ಸಾಗರ: ಸೆ.3ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
ಸಾಗರ, ಆ.24: ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ 2017-18ನೆ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆ ಸೆ. 3ರಂದು ಬೆಳಗ್ಗೆ 9-30ಕ್ಕೆ ನೆಹರೂ ಮೈದಾನದಲ್ಲಿ ನಡೆಯಲಿದೆ.
ಅಂದು ನಡೆಯುವ ಸ್ಪರ್ಧೆಯಲ್ಲಿ ಪುರುಷರಿಗೆ 100ಮೀ., 200ಮೀ., 400 ಮೀ., 800 ಮೀ., 1500 ಮೀ., 5000 ಮೀ., ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, ಹರ್ಡಲ್ಸ್ ನಡೆಯಲಿದೆ. ಅಲ್ಲದೆ, ಗುಂಪು ಸ್ಪರ್ಧೆಯಲ್ಲಿ ವಾಲಿಬಾಲ್, ಕಬ್ಬಡ್ಡಿ, ಖೋಖೋ, ಬಾಲ್ ಬ್ಯಾಡ್ಮಿಟನ್ ಸ್ಪರ್ಧೆಗಳು ನಡೆಯಲಿದ್ದು, ಇದರ ಜೊತೆಗೆ ತಾಲೂಕು ಮಟ್ಟದಿಂದ ಜಿಲ್ಲಾಮಟ್ಟಕ್ಕೆ ವಿವಿಧ ಕ್ರೀಡೆಗಳಿಗೆ ಕೀಡಾಪಟುಗಳ ಆಯ್ಕೆ ನಡೆಯಲಿದೆ.
ಮಹಿಳೆಯರಿಗಾಗಿ 100ಮೀ., 200ಮೀ., 400 ಮೀ., 800 ಮೀ., 1500 ಮೀ., 3000 ಮೀ., ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, ಹರ್ಡಲ್ಸ್ ನಡೆಯಲಿದೆ.
ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಸ್ಪರ್ಧೆಯ ದಿನ ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಪ್ರಭಾರಿ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಎಚ್.ಜಿ.ಸುಬ್ರಹ್ಮಣ್ಯ ಭಟ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







