Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈಲ್ವೆ ಇಲಾಖೆ ವಿರುದ್ಧ ಐಆರ್‌ಐಪಿಎ...

ರೈಲ್ವೆ ಇಲಾಖೆ ವಿರುದ್ಧ ಐಆರ್‌ಐಪಿಎ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 Aug 2017 7:52 PM IST
share
ರೈಲ್ವೆ ಇಲಾಖೆ ವಿರುದ್ಧ ಐಆರ್‌ಐಪಿಎ ಪ್ರತಿಭಟನೆ

ಬೆಂಗಳೂರು, ಆ.24: ರೈಲ್ವೆ ಇಲಾಖೆಯಲ್ಲಿ ಕೈಗೊಳ್ಳುತ್ತಿರುವ ಹಳೆಯ ಕಾಮಗಾರಿಗಳಿಗೆ ಜಿಎಸ್‌ಟಿ ಅಡಿಯಲ್ಲಿ ತೆರಿಗೆ ಪಾವತಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಪ್ರಧಾನಿ ನರೇಂದ್ರಮೋದಿ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಇಂಡಿಯನ್ ರೈಲ್ವೆ ಇನ್ಫ್ರಾಸ್ಟ್ರಕ್ಚರ್ ಪ್ರೊವೈಡರ್ಸ್‌ ಅಸೋಸಿಯೇಶನ್(ಐಆರ್‌ಐಪಿಎ) ಆಗ್ರಹಿಸಿದೆ.

ಬುಧವಾರ ನಗರದ ದಂಡು ರೈಲ್ವೆ ನಿಲ್ದಾಣದ ಹಿಂಭಾಗದಲ್ಲಿರುವ ನೈರುತ್ಯ ರೈಲ್ವೆ ಮುಖ್ಯ ಆಡಳಿತಾಧಿಕಾರಿ ಕಚೇರಿ(ನಿರ್ಮಾಣ) ಮುಂಭಾಗದಲ್ಲಿ ಐಆರ್‌ಐಪಿಎ ಪದಾಧಿಕಾರಿಗಳು ರೈಲ್ವೆ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಈ ವೇಳೆ ಐಆರ್‌ಐಪಿಎ ಪದಾಧಿಕಾರಿ ಹಯಾತ್ ಕಾರ್ಗಲ್ ಮಾತನಾಡಿ, ಜು.1ರಿಂದ ದೇಶಾದ್ಯಂತ ಜಿಎಸ್‌ಟಿ ಜಾರಿಗೆ ಬಂದಿದೆ. ರೈಲ್ವೆ ಕಾಮಗಾರಿಗಳು ಜಿಎಸ್‌ಟಿ ಪ್ರಕಾರ ಸೇವಾ ತೆರಿಗೆಯ ವ್ಯಾಪ್ತಿಯಲ್ಲಿ ಬರುತ್ತದೆ. ಈ ಸೇವೆಯ ಲಾಭವನ್ನು ಯಾರು ಪಡೆಯುತ್ತಾರೋ ಅವರೇ ತೆರಿಗೆಯನ್ನು ನೀಡಬೇಕು ಎಂದರು.

ನಾವು ಮಾಡುವ ಕಾಮಗಾರಿಯ ಲಾಭವನ್ನು ರೈಲ್ವೆ ಇಲಾಖೆಯವರು ಪಡೆಯುತ್ತಾರೆ. ನಮಗೆ ಶೇ.8-10ರಷ್ಟು ಲಾಭ ಬರುತ್ತದೆ. ಆದರೆ, ಅದಕ್ಕೆ ಶೇ.12ರಷ್ಟು ತೆರಿಗೆ ಪಾವತಿಸಿ ಎನ್ನುವುದು ಅವೈಜ್ಞಾನಿಕ. ಆದುದರಿಂದ, ಆ.20ರಿಂದ ದೇಶಾದ್ಯಂತ 16 ರೈಲ್ವೆ ವಲಯಗಳಲ್ಲಿ ಸುಮಾರು 1.10 ಲಕ್ಷ ಕೋಟಿ ರೂ. ಕಾಮಗಾರಿಯನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದು ತಿಳಿಸಿದರು.

ರೈಲ್ವೆ ಇಲಾಖೆಯು ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ, ಇನ್ನೆರಡು ದಿನಗಳಲ್ಲಿ ರೈಲುಗಳ ಸಂಚಾರದಲ್ಲಿಯೂ ವ್ಯತ್ಯಯ ಉಂಟಾಗಬಹುದು. ಈಗಾಗಲೇ ನಮ್ಮ ಬೇಡಿಕೆಗಳ ಕುರಿತು ಪ್ರಧಾನಿ ನರೇಂದ್ರಮೋದಿಗೂ ಪತ್ರ ಬರೆಯಲಾಗಿದೆ ಎಂದು ಹೇಳಿದರು.

ರೈಲ್ವೆ ಕಾಮಗಾರಿಗಳ ಗುತ್ತಿಗೆದಾರರ ಚಂದ್ರವೇಲು ಮಾತನಾಡಿ, ನಾವು ಟೆಂಡರ್ ಹಾಕಿರುವುದು ಹಳೆಯ ಯೋಜನೆಗಳಿಗೆ. ಆಗ ತೆರಿಗೆ ಪ್ರಮಾಣವು ಶೇ.2 ರಿಂದ 4ರಷ್ಟಿತ್ತು. ಇದೀಗ ತೆರಿಗೆ ಪ್ರಮಾಣ ಶೇ.12ರಷ್ಟು ಆಗಿದೆ. ಇಷ್ಟೊಂದು ವ್ಯತ್ಯಾಸದ ಹಣವನ್ನು ಭರಿಸಲು ನಮಗೆ ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಳೆಯ ಯೋಜನೆಗಳಿಗೆ ಹಳೆಯ ತೆರಿಗೆ ಪ್ರಮಾಣವನ್ನೇ ವಿಧಿಸಬೇಕು. ಇಲ್ಲದಿದ್ದರೆ, ವ್ಯತ್ಯಾಸದ ಹಣವನ್ನು ಕೇಂದ್ರ ಸರಕಾರವು ರೈಲ್ವೆ ಇಲಾಖೆಯ ಮೂಲಕ ಭರಿಸಿಕೊಳ್ಳಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಐಆರ್‌ಐಪಿಎ ಪದಾಧಿಕಾರಿಗಳಾದ ಸುರೇಶ್‌ಕುಮಾರ್ ರೆಡ್ಡಿ, ಎಂ.ವಿ.ಶಂಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X