ಯಡಿಯೂರಪ್ಪರನ್ನು ಹಿಮ್ಮೆಟ್ಟಿಸಲು ರಾಜ್ಯ ಸರಕಾರಕ್ಕೆ ಅಸಾಧ್ಯ: ಹರತಾಳು ಹಾಲಪ್ಪ
.jpg)
ಸಾಗರ, ಆ.24: ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿರುವ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದ್ದು, ಇದರಲ್ಲಿ ಯಶಸ್ಸು ಪಡೆಯಲು ಕಾಂಗ್ರೆಸ್‍ನಿಂದ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು.
ಇಲ್ಲಿನ ಬಿಜೆಪಿ ವತಿಯಿಂದ ಬುಧವಾರ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಯಡಿಯೂರಪ್ಪ ವಿರುದ್ಧ ಸುಳ್ಳುದೂರು ದಾಖಲಿಸುತ್ತಿರುವುದನ್ನು ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಪಂಜಿನ ಮೆರವಣಿಗೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ನಮ್ಮ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಹುಲಿ ಅಲ್ಲ, ಅವರು ಸಿಂಹವಿದ್ದಂತೆ. ಸಿಂಹವನ್ನು ಮಣಿಸಲು ಕಾಂಗ್ರೆಸಿಗರಿಂದ ಖಂಡಿತಾ ಸಾಧ್ಯವಿಲ್ಲ. ಯಡಿಯೂರಪ್ಪ ಅವರು ಪಕ್ಷ ಕಟ್ಟುವ ವೇಗವನ್ನು ಸಹಿಸಲಾಗಿದೆ ಕಾಂಗ್ರೆಸಿಗರು ಸುಳ್ಳು ಪ್ರಕರಣಗಳನ್ನು ಹಾಕುವ ಮೂಲಕ ಸಮಯಹಾನಿ, ಧನಹಾನಿ, ಮಾನಹಾನಿ ಮಾಡುವ ಪ್ರಯತ್ನ ಮಾಡುತ್ತಿದೆ. ಇದಕ್ಕೆಲ್ಲಾ ಯಡಿಯೂರಪ್ಪ ಅವರು ಹೆದರುವುದಿಲ್ಲ. ಇಂತಹ ಸಂದರ್ಭದಲ್ಲಿ ನಾವು ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಆರ್.ಶ್ರೀನಿವಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ.ಮೇಘರಾಜ್, ತಾಲೂಕು ಅಧ್ಯಕ್ಷ ಪ್ರಸನ್ನ ಕೆರೆಕೈ, ಪ್ರಧಾನ ಕಾರ್ಯದರ್ಶಿಗಳಾದ ಗಣೇಶಪ್ರಸಾದ್, ಬಿ. ಮೋಹನ್, ಕಲಸೆ ಚಂದ್ರಪ್ಪ, ನಗರಸಭಾ ಸದಸ್ಯರಾದ ಅರವಿಂದ ರಾಯ್ಕರ್, ನಾಗರತ್ನ ಸಿ, ರಘುಪತಿ ಭಟ್, ಗಣೇಶ್ ಗಟ್ಟಿ, ಭರತ್ ಶೆಟ್ಟಿ, ಸತೀಶಬಾಬು ಇನ್ನಿತರರು ಹಾಜರಿದ್ದರು.







