ಸಾಲಬಾಧೆ: ರೈತ ಆತ್ಮಹತ್ಯೆ

ಮಂಡ್ಯ, ಆ.24: ಸಾlಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಪರೇಗೌಡನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಜವರೇಗೌಡ(60) ಎಂದು ತಿಳಿದು ಬಂದಿದೆ.
ಜವರೇಗೌಡರವರು ಕಿಕ್ಕೇರಿ ಕಾವೇರಿ ಗ್ರಾಮೀಣ ಬ್ಯಾಂಕ್‍ನಲ್ಲಿ 1 ಲಕ್ಷ ರೂ., ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳಿಂದ 1.5 ಲಕ್ಷ ರೂ. ಹಾಗೂ 3 ಲಕ್ಷ ರೂ. ಕೈಸಾಲ ಮಾಡಿದ್ದರು.
ಸಾಲಮಾಡಿದ ಹಣದಿಂದ ಕೊಳವೆ ಬಾವಿ ತೋಡಿಸಿ 3 ಎಕರೆಯಲ್ಲಿ ಕಬ್ಬು, ಇತರೆ ಬೆಳೆ ಬೆಳೆದಿದ್ದು, ಬರದಿಂದ ಕೊಳವೆಬಾವಿಯಲ್ಲಿ ಅಂತರ್ಜಲ ಕುಸಿತವಾಗಿ ಬೆಳೆ ಕಳೆದುಕೊಂಡಿದ್ದರು. ಇದರಿಂದ ಬೇಸತ್ತು ಜಮೀನಿನ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ.
ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ಜವರೇಗೌಡರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಬಗ್ಗೆ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





