ಹರ್ಯಾಣ, ಪಂಜಾಬ್, ಚಂಢೀಗಡದಲ್ಲಿ 72 ಗಂಟೆಗಳ ಕಾಲ ಮೊಬೈಲ್ ಇಂಟರ್ ನೆಟ್ ಇಲ್ಲ..!

ಹೊಸದಿಲ್ಲಿ , ಆ.24: ದೇರಾ ಸಚಾ ಸೌದಾದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 25ರಂದು ತೀರ್ಪು ಪ್ರಕಟವಾಗಲಿದ್ದು, ಈ ಹಿನ್ನೆಲೆಯಲ್ಲಿ ಹರ್ಯಾಣ, ಪಂಜಾಬ್ ಹಾಗೂ ಚಂಢೀಗಡದಲ್ಲಿ 72 ಗಂಟೆಗಳ ಕಾಲ ಮೊಬೈಲ್ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಪಂಜಾಬ್ ರಾಜ್ಯಪಾಲ ವಿ.ಪಿ. ಸಿಂಹ್ ಬದ್ನೋರ್ ನೇತೃತ್ವದಲ್ಲಿ ಹರ್ಯಾಣ, ಪಂಜಾಬ್ ಹಾಗೂ ಚಂಢೀಗಡದ ಸಮನ್ವಯ ಸಮಿತಿ ಸಭೆಯಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.
“ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 72 ಗಂಟೆಗಳ ಕಾಲ ಪಂಜಾಬ್, ಹರ್ಯಾಣ ಹಾಗೂ ಚಂಡೀಗಢದಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು” ಹರ್ಯಾಣ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.
ಮೊಬೈಲ್ ಇಂಟರ್ ನೆಟ್, ಡಾಟಾ ಸೇವೆಯನ್ನು ಸ್ಥಗಿತಗೊಳಿಸುವ ಸೂಚನೆಯನ್ನು ಈಗಾಗಲೇ ನೀಡಲಾಗಿದೆ ಎಂದವರು ಹೇಳಿದ್ದಾರೆ.
Next Story





