿಸುವ ತಂದೆ ತಾಯಿಯಾಗಿ ರವಿಚಂದ್ರನ್ ಮತ್ತು ಸೋನಿಯಾ ಅಗರವಾಲ್ ನಟಿಸಿದ ದೃಶ್ಯಗಳನ್ನು ಈ‌ ಸಂದರ್ಭದಲ್ಲಿ ಚಿತ್ರೀಕರಿಸಲಾಯಿತು.

'ಚಂದು' ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರ ಗಮನ ಸೆಳೆದಿದ್ದ ಸೋನಿಯಾ ಅಗರವಾಲ್ ದೊಡ್ಡದೊಂದು ಅಂತರದ ಬಳಿಕ‌ ಚಂದನವನದತ್ತ ಮುಖ ಮಾಡಿದ್ದಾರೆ. ಚಿತ್ರದಲ್ಲಿ ಮೇಘ ಶ್ರೀ ಜೋಡಿಯಾಗಿ ಯುವನಟ ಅಭಿಲಾಷ್ ನಟಿಸುತ್ತಿದ್ದಾರೆ. ಅವರ ಸಹೋದರನ ಪಾತ್ರದಲ್ಲಿ ಮತ್ತೋರ್ವ ನಟ ಭರತ್ ಕಾಣಿಸಿಕೊಳ್ಳುತ್ತಿದ್ದಾರೆ.

ಸಾಮಾನ್ಯವಾಗಿ ರಾಮಾಯಣ ಓದಿದವರೆಲ್ಲರಿಗೂ ದಶರಥನ ನಾಲ್ಕು ಗಂಡುಮಕ್ಕಳ ಕತೆಯಷ್ಟೇ ತಿಳಿದಿರುತ್ತದೆ. ಆದರೆ ಚಿತ್ರದ ಮೂಲಕ ಎಂ.ಎಸ್.ರಮೇಶ್ ದಶರಥ ನ ಪುತ್ರಿಯ ಕತೆಯನ್ನು ಹೇಳುತ್ತಿದ್ದಾರೆ! ಚಿತ್ರದಲ್ಲಿ 'ರಕ್ತಕಣ್ಣೀರು' ಖ್ಯಾತಿಯ  ಅಭಿರಾಮಿ ವಿಶೇಷ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ.

ಇತ್ತೀಚೆಗಷ್ಟೇ ಬಿಡದಿ ಸಮೀಪ ಇನೋವೇಟಿವ್ ಸಿಟಿಯಲ್ಲಿ ಚಿತ್ರದ ಹಾಡಿನ ಚಿತ್ರೀಕರಣ ಅದ್ಧೂರಿಯಾಗಿ ನಡೆದಿತ್ತು. ಗುರುಕಿರಣ್ ಸಂಗೀತ ನಿರ್ದೇಶನದ ಹಾಡಿನಲ್ಲಿ ರವಿಚಂದ್ರನ್, ಸೋನಿಯಾ ಅಗರವಾಲ್ ಜೊತೆಗೆ ಮೇಘಶ್ರೀ ಸೇರಿದಂತೆ ಕಲಾವಿದರನೇಕರು ಪಾಲ್ಗೊಂಡಿದ್ದರು. ಈಗಾಗಲೇ ತೆಲುಗು ಚಿತ್ರಗಳಲ್ಲಿ ನಟಿಸುವ ಮೂಲಕ ಗುರುತಿಸಿಕೊಂಡಿರುವ ಕರಾವಳಿಯ ಕನ್ನಡತಿ ಮೇಘಶ್ರೀಗೆ ಈ ವಾರ ತೆರೆ ಕಾಣುತ್ತಿರುವ 'ಮಾರ್ಚ್ 22' ಪ್ರಥಮ ಕನ್ನಡ ಚಿತ್ರವಾಗಲಿದೆ. 'ದಶರಥ' ತಮ್ಮ ಬಹು ನಿರೀಕ್ಷಿತ ಚಿತ್ರ ಎನ್ನುವುದು ಅವರ ಅಭಿಮತ.

share
ಶಶಿಕರ ಪಾತೂರು
ಶಶಿಕರ ಪಾತೂರು
Next Story
X